Category: State

  • ಜಿಲ್ಲೆಯ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಹಕರಿಸಿ

    ಜಿಲ್ಲೆಯ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಹಕರಿಸಿ

    ಯಾದಗಿರಿ : ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿಗೊಳಿಸಿ ಶಿಕ್ಷಣ ಮುಂದುವರಿಕೆಗೆ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಹಕರಿ ಎಂದು ಗೌರವಾನ್ವಿತ ನ್ಯಾಯಾಧೀಶರು ಹಾಗೂ ಸುರಪುರ ತಾಲ್ಲೂಕು ಕಾನೂನು ಸೇವಾ ಸಮಿತಿ ಬಸವರಾಜ ಅವರು ಹೇಳಿದರು.

         PAN-INDIA Rescue and Rehabilitation Campaign Program “A Step to Eradicate Child Labour” (PAN-INDIA  ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಒಂದು ಹೆಜ್ಜೆ) ಅಂಗವಾಗಿ ಪೂರ್ವಭಾವಿ ಸಭೆ ಹಾಗೂ ತಾಲ್ಲೂಕು ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ತಾಲ್ಲೂಕು ಮಟ್ಟದ ಕಾರ್ಯಪಡೆ ಸಮಿತಿ ಅವರು ಮಾತನಾಡಿ,

    ರಾಷ್ಟಿçÃಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ನವದೆಹಲಿ ಮತ್ತು ಕಾರ್ಮಿಕ ಆಯುಕ್ತರು ಬೆಂಗಳೂರು ರವರ ಸೂಚನೆಯಂತೆ,  PAN-INDIA Rescue and Rehabilitation Campaign Program A Step to Eradicate Child Labour (PAN-INDIA ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ- ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಒಂದು ಹೆಜ್ಜೆ) 2024ರ ಅಂಗವಾಗಿ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿಗೊಳಿಸಿ ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ 2024ರ ಅಕ್ಟೋಬರ್ 21 ರಿಂದ 2024ರ ನವೆಂಬರ್ 20ರ ವರೆಗೆ ರಕ್ಷಣಾ ಕಾರ್ಯಚರಣೆಗೆ ಸರಕಾರದ ಪ್ರತಿಯೊಂದು ಇಲಾಖೆಯು ಕೈಜೊಡಿಸಿದಾಗ ಮಾತ್ರ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಎಂಬ ಅನಿಷ್ಠ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂದು ತಿಳಿಸಿದರು.

         PAN-INDIA Rescue and Rehabilitation Campaign Program “A Step to Eradicate Child Labour” (PAN-INDIA  ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಒಂದು ಹೆಜ್ಜೆ) ಅಂಗವಾಗಿ ಪೂರ್ವಭಾವಿ ಸಭೆ ಹಾಗೂ ತಾಲ್ಲೂಕು ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ತಾಲ್ಲೂಕು ಮಟ್ಟದ ಕಾರ್ಯಪಡೆ ಸಮಿತಿ ಸಭೆಯ ಉಪ ತಹಸೀಲ್ದಾರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

    ಹುಣಸಗಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸಣ್ಣ ನಾಯಕ ಅವರು ಮಾತನಾಡಿ, ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಪ್ರತಿ ತಿಂಗಳು 15 ತಪಾಸಣೆ ಮತ್ತು ಹಠಾತ್ ದಾಳಿ, ತಪಾಸಣೆ ಆಯೋಜಿಸಿವುದು. ಮತ್ತು ಪ್ರತಿ ತಿಂಗಳು 2 ಕಾನೂನು ಅರಿವು-ನೆರವು ಮತ್ತು ಜನ ಜಾಗೃತಿ ಕಾರ್ಯಕ್ರಮ ಆಯೋಜಿಸುವುದು. ಶಾಲೆ ಬಿಟ್ಟು ಕೃಷಿ ಮತ್ತು ಇತರೆ ಕೆಲಸಗಳಿಗೆ ಮಕ್ಕಳು ಹೋಗದಂತೆ ಶಾಲಾ ಶಿಕ್ಷಕರಿಂದ ಪಾಲಕ ಪೋಷಕರಿಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

