ಭಕ್ತಾದಿಗಳು, ಸಾರ್ವಜನಿಕರು ಹಾಜರಾಗಲು ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಮನವ
ಸತ್ಯಕಾಮ ವಾರ್ತೆ ಯಾದಗಿರಿ:
ಗೌರವಾನ್ವಿತ ಉಚ್ಚ ನ್ಯಾಯಲಯದ ನಿರ್ದೇಶನದಂತೆ ರಾಯಚೂರು ಜಿಲ್ಲೆಯ ನಾರದಗಡ್ಡೆ ಮಠದ ಆಸ್ತಿ ನಿರ್ವಹಣೆ ಕುರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿಪ್ರಾಯ ಪಡೆಯಲು ಸೆಪ್ಟೆಂಬರ್ 22 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಏರ್ಪಡಿಸಿದ್ದು, ಆ ಗ್ರಾಮದ ಭಕ್ತಾದಿಗಳು, ಸಾರ್ವಜನಿಕರು ಹಾಜರಾಗಲು ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಮನವಿ ಮಾಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಪೀಠದ ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಪಿಟಿಷನ್ ಸಂಖ್ಯೆ 202656/2014 ಕ್ಕೆ ಸಂಬಂಧಿಸಿದಂತೆ ನಾರದಗಡ್ಡೆ ಮಠದ ಆಸ್ತಿ ನಿರ್ವಹಣೆ ಕುರಿತು ಯಾದಗಿರಿ ಜಿಲ್ಲಾಧಿಕಾರಿಯ ಕಚೇರಿಯ ಸಭಾಂಗಣದಲ್ಲಿ ಸಭೆ ಜರುಗಿಸಿ ಅಲ್ಲಿನ ಗ್ರಾಮದ, ಭಕ್ತಾದಿಗಳ ಹಾಗೂ ಸಾರ್ವಜನಿಕರ ಅಭಿಪ್ರಾಯವನ್ನು ಪಡೆದು ವರದಿಯನ್ನು ಸಲ್ಲಿಸುವಂತೆ ಸೂಚಿಸಿರುತ್ತಾರೆ.
ಸದರಿ ಮಠದ ಆಸ್ತಿ ನಿರ್ವಹಣೆಯ ಬಗ್ಗೆ ಅಭಿಪ್ರಾಯ ಪಡೆಯಲು ಸೆಪ್ಟೆಂಬರ್ 22 ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಅವಶ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ಅಧಿಕಾರಿಗಳು, ಮಠದ ಪೀಠಾಧಿಪತಿಗಳು, ಭಕ್ತಾದಿಗಳು ಹಾಗೂ ಸಾರ್ವಜನಿಕರು ತಮ್ಮ ಗುರುತಿನ ಚೀಟಿಯೊಂದಿಗೆ ಹಾಜರಾಗಲು ಜಿಲ್ಲಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 Total Visits: 22
Total Visits: 22 All time total visits: 31215
All time total visits: 31215
 
			 
                                 
                              
         
         
         
        
