ಸತ್ಯಕಾಮ ವಾರ್ತೆ ಯಾದಗಿರಿ:
ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ತಾವು ಕೊಟ್ಟ ಮಾತಿನಂತೆಯೇ ಕೂಡಲೇ ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಬೇಕೆಂದು ಶಾಸಕ ಶರಣಗೌಡ ಕಂದಕೂರ ಆಗ್ರಹಿಸಿದ್ದರು.
ಗುರುವಾರ ಅಧಿವೇಶನದಲ್ಲಿ ಮಾತನಾಡಿದ ಅವರು, ಕಳೆದ 2024 ರ ಸೆ.17 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಬಂದಾಗ ಕೆಕೆ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಕುರಿತು ನೀಡಿದ ಭರವಸೆ ಇಂದಿಗೂ ಈಡೆರಿಸಿಲ್ಲ. ಕೆಕೆಆರ್ ಡಿಬಿಗೆ 224 ಇಂಜಿನಿಯರಗಳ ಅವಶ್ಯಕತೆ ಇದೆ.ಆದರೇ ಕೇವಲ 22 ಇಂಜಿನಿಯರಗಳು ಮಾತ್ರ ಇದ್ದಾರೆ.ಇದರಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ. ಕಾರಣ ಕೂಡಲೇ ಸಚಿವಾಲಯ ಸ್ಥಾಪನೆ ಮಾಡಬೇಕೆಂದು ಶಾಸಕರು ಒತ್ತಾಯಿಸಿದರು.