    ನಗರದ ಬಸ್ ನಿಲ್ದಾಣದಿಂದ ಕೆಂಭಾವಿ ಮುಖ್ಯ ರಸ್ತೆಯವರೆಗೂ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು, ಗ್ಯಾರೇಜ್‌ಗಳು ಮತ್ತು ಹೊಟೇಲ್‌ಗಳಲ್ಲಿ ಹಠಾತ್ ದಾಳಿ, ತಪಾಸಣೆ ನಡೆಸಿ ಬಾಲಕಾರ್ಮಿಕ ಮತ್ತು ಕಿಶೋರಕಾರ್ಮಿಕ ಮಕ್ಕಳನ್ನು ನೇಮಿಸಿಕೊಳ್ಳದಂತೆ ಕರಪತ್ರ ಹಾಗೂ ಪೋಸ್ಟರ್‌ಳನ್ನು ನೀಡುವುದರ ಮೂಲಕ ಜಾಗೃತಿ ಮೂಡಿಸಲಾಯಿತು.

    ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ  ರಿಯಾಜ್ ಪಟೇಲ್ ವರ್ಕನಳ್ಳಿ ಮಾತನಾಡಿ, ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಕಾರ್ಮಿಕ ಇಲಾಖೆಯಿಂದ ನಿರÀಂತರವಾಗಿ ಜನ-ಜಾಗೃತಿ, ಕಾನೂನು ಅರಿವು ನೆರವು ಕಾರ್ಯಕ್ರಮ, ಬೀದಿನಾಟಕ ಮತ್ತು ಆಟೋ ಪ್ರಚಾರ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಇದನ್ನು ಮೀರಿಯೂ ಸಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಅಂಗಡಿ ಮಾಲೀಕರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಾಗುವುದೆಂದು ತಿಳಿಸಿದರು.

    ಯಾದಗಿರಿ ಕಾರ್ಮಿಕ ನಿರೀಕ್ಷಕರಾದ ಶಿವಪ್ಪ ಜಮಾದಾರ್ ಮಾತನಾಡಿ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಂಡಲ್ಲಿ ಅಂತಹ ಅಂಗಡಿ ಮಾಲೀಕರ ವಿರುದ್ಧ ರೂ, 20,000 ರೂಗಳಿಂದ 50,000 ರೂ ಗಳವರೆಗೆ ದಂಡ ಮತ್ತು 6 ತಿಂಗಳಿAದ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನು ಸಹ ವಿಧಿಸಲಾಗುವುದು ಎಂದು ತಿಳಿಸಿದರು.

    ಹಠಾತ್ ದಾಳಿ ಸಂದರ್ಭದಲ್ಲಿ ಹುಣಸಗಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸಣ್ಣ ನಾಯಕ, ಕಂದಾಯ ಇಲಾಖೆಯ ಉಪ ತಹಸೀಲ್ದಾರರಾದ ಶ್ರೀಶೈಲ ಮುದ್ನೂರು, ಪೋಲಿಸ್ ಇಲಾಖೆಯ ಪಿ.ಎಸ್.ಐ ಚಂದ್ರಶೇಖರ, ಆರ್.ಎಸ್.ಐ ಭಾಗಣ್ಣ, ಸಮಾಜ ಕಲ್ಯಾಣ ಇಲಾಖೆಯ ಬಸವರಾಜ ಸಜ್ಜನ್, ಡಾನ್ ಬಾಸ್ಕೋ ಸಂಸ್ಥೆಯ ನಿರ್ದೇಶಕರಾದ ಡಾ.ಶಾಬು ಪ್ರಾನ್ಸಿಸ್, ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘ ಅಧ್ಯಕ್ಷ ಶಿವು ರಾಠೋಡ, ನಾಗಯ್ಯ ಭೋವಿವಡ್ಡರ, ಮಾರ್ಗದರ್ಶಿ ಸಂಸ್ಥೆಯ ತಾಯಮ್ಮ ಎಸ್, ಚನ್ನಮ್ಮ.ಎಸ್, ಕಾರ್ಮಿಕ ಇಲಾಖೆಯ ಎಲ್,ಎನ್ ಚೌದ್ರಿ, ರಮೇಶ ಕೆಲ್ಲೂರು, ಬಾಲುನಾಯಕ ಉಪಸ್ಥಿತರಿದ್ದರು.

