
ಸಂಕ್ರಾಂತಿ ಹಬ್ಬ ಮತ್ತು ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಿಗೆ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುವ ನಿರೀಕ್ಷೆಯಿದೆ. ವಿಶೇಷವಾಗಿ ಉತ್ತರ ಮತ್ತು ದಕ್ಷಿಣ ಕರ್ನಾಟಕವನ್ನು ಸಂಪರ್ಕಿಸುವ ಪ್ರಮುಖ ಮಾರ್ಗಗಳಲ್ಲಿ ರೈಲುಗಳಿಗೆ ಭಾರೀ ಬೇಡಿಕೆ ಉಂಟಾಗುತ್ತಿರುವುದರಿಂದ, ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ನೈಋತ್ಯ ರೈಲ್ವೆ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಮತ್ತು ಬೆಳಗಾವಿ ನಡುವೆ ಮೂರು ಟ್ರಿಪ್‌ಗಳ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಇಲಾಖೆ ತೀರ್ಮಾನಿಸಿದೆ.
ಮೈಸೂರು–ಬೆಳಗಾವಿ ವಿಶೇಷ ರೈಲು (06285)
ಈ ವಿಶೇಷ ರೈಲು ಜನವರಿ 13, 16 ಮತ್ತು 23ರಂದು ರಾತ್ರಿ 8:40ಕ್ಕೆ ಮೈಸೂರಿನಿಂದ ಹೊರಟು, ಮರುದಿನ ಬೆಳಗ್ಗೆ 10:30ಕ್ಕೆ ಬೆಳಗಾವಿಗೆ ತಲುಪಲಿದೆ. ಹಬ್ಬದ ಸಮಯದಲ್ಲಿ ಉತ್ತರ ಕರ್ನಾಟಕದತ್ತ ತೆರಳುವ ಪ್ರಯಾಣಿಕರಿಗೆ ಇದು ಬಹಳ ಅನುಕೂಲಕರವಾಗಲಿದೆ.
ಬೆಳಗಾವಿ–ಮೈಸೂರು ವಿಶೇಷ ರೈಲು (06286)
ಮರಳುವ ಪ್ರಯಾಣಿಕರ ಸೌಲಭ್ಯಕ್ಕಾಗಿ ಬೆಳಗಾವಿಯಿಂದ ಮೈಸೂರಿಗೆ ವಿಶೇಷ ರೈಲು ಕೂಡ ವ್ಯವಸ್ಥೆ ಮಾಡಲಾಗಿದೆ. ಈ ರೈಲು ಜನವರಿ 15, 18 ಮತ್ತು 26ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಗ್ಗೆ 6:15ಕ್ಕೆ ಮೈಸೂರಿಗೆ ತಲುಪಲಿದೆ.
ನಿಲ್ದಾಣಗಳು
ಈ ವಿಶೇಷ ರೈಲುಗಳು ಎರಡೂ ದಿಕ್ಕುಗಳಲ್ಲಿ
ಮಂಡ್ಯ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಕಡೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಲ್ನಾವರ, ಲೋಂಡಾ ಹಾಗೂ ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತವೆ.
ಬೋಗಿಗಳ ವಿವರ
ಒಟ್ಟು 23 ಬೋಗಿಗಳನ್ನು ಒಳಗೊಂಡಿರುವ ಈ ವಿಶೇಷ ರೈಲಿನಲ್ಲಿ –
ಎಸಿ 2-ಟೈರ್ ಕಮ್ ಎಸಿ 3-ಟೈರ್ – 1 ಬೋಗಿ
ಎಸಿ 3-ಟೈರ್ – 3 ಬೋಗಿಗಳು
ಸ್ಲೀಪರ್ ಕ್ಲಾಸ್ – 13 ಬೋಗಿಗಳು
ಸಾಮಾನ್ಯ ದ್ವಿತೀಯ ದರ್ಜೆ – 4 ಬೋಗಿಗಳು
ಎಸ್‌ಎಲ್‌ಆರ್/ಡಿ – 2 ಬೋಗಿಗಳು ಇರಲಿವೆ.
ಹಬ್ಬದ ಸಂಭ್ರಮದ ನಡುವೆಯೂ ಸುಗಮ, ಸುರಕ್ಷಿತ ಮತ್ತು ಆರಾಮದಾಯಕ ಪ್ರಯಾಣಕ್ಕೆ ಈ ವಿಶೇಷ ರೈಲುಗಳು ಪ್ರಯಾಣಿಕರಿಗೆ ದೊಡ್ಡ ನೆರವಾಗಲಿವೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.
