ಸತ್ಯಕಾಮ ವಾರ್ತೆ ವಡಗೇರಾ:
ಡಾ. ಮಲ್ಲಿಕಾರ್ಜುನ್ ಖರ್ಗೆ ಜಿ ರವರು ದೇಶ ಕಂಡ ಧೀಮಂತ ನಾಯಕ ಕಲ್ಯಾಣ ಕರ್ನಾಟಕ ಭಾಗಕ್ಕೆ ಜೆ 371 ಕಲಾಂ ಜಾರಿಗೆ ತರುವ ಮೂಲಕ ಈ ಭಾಗದ ಜನರ ಬಾಳಿಗೆ ಬೆಳಕಾಗಿದ್ದಾರೆ ಎಂದು ಕಾಂಗ್ರೆಸ್ ಯುವ ಮುಖಂಡ ಸಾಬಣ್ಣ ಹಂಚಿನಾಳ ಹೇಳಿದರು.
ತಾಲೂಕಿನ ಕಾಡಮಗೇರಾ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಡಾ. ಮಲ್ಲಿಕಾರ್ಜುನ್ ಖರ್ಗೆ ರವರ 83 ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದಾಖಲೆಯ ಹತ್ತು ಬಾರಿ ಶಾಸಕರಾಗಿ, ಮೂರು ಬಾರಿ ಸಂಸದರಾಗಿ, ಕೇಂದ್ರ, ರಾಜ್ಯ ಸಚಿವರಾಗಿ, ರಾಜ್ಯಸಭೆ, ಲೋಕಸಭೆ, ವಿಧಾನಸಭೆಯಲ್ಲಿ ವಿರೋಧ ಪಕ್ಷಗಳ ನಾಯಕರಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಭಾರತಿಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ರಾಜ್ಯಸಭೆಯಲ್ಲಿನ ವಿರೋಧ ಪಕ್ಷದ ನಾಯಕರಾಗಿ ಹಲವು ಉನ್ನತ ಹುದ್ದೆಗಳನ್ನು ನಿಭಾಯಿಸಿದ ಏಕೈಕ ವ್ಯಕ್ತಿ ಅಂದರೆ ತಪ್ಪಾಗಲಾಗದು ದೇವರು ಅವರಿಗೆ ಇನ್ನಷ್ಟು ಆಯಸ್ಸು ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಈ ಸಮಯದಲ್ಲಿ ಹಾರೈಸಿದರು.
ಅವರ ಅಭಿಮಾನಿಗಳು ಕೇಕ್ ಕತ್ತರಿಸಿ. ಮಲ್ಲಿಕಾರ್ಜುನ್ ಖರ್ಗೆ ಜಿ ರವರ ಬ್ಯಾನರ್ ಗೆ ಹಾಲಿನ ಅಭಿಷೇಕ ಮಾಡಿ ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಕಾಂಗ್ರೆಸ್ ಮುಖಂಡರುಗಳಾದ ಚಂದ್ರಶೇಖರ್ ದೇಸಾಯಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ನಿಂಗಪ್ಪ, ದೊಡ್ಡಪ್ಪ ಕಾಡಮಗೇರಾ, ನಾಗಪ್ಪ ಉಲ್ಟಿ ,ಮಲ್ಲು ಯಾದವ್, ರೆಡ್ಡಿ ಆನೂರ, ಹಣಮಂತ ನಾಟೇಕಾರ, ದೇವೇಂದ್ರಪ್ಪ ದೊರೆ, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