  • ಯಾದಗಿರಿ: ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಂಸದ ಜಿ ಕುಮಾರ ನಾಯಕ ಭೇಟಿ

    ಯಾದಗಿರಿ: ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಂಸದ ಜಿ ಕುಮಾರ ನಾಯಕ ಭೇಟಿ

    • ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರೊಡನೆ ಪಕ್ಷದ ಬಲವರ್ಧನೆ ಬಗ್ಗೆ ಚರ್ಚೆ ಅಭಿಪ್ರಾಯ ಸಂಗ್ರಹ

    ಸತ್ಯಕಾಮ ವಾರ್ತೆ ಯಾದಗಿರಿ:

    ಮುಂಬರುವ ತಾಲ್ಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನ ಮಂತ್ರವನ್ನು ಜಪಿಸುವ ಮೂಲಕ ಪಕ್ಷವನ್ನು ಬಲವರ್ಧನೆ ಗೊಳಿಸಿ, ಅತಿ ಹೆಚ್ಚು ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯ ನಿರ್ವಹಿಸಬೇಕು ಎಂದು ರಾಯಚೂರು ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ ಕುಮಾರ ನಾಯಕ ಹೇಳಿದರು.

     

    ಶನಿವಾರ ಇಲ್ಲಿನ  ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾಂಗ್ರೆಸ್‌ನ ಹಿರಿಯ ಮುಖಂಡರೊಡನೆ ಸಭೆ ನಡೆಸಿ  ಅವರು ಮಾತನಾಡಿದರು. ಬಳಿಕ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು.

    ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಬಸರೆಡ್ಡಿ ಅನಪೂರ್, ರಾಘವೇಂದ್ರ ಮಾನಸಗಲ್ ,ಡಾ ಭೀಮಣ್ಣ ಮೇಟಿ, ಸೇರಿದಂತೆ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರು ಮಹಿಳಾ ಘಟಕದ ಕಾಂಗ್ರೆಸ್ ಅಧ್ಯಕ್ಷರು ಮಾಜಿ ಕಾಂಗ್ರೆಸ್ ಬ್ಲಾಕ್‌ ಅಧ್ಯಕ್ಷರು ಮಹಿಳಾ ಘಟಕದ ಘಟಕದ ಅಧ್ಯಕ್ಷರು ಉಪಾಧ್ಯಕ್ಷರು ಮುಂಚೂಣಿ ಘಟಕದ ಅಧ್ಯಕ್ಷರುಗಳು ಸೇರಿದಂತೆ ಕಾಂಗ್ರೆಸ್‌ ಹಿರಿಯ ಮುಖಂಡರು ಕಾರ್ಯಕರ್ತರು ಹಾಜರಿದ್ದರು..

  • ಗೆಸ್ಟ್ ಹೌಸ್ ನಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

    ಗೆಸ್ಟ್ ಹೌಸ್ ನಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

    ಸತ್ಯಕಾಮ ವಾರ್ತೆ ಕಲಬುರಗಿ:

    ನಗರದ ದರ್ಗಾ ಏರಿಯಾದಲ್ಲಿರುವ ಇಂಡಿಯನ್ ಗೆಸ್ಟ್ ಹೌಸ್ ನಲ್ಲಿ ಸಾಧಿಕಾ ಮನಿಯಾರ್ (25) ಎಂಬ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಪತಿ ಅಬ್ದುಲ್ ರಹೀಮ್ ಜೊತೆ ಕಲಬುರಗಿಯಲ್ಲಿರುವ ಖಾಜಾ ಬಂದೇ ನವಾಜ್ ದರ್ಗಾದ ಭೇಟಿ ನೀಡಲು ಕಲಬುರಗಿಗೆ ಆಗಮಿಸಿದ್ದರು

    ನಿನ್ನೆ ಸಂಜೆ ಪತ್ನಿಗೆ ಲಾಡ್ಜ್ ನಲ್ಲಿ ಬಿಟ್ಟು ಪತಿ ಅಬ್ದುಲ್ ರಹೀಮ್ ಅಧೋನಿಗೆ ತೆರಳಿದ್ದ, ಬೆಳಗಾಗುವಷ್ಟರಲ್ಲೆ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಈ ಘಟನೆ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

