ಸತ್ಯಕಾಮ ವಾರ್ತೆ ಯಾದಗಿರಿ:
ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿರುವ ಭೂ ದಾಖಲೆಗಳ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಬೆಳಿಗ್ಗೆ ದಿಢೀರ್ ಭೇಟಿ ನೀಡಿ, ಕಚೇರಿಯ ಕೆಲಸಕಾರ್ಯಗಳು ಸರಿಯಾಗಿ ನಡೆಯುತ್ತಿವೆಯೇ ಎಂಬುದನ್ನು ಪರಿಶೀಲಿಸಲು ಲೋಕಾಯುಕ್ತ ಪಿಐ ರಾಜಶೇಖರ್ ಹಳಿಗೋಧಿ ಅವರ ನೇತೃತ್ವದಲ್ಲಿ ಈ ಪರಿಶೀಲನೆ ನಡೆದಿದೆ.
ಆ ಸಮಯದಲ್ಲಿ ಕಚೇರಿಯಲ್ಲಿದ್ದ ಬಾಕಿ ಉಳಿದ ಕಡತಗಳ ಪರಿಶೀಲನೆ ಕೈಗೊಳ್ಳಲಾಯಿತು. ಕೆಲ ದಾಖಲೆಗಳಲ್ಲಿ ವಿಳಂಬ ಹಾಗೂ ಅಪೂರ್ಣ ಮಾಹಿತಿಯಿರುವ ಕುರಿತು ಅಧಿಕಾರಿಗಳು ಗಮನಹರಿಸಿದರು ಎಂದು ಮೂಲಗಳು ತಿಳಿಸಿವೆ.
ಪರಿಶೀಲನೆ ವೇಳೆ ಸಿಬ್ಬಂದಿಗಳಾದ ಅಮರನಾಥ್, ಸಂತೋಷಮ್ಮ ಸೇರಿದಂತೆ ಇತರರು ಹಾಜರಿದ್ದರು.

