ಯಾದಗಿರಿ: ಸರ್ಕಾರದ ಯೋಜನೆಗಳು ವಿವಿಧ ಇಲಾಖೆಗಳಿಂದ ಅನುಷ್ಟಾನಗೊಳ್ಳುತ್ತಿದ್ದು, ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಯಾದಗಿರಿ ಮತಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ ಅವರು, ಅಂಗನವಾಡಿ ಕೇಂದ್ರಗಳು ಹಾಗೂ ಸರ್ಕಾರಿ ಶಾಲೆಗಳಲ್ಲಿ ಪೌಷ್ಟಿಕ ಆಹಾರ, ಶುದ್ಧ ಕುಡಿಯುವ ನೀರು, ಶೌಚಾಲಯಗಳು, ಅಡಿಗೆ ಕೋಣೆಗಳು, ಆಟದ ಮೈದಾನ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೂಡ ನೀಡಬೇಕಾಗುತ್ತದೆ ಎಂದು ಹೇಳಿದರು.
ಅದಷ್ಟೇ ಅಲ್ಲದೆ, ದುರಸ್ತಿ ಅಥವಾ ಇನ್ನಿತರ ಅಭಿವೃದ್ಧಿ ಕಾರ್ಯಗಳು ಬಾಕಿ ಉಳಿದ ಶಾಲೆಗಳ ಪಟ್ಟಿ ತಯಾರಿಸಿ, ಶೀಘ್ರದಲ್ಲಿ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಬೇಕು ಎಂಬ ಸೂಚನೆಯನ್ನು ಕೂಡ ನೀಡಿದರು.
ಈ ಸಭೆಯಲ್ಲಿ ಕಾರ್ಯನಿರ್ವಹಣಾಧಿಕಾರಿಗಳು ಮಹಾದೇವ ಬಾಬಳಗಿ, ಬಸವರಾಜ್ ಶರಬೈ, ಮಲ್ಲಿಕಾರ್ಜುನ ಸಂಗವಾರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಬಸವರಾಜ್ ಐರಡ್ಡಿ ಹಾಗೂ ತಾಲ್ಲೂಕು ಮಟ್ಟದ ಇತರ ಅಧಿಕಾರಿಗಳು ಭಾಗವಹಿಸಿದ್ದರು.