  • ಕಾಣೆಯಾದ ಮಹಿಳೆಯ ಪತ್ತೆಗೆ ಮನವಿ

    ಕಾಣೆಯಾದ ಮಹಿಳೆಯ ಪತ್ತೆಗೆ ಮನವಿ

    ಸತ್ಯಕಾಮ ವಾರ್ತೆ ಯಾದಗಿರಿ:

    ಜಿಲ್ಲೆಯ ಯಾದಗಿರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸದರ ದರ್ವಾಜ ನಗರದ ನುಸ್ಸರ್ತ ತಂದೆ ಮೈಹಿಬೂಬ ಕುರೇಶಿ ಕಾಣೆಯಾದ ಮಹಿಳೆ 2024ರ ನವೆಂಬರ್ 12ರ ಮಂಗಳವಾರ ರಂದು ಬೆಳಿಗ್ಗೆ ಮನೆಯಿಂದ ಊಟ ಮಾಡಿ ಹೊರಗಡೆ ಹೋದವಳು ಮರಳಿ ಮನೆಗೆ ಬಂದಿರುವುದಿಲ್ಲ ಹಿನ್ನೆಲೆ ಈ ಕುರಿತು ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ ಎಂದು ಯಾದಗಿರಿ ನಗರ ಪೊಲೀಸ್ ಠಾಣೆ ಠಾಣಾಧಿಕಾರಿ ಅವರು ತಿಳಿಸಿದ್ದಾರೆ.

    ಮನೆಯಲ್ಲಿ ಊಟ ಮಾಡಿ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ನಮ್ಮ ಅಕ್ಕ ಶಮಿಬೇಗಂ ಇವರ ಮನೆಗೆ ಊಟಕೊಟು ಬರಲು ನಮ್ಮ ತಾಯಿ ಕಳಿಸಿದ್ದು, ಇನ್ನೂ ಸಂಜೆ 6 ಗಂಟೆಯಾದರು ಇನ್ನೂ ಮನೆಗೆ ಬಂದಿರುವುದಿಲ್ಲ, ಅಂತ ನಮ್ಮ ಅಕ್ಕ ಶಮೀಬೇಗಂ ಇವರಿಗೆ ಪೋನ್ ಮಾಡಿ ವಿಚಾರಿಸಲಾಗಿ ನುಸ್ಸರ್ತ ನಮ್ಮ ಮನೆಗೆ ಇವತ್ತು ಬಂದಿರುವುದಿಲ್ಲ, ಅಂತ ತಿಳಿಸಿದಳು. ಆಗ ನಾನು ನಮ್ಮ ಅಕ್ಕ ಶಮೀಬೇಗಂ ನಮ್ಮ ತಾಯಿ ಎಲ್ಲಾರು ಗಾಬರಿಯಾಗಿ ಯಾದಗಿರಿ ನಗರದಲ್ಲಿ ಹುಡುಗಾಡಲಾಗಿ ಸಿಗದ ಕಾರಣ ನಮ್ಮ ಸಂಬAಧಿಕರಿಗೆ ನುಸ್ಸರ್ತ ಇಮ್ಮಲ್ಲಿಗೆ ಬಂದಿರುವ ಬಗ್ಗೆ ವಿಚಾರಿಸಲಾಗಿ ಬಂದಿರುವುದಿಲ್ಲ ಅಂತ ತಿಳಿಸಿದರು, ನಾವು 2024ರ ನವೆಂಬರ್ 12 ರಿಂದ ಇಲ್ಲಿಯ ವರೆಗೆ ನುಸ್ಸರ್ತಳು ಹುಡಿಕಾಡಿಲಾಗಿ ಇರುವಿಕೆ ಬಗ್ಗೆ ಯಾವುದೇ ಮಾಹಿತಿ ಬಂದಿರುವುದಿಲ್ಲ, ಇಂದು ತಡವಾಗಿ ಪೊಲೀಸ್ ಠಾಣೆಗೆ ಬಂದು ಫರ‍್ಯಾದಿ ಸಲ್ಲಿಸಿದ್ದು, ಇರುತ್ತದೆ.

