ಬೆಂಗಳೂರು ನಗರ ಜಿಲ್ಲೆ, ಜುಲೈ 30 (ಕರ್ನಾಟಕ ವಾರ್ತೆ) ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ / ಸಲ್ಲಿಸುತ್ತಿರುವ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟ ಸೇವೆ ಸಲ್ಲಿಸಿರುವ / ಸಲ್ಲಿಸುತ್ತಿರುವ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ವೆಬ್ ಸೈಟ್ http://www.dwdsc.karnataka.gov.in ಗೆ ಭೇಟಿ ನೀಡಿ ಅರ್ಜಿಗಳನ್ನು ಪಡೆದು ಕನ್ನಡ ಭಾಷೆಯಲ್ಲಿ ದ್ವಿಪ್ರತಿಗಳಲ್ಲಿ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಿಗೆ ಅಕ್ಟೋಬರ್ 15,2025ರೊಳಗಾಗಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಸುಧಾರಣಾ ಸಂಸ್ಥೆಗಳ ಸಂಕೀರ್ಣ ಹೊಸೂರು ರಸ್ತೆ, ಬೆಂಗಳೂರು ನಗರ ಜಿಲ್ಲೆ-560 029 ಅಥವಾ ದೂರವಾಣಿ ಸಂಖ್ಯೆ : 080-29752324 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

