ಯಾದಗಿರಿ : ಜಿಲ್ಲೆಯ ವಡಗೇರಾ ತಾಲ್ಲೂಕಿನ ಹೈಯ್ಯಾಳ (ಬಿ) ಗ್ರಾಮದಲ್ಲಿ ಶ್ರೀ ಹೈಯ್ಯಾಳಲಿಂಗೇಶ್ವರ ಜಾತ್ರೆಯಲ್ಲಿ ಪ್ರಾಣಿ ಬಲಿ ಹಾಗೂ ಮದ್ಯಪಾನ ಮತ್ತು ಮದ್ಯ ಮಾರಾಟ 2025ರ ಆಗಸ್ಟ್ 9 ರಿಂದ 13ರ ಮಧ್ಯರಾತ್ರಿ ವರೆಗೆ ನಿಷೇಧ ಆದೇಶವನ್ನು ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಹೊರಡಿಸಿದ್ದಾರೆ.
ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020ರ ಹಾಗೂ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ವಡಗೇರಾ ತಾಲ್ಲೂಕಿನ ಹೈಯ್ಯಾಳ (ಬಿ) ಗ್ರಾಮದಲ್ಲಿ 2025ರ ಆಗಸ್ಟ್ 9 ರಿಂದ 13ರ ವರೆಗೆ ನಡೆಯಲಿರುವ ಶ್ರೀ ಹೈಯ್ಯಾಳಲಿಂಗೇಶ್ವರ ಜಾತ್ರೆಯಲ್ಲಿ ದೇವರ ಹೆಸರಲ್ಲಿ ಪ್ರಾಣಿ ಬಲಿ ಅಂದರೆ ಕುರಿ ಮತ್ತು ಕೋಣ ಬಲಿ ಕೊಡುವುದನ್ನು 2025ರ ಆಗಸ್ಟ್ 9 ರಿಂದ 13ರ ವರೆಗೆ ಶ್ರೀ ಹೈಯ್ಯಾಳಲಿಂಗೇಶ್ವರ ದೇವಸ್ಥಾನದ 5 ಕಿ.ಮೀ. ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ನಿಷೇಧಿಸಿ ಹಾಗೂ ಮದ್ಯಪಾನ ಮತ್ತು ಮದ್ಯ ಮಾರಾಟ ನಿಷೇಧಿಸಿ ಈ ಕೆಳಗಿನ ಅಂಶಗಳನ್ನು ಅನುಸರಿಸಲು ಆದೇಶಿಸಿದೆ.
ಯಾವುದೇ ಕಾರಣಕ್ಕೂ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ, 2020ರ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕು. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಹೈಯ್ಯಾಳ (ಬಿ) ಗ್ರಾಮದಲ್ಲಿ 2025ರ ಆಗಸ್ಟ್ 9 ರಿಂದ 13ರ ವರೆಗೆ ಶ್ರೀ ಹ್ಯೆಯ್ಯಾಳಲಿಂಗೇಶ್ವರ ದೇವಸ್ಥಾನದ 5 ಕಿ.ಮೀ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಶ್ರೀ ಹೈಯ್ಯಾಳಲಿಂಗೇಶ್ವರರ ಜಾತ್ರೆಯಲ್ಲಿ ದೇವರ ಹೆಸರಲ್ಲಿ ಪ್ರಾಣಿ ಬಲಿ ಕೊಡುವುದನ್ನು ನಿಷೇಧಿಸುವ ಸಂಬAಧವಾಗಿ ಈ ಗ್ರಾಮದ ಸುತ್ತಲೂ ಚೆಕ್ ಪೋಸ್ಟ್ಗಳನ್ನು ನಿರ್ಮಿಸಿ ಯಾರೂ ಪ್ರಾಣಿಗಳನ್ನು ಗ್ರಾಮದ ಒಳಗಡೆ ತೆಗೆದುಕೊಂಡು ಬರದಂತೆ ತಡೆಹಿಡಿಯಲು ಹಾಗೂ ಬಲಿ ಕೊಡುವುದನ್ನು ಕಡ್ಡಾಯವಾಗಿ ತಡೆಹಿಡಿಯುವಂತೆ ಕ್ರಮ ವಹಿಸಬೇಕು. ಈ ಗ್ರಾಮದಲ್ಲಿ ಈ ಕಾಯ್ದೆಯನ್ನು ಅನುಷ್ಠಾನಗೊಳಿಸುವ ಜವಾಬ್ದಾರಿಯನ್ನು ಸಂಬAಧಿಸಿದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಹೈಯ್ಯಾಳ (ಬಿ) ಇವರಿಗೆ ವಹಿಸಿಕೊಡಲಾಗಿದೆ. ಗ್ರಾಮದಲ್ಲಿ ಸೂಕ್ತ ಪೊಲೀಸ್ ಬಂದೊಬಸ್ತ್ ಒದಗಿಸಲು ಹಾಗೂ ಮುಂಜಾಗೃತ ಕ್ರಮಕೈಗೊಳ್ಳಬೇಕು, ಯಾದಗಿರಿ ಜಿಲ್ಲಾ ಪೊಲೀಸ್ ಅಧೀಕ್ಷಕರು, ಯಾದಗಿರಿ ಸಹಾಯಕ ಆಯಕ್ತರು, ಯಾದಗಿರಿ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆ ಉಪ ನಿರ್ದೇಶಕರು, ವಡಗೇರಾ ತಹಸೀಲ್ದಾರರು, ವಡಗೇರಾ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಇವರಿಗೆ ನಿರ್ದೇಶಿಸಿ ಆದೇಶಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