    ಮಹಿಳೆಯ ಚಹರೆ ಪಟ್ಟಿ 25 ವರ್ಷ ಇದ್ದು, ಅಂದಾಜು 5 ಫೀಟ್ ಎತ್ತರ ಇದ್ದು, ನುಸ್ಸರ್ತ ಇವಳಿಗೆ ಮಾನಸಿಕ ಅಸ್ವಸಂತ್ತಾಳಾಗಿದ್ದಳು, ಕನ್ನಡ ಮತ್ತು ಹಿಂದಿ ಭಾಷೆ ಮಾತನಾಡುತ್ತಾನೆ. ಮಹಿಳೆಯ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಯಾದಗಿರಿ ನಗರ ಠಾಣೆಗೆ ಅಥವಾ ಯಾದಗಿರಿ ಮೊ.ನಂ.8147108970 ಕರೆ ಮಾಡಲು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಯಾದಗಿರಿ: ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಂಸದ ಜಿ ಕುಮಾರ ನಾಯಕ ಸಭೆ

    ಯಾದಗಿರಿ: ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಂಸದ ಜಿ ಕುಮಾರ ನಾಯಕ ಸಭೆ

    ಸತ್ಯಕಾಮ ವಾರ್ತೆ ಯಾದಗಿರಿ:
    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲವೀಶ್ ಒರಡಿಯಾರವರೊಂದಿಗೆ ಜಿಲ್ಲೆಯ ಕೃಷಿ, ಹೈನುಗಾರಿಕೆ, ರೇಷ್ಮೆ ಮತ್ತು ಮೀನುಗಾರಿಕೆಯ ಸಂಬಂಧಪಟ್ಟಂತಹ ಇಲಾಖೆ ಅಧಿಕಾರಿಗಳೊಂದಿಗೆ ಸಂಸದ ಜಿ ಕುಮಾರ ನಾಯಕ ಸಭೆ ನಡೆಸಿದರು.

    ಈ ವೇಳೆ ಮಾತನಾಡಿದ ಸಂಸದ ಜಿ ಕುಮಾರ ನಾಯಕ ರೈತರು ಕೇವಲ ಕೃಷಿಗೆ ಸೀಮಿತವಾಗದೆ ರೈತರು ಜೇನು ಸಾಗಾಣಿಕೆ, ಹೈನುಗಾರಿಕೆ, ಮೀನು ಸಾಗಾಣಿಕೆ, ಕೋಳಿ ಸಾಗಾಣಿಕೆ ಬಗ್ಗೆ ಅವರಿಗೆ ಸಲಹೆಗಳನ್ನು ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

    ಅಧಿಕಾರಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಸಿಗುವಂತಹ ಸಾಲ ಸೌಲಭ್ಯಗಳು ಯೋಜನೆಗಳ ಕುರಿತು ಸರಿಯಾದ ಮಾಹಿತಿ ನೀಡಿ ರೈತರ ಆರ್ಥಿಕತೆಯನ್ನು ಹೆಚ್ಚಿಸುವುದು ನಮ್ಮ ನಿಮ್ಮೆಲ್ಲರ ಜವಾಬ್ದಾರಿ ರೈತರ ಆರ್ಥಿಕತೆ ಹಾಗೂ ಬೆಳವಣಿಗೆಗೊಂಡಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲವೀಶ್ ಒರಡಿಯಾ ಸೇರಿದಂತೆ ಜಿಲ್ಲೆಯ ಅನೇಕ ಅಧಿಕಾರಿಗಳು ಹಾಜರಿದ್ದರು.

  • ಜನಪರ ಚಿಂತಕ, ದೂರದೃಷ್ಟಿಯ ಅಭಿವೃದ್ಧಿಯ ಹರಿಕಾರ ಬಾಪುಗೌಡರು: ಕೇದಾರಲಿಂಗಯ್ಯ ಹಿರೇಮಠ 

    ಜನಪರ ಚಿಂತಕ, ದೂರದೃಷ್ಟಿಯ ಅಭಿವೃದ್ಧಿಯ ಹರಿಕಾರ ಬಾಪುಗೌಡರು: ಕೇದಾರಲಿಂಗಯ್ಯ ಹಿರೇಮಠ 

    ಸತ್ಯಕಾಮ ವಾರ್ತೆ ಶಹಾಪುರ: 

