ಸತ್ಯಕಾಮ ವಾರ್ತೆ ಯಾದಗಿರಿ:
2024-25ನೇ ಸಾಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಯಾದಗಿರಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಾರ್ಯಾಲಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಕಲಬುರಗಿ ವಿಭಾಗ ಮಟ್ಟದ 14/17 ವಯೋಮಿತಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳ ಥ್ರೋಬಾಲ್ ಕ್ರೀಡಾಕೂಟವನ್ನು ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 2024ರ ಡಿಸೆಂಬರ್ 2ರ ಸೋಮವಾರ ರಂದು ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪೂರ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್.ಮಧು ಬಂಗಾರಪ್ಪ, ಹಾಗೂ ಕರ್ನಾಟಕ ವಿಧಾನ ಪರಿಷತ್ತು ವಿರೋಧ ಪಕ್ಷದ ನಾಯಕಛಲವಾದಿ ಟಿ.ನಾರಾಯಣಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ನೆರವೇರಿಸುವರು.
ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅಧ್ಯಕ್ಷತೆ ವಹಿಸುವರು. ರಾಯಚೂರು ಲೋಕಸಭಾ ಸದಸ್ಯರು ಜಿ.ಕುಮಾರ ನಾಯಕ, ಕಲಬುರಗಿ ಲೋಕಸಭಾ ಸದಸ್ಯರು ರಾಧಾಕೃಷ್ಣ ದೊಡ್ಡಮನಿ, ವಿಧಾನ ಪರಿಷತ್ತು ಸದಸ್ಯರು ಬಿ.ಜಿ.ಪಾಟೀಲ್, ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ, ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕ ರಾಜಾ ವೇಣುಗೋಪಾಲ ನಾಯಕ, ಯಾದಗಿರಿ ನಗರಸಭೆ ಅಧ್ಯಕ್ಷರು ಕುಮಾರಿ ಲಲಿತಾ ಅನಪೂರ, ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ವಿನಾಯಕ ಮಾಲಿ ಪಾಟೀಲ್ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ, ಕಲಬುರಗಿ ಶಾಲಾ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತರು ಡಾ.ಆಕಾಶ ಎಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಗೌರವಾನ್ವಿತರಾಗಿ ಪಾಲ್ಗೊಳ್ಳುವರು.

