ಸತ್ಯಕಾಮ ವಾರ್ತೆ ವಡಗೇರಾ:
ಪಟ್ಟಣದ ಹಿಂದುಳಿದ ವರ್ಗದ ವಸತಿ ನಿಲಯದ ಸ್ನಾನಗೃಹ ಹಾಗೂ ಶೌಚಾಲಯ ಕಳಪೆ ಮಟ್ಟದ ಕಾಮಗಾರಿ ಮಾಡಿದ್ದಾರೆ ಎಂದು ಭೀಮ್ ಆರ್ಮಿ ತಾಲೂಕು ಅಧ್ಯಕ್ಷ ಮರೇಪ್ಪ ಊಳ್ಳೆಸೂಗುರ ಆರೋಪಿಸಿದ್ದಾರೆ.
ಸರಕಾರ ಬಡ ಮಕ್ಕಳ ಅನುಕೂಲಕ್ಕಾಗಿ ಲಕ್ಷಾನುಗಟ್ಟಲೆ ಹಣ ಖರ್ಚು ಮಾಡಿ ಸ್ನಾನ ಗ್ರಹ ಹಾಗೂ ಶೌಚಾಲಯ ನಿರ್ಮಾಣಕ್ಕೆ ಮುಂದಾಗಿದೆ ಆದರೆ ಗುತ್ತಿಗೆದಾರರು ಅಧಿಕಾರಿಗಳ ನಿರ್ಲಕ್ಷದಿಂದ ಸಮರ್ಪಕ ಕಾಮಗಾರಿ ನಡೆದಿಲ್ಲ ಅಲ್ಲಿ ಸರಿಯಾದ ನೀರಿನ ವ್ಯವಸ್ಥೆ ಮತ್ತು ಇನ್ನಿತರ ಮೂಲಭೂತ ಸೌಕರ್ಯಗಳನ್ನು ನೀಡದೆ ಮೋಸ ಮಾಡಿ ಬೋಗಸ್ ಬಿಲ್ ಎತ್ತಿಕೊಂಡಿದ್ದಾರೆ ಇದರಿಂದ ಅಲ್ಲಿನ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮಾಡಲು ತುಂಬಾ ತೊಂದರೆ ಆಗಿದೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳಿಗೆ ಸಮರ್ಪಕ ಮೂಲಭೂತ ಸೌಕರ್ಯಗಳು ಒದಗಿಸಬೇಕು ಒಂದು ವೇಳೆ ನಿರ್ಲಕ್ಷ ಮಾಡಿದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಭೀಮ್ ಆರ್ಮಿ ತಾಲೂಕು ಅಧ್ಯಕ್ಷ ಮರೇಪ್ಪ ಊಳ್ಳೆಸೂಗೂರು ಎಚ್ಚರಿಸಿದ್ದಾರೆ.