    ಕರ್ನಾಟಕದ ಅಪರೂಪದ ರಾಜಕೀಯ ಮುತ್ಸದ್ಧಿ, ದೀಮಂತ ನಾಯಕರಾಗಿದ್ದ ಬಾಪುಗೌಡ ದರ್ಶನಾಪುರ ಅವರು ಸತ್ಯ, ಪ್ರಾಮಾಣಿಕತೆ, ದಕ್ಷತೆಯ, ನೇರ ನಡೆನುಡಿಯ ಜನಪರ ಚಿಂತಕ ಹಾಗೂ ದೂರದೃಷ್ಟಿಯ ಅಭಿವೃದ್ಧಿಯ ಹರಿಕಾರರಾಗಿ ಇಂದಿಗೂ ನಾಡಿನ ಜನತೆಯ ಮನಸ್ಸಿನಲ್ಲಿ ಶಾಶ್ವತವಾಗಿದ್ದಾರೆ ಎಂದು ರೈತ ಹೋರಾಟಗಾರ ಹಾಗೂ ಪ್ರಗತಿಪರ ಚಿಂತಕರಾದ ಕೇದಾರಲಿಂಗಯ್ಯ ಹಿರೇಮಠ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

     

    ನಗರದ ಚರಬಸವೇಶ್ವರ ಪ್ರೌಢಶಾಲೆಯ ಆವರಣದಲ್ಲಿ ಚರಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯ ವತಿಯಿಂದ ಹಮ್ಮಿಕೊಂಡ ಜನಾನುರಾಗಿ ಬಾಪುಗೌಡ ದರ್ಶನಾಪುರ ಅವರ ೩೬ನೇ ಪುಣ್ಯಸ್ಮರಣೆಯ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದ ಅವರು ಶಹಾಪುರ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ ಬಾಪುಗೌಡರ ವಿಚಾರಗಳಿಗೆ ಶಾಸನ ಸಭೆಗಳಲ್ಲಿ ತುಂಬಾ ಮಹತ್ವವಿತ್ತು. ಭೀಮರಾಯನಗುಡಿಯಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಯ ಮುಖ್ಯ ಕೇಂದ್ರ ಕಛೇರಿ ಸ್ಥಾಪಿಸಿ ಕಲ್ಯಾಣ ಕರ್ನಾಟಕದ್ಯಾಂತ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯಗಳನ್ನು ಒದಗಿಸಿದರು. ವಸತಿ ಸೌಕರ್ಯಕ್ಕಾಗಿ ಅನೇಕ ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತಂದರು. ದೀನ-ದಲಿತರ, ಶೋಷಿತರ, ಹಿಂದುಳಿದ ವರ್ಗಗಳ ಸೇರಿದಂತೆ ಎಲ್ಲಾ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸಿದ ರಾಜಕೀಯ ಚೇತನರಾಗಿದ್ದಾರೆ ಎಂದು ಹಲವಾರು ನಿರ್ದೇಶನಗಳ ಮೂಲಕ ತಿಳಿಸಿದರು.

    ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣ ಕಮಕನೂರ ಅವರು ಮಾತನಾಡಿ ಬಹು ಅಂತಃಕರಣವುಳ್ಳ ರಾಜಕಾರಣಿಯಾಗಿದ್ದ ಬಾಪುಗೌಡರ ಸಾಮಾಜಿಕ ಕಳಕಳಿ, ಅಭಿವೃದ್ಧಿಯ ಚಿಂತನೆ, ಕೃಷಿ, ನೀರಾವರಿ, ಶೈಕ್ಷಣಿಕ ಅಭಿವೃದ್ಧಿಯ ಕಾರ್ಯಗಳು ಅವರನ್ನು ಕರ್ನಾಟಕದ ಅಪರೂಪದ ಸಜ್ಜನಿಕೆಯ ರಾಜಕಾರಣಿಯಾಗಿ ಮಾಡಿದವು. ತಂದೆಯ ಹಾದಿಯಲ್ಲಿ ಸಾಗಿರುವ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ರಾಜ್ಯ ರಾಜಕಾರಣದಲ್ಲಿ ಅಪರೂಪದ ಸರಳ ಸಜ್ಜನಿಕೆಯ ಮಾದರಿ ಜನನಾಯಕರಾಗಿ ಎಲ್ಲರ ಪ್ರೀತಿ ವಿಶ್ವಾಸಗಳಿಗೆ ಪಾತ್ರರಾಗಿದ್ದಾರೆ. ನಾಡಿನ ಅಭಿವೃದ್ಧಿಯ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಬದ್ಧತೆಯ ಹೆಮ್ಮೆಯ ನಾಯಕರಾಗಿದ್ದಾರೆ. ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿಗಳಾದ ಬಸವರಾಜಪ್ಪಗೌಡ ದರ್ಶನಾಪುರ ಅವರ ಧಾರ್ಮಿಕ, ಸಾಮಾಜಿಕ ಸೇವಾ ಕಾರ್ಯಗಳನ್ನು ಶ್ಲಾಘಿಸಿದರು.

     

    ಚರಬಸವೇಶ್ವರ ಗದ್ದುಗೆ ಸಂಸ್ಥಾನದ ವೇದಾಮೂರ್ತಿ ಬಸವಯ್ಯ ಶರಣರು, ನಾಗನಟಿಗಿಯ ಸಿದ್ಧರಾಮೇಶ್ವರ ಸ್ವಾಮಿಜಿಯವರು ಸಾನಿಧ್ಯ ವಹಿಸಿದ್ದರು. ಸಚಿವ ಶರಣಬಸಪ್ಪಗೌಡ ದರ್ಶನಾಪುರ, ಯಾದಗಿರಿ ಶಾಸಕ ಚೆನ್ನಾರಡ್ಡಿ ಪಾಟೀಲ ತುನ್ನೂರ, ಕಲಬುರ್ಗಿ ದಕ್ಷಿಣಕ್ಷೇತ್ರದ ಶಾಸಕ ಅಲಮಪ್ರಭು ಪಾಟೀಲ, ಆರ್.ಎಚ್. ಪಾಟೀಲ, ಚರಬಸವೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜಪ್ಪಗೌಡ ದರ್ಶನಾಪುರ, ಚಂದ್ರಶೇಖರ ಆರಬೋಳ, ಶಂಕ್ರಣ್ಣ ವಣಿಕ್ಯಾಳ, ಭೀಮರಡ್ಡಿ ಬೈರಡ್ಡಿ, ಶರಣಪ್ಪ ಸಲಾದಪುರ, ವಾಮನರಾವ ದೇಶಪಾಂಡೆ, ಸಿದ್ಧಲಿಂಗಣ್ಣ ಆನೆಗುಂದಿ, ಸಂತೋಷ ದೇವದುರ್ಗ, ಮಲ್ಲಿಕಾರ್ಜುನ ಪೂಜಾರಿ, ನೀಲಕಂಠ ಬಡಿಗೇರ, ಸಣ್ಣನಿಂಗಪ್ಪ ನಾಯ್ಕೋಡಿ, ಬಸವರಾಜ ಹಿರೇಮಠ, ಗುಂಡಪ್ಪ ತುಂಬಗಿ, ಬಸವರಾಜ ಹೇರುಂಡಿ, ಅಲ್ಲಾಪಟೇಲ ಮಕ್ತಾಪುರ, ಇಬ್ರಾಹಿಂ ಶಿರವಾಳ, ಇಸ್ಮಾಯಿಲ್ ಚಾಂದ್, ತಲತ್‌ಚಾಂದ್, ಮಲ್ಲಣ್ಣ ಉಳ್ಳುಂಡಗೇರಿ, ಆನಂದ ದೊಡ್ಡಮನಿ, ಬಾಪುಗೌಡ, ವಿಜಯಕುಮಾರ ಎದರಮನಿ, ಮಹಾದೇವಪ್ಪ ಸಾಲಿಮನಿ, ಗುರುಬಾಣತಿಹಾಳ, ಬಸವರಾಜ ಪಾಟೀಲ ಕೆಂಭಾವಿ, ಸಿದ್ಧಣ್ಣ ಗೌಡ, ಹಣಮಂತ್ರಾಯ ದೊರೆ, ಶಾಂತಗೌಡ ನಾಗನಟಗಿ, ಗೌಡಪ್ಪಗೌಡ ಆಲ್ದಾಳ, ಪ್ರೌಢಶಾಲೆಯ ಮುಖ್ಯಗುರು ತಿಪ್ಪಣ್ಣ ಜಮಾದಾರ, ಪಿ.ಯು. ಕಾಲೇಜಿನ ಪ್ರಾಂಶುಪಾಲ ಧರ್ಮಣ್ಣಗೌಡ ಬಿರಾದಾರ ಮುಂತಾದ ಅನೇಕ ರಾಜಕೀಯ ಮುಖಂಡರು ಹಾಗೂ ಬಾಪುಗೌಡ ದರ್ಶನಾಪುರ ಅವರ ಅಪಾರ ಅಭಿಮಾನಿಗಳು ಪಾಲ್ಗೊಂಡಿದ್ದರು.

     

    ಈ ಸಂದರ್ಭದಲ್ಲಿ ಚರಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯ ಪ್ರೌಢಶಾಲೆ, ಪದವಿಪೂರ್ವ ಮತ್ತು ಪದವಿ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಶಿಕ್ಷಕ ಅರುಣಕುಮಾರ ಜೇವರ್ಗಿ ನಿರೂಪಿಸಿದರು. ಶಿಕ್ಷಕ ಶರಣಯ್ಯಸ್ವಾಮಿ ಹಿರೇಮಠ ಸ್ವಾಗತಿಸಿದರು. ಪ್ರಾಂಶುಪಾಲ ಪ್ರೊ. ಶಿವಲಿಂಗಣ್ಣ ಸಾಹು ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಸುರೇಶ ದೊರೆ ಮುಡಬೂಳ ವಂದಿಸಿದರು.

     

    ಸಂಗೀತ ಕಲಾವಿದರಾದ ಮಲ್ಲಯ್ಯಸ್ವಾಮಿ ಹಿರೇಮಠ, ಬಸವರಾಜ ವಿಶ್ವಕರ್ಮ ಹಾಗೂ ಸಂಗಡಿಗರಿಂದ ಸಂಗೀತ ಕಾರ್ಯಕ್ರಮ ಜರುಗಿತು.

     

  • ದೇವಾಲಯಗಳು ಶಾಂತಿ-ನೆಮ್ಮದಿ ನೀಡುವ ಪುಣ್ಯಸ್ಥಳಗಳು- ಸಿದ್ದಲಿಂಗ ಸ್ವಾಮೀಜಿ

    ದೇವಾಲಯಗಳು ಶಾಂತಿ-ನೆಮ್ಮದಿ ನೀಡುವ ಪುಣ್ಯಸ್ಥಳಗಳು- ಸಿದ್ದಲಿಂಗ ಸ್ವಾಮೀಜಿ

    ಸತ್ಯಕಾಮ ವಾರ್ತೆ ಗುರುಮಠಕಲ್ :

    ದೇವಾಲಯಗಳು ಮನುಷ್ಯನಿಗೆ ಶಾಂತಿ, ನೆಮ್ಮದಿ ನೀಡುವ ಪುಣ್ಯಸ್ಥಳಗಳಾಗಿವೆ. ಊರಿಗೊಂದು ವನ ಹಾಗೂ ದೇವಾಲಯ ಇದ್ದರೆ, ಆ ಊರು ಸಂಪದ್ಭರಿತವಾಗುತ್ತದೆ ಎಂದು ನೇರಡಗಂನ ಪೂಜ್ಯ ಸಿದ್ಧಲಿಂಗ ಸ್ವಾಮೀಜಿ ಅಭಿಪ್ರಾಯಪಟ್ಟರು.

     

    ತಾಲೂಕಿನ ಬೋರಬಂಡಾದ ಶ್ರೀಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದ ಕಲ್ಯಾಣೋತ್ಸವ ಹಾಗೂ ರಥೋತ್ಸವ ಉದ್ದೇಶಿಸಿ ಆಶೀರ್ವಚನ ನೀಡಿದ ಅವರರು, ಮಾನವ ಸಕಲ ಜೀವರಾಶಿಗಳನ್ನು ಶ್ರೇಷ್ಠ ಎನಿಸಿದ್ದಾನೆ. ಹೀಗಾಗಿ ಜೀವನದಲ್ಲಿ ಶ್ರದ್ಧಾಭಕ್ತಿಯಿಂದ ಕೈಗೊಂಡ ಧಾರ್ಮಿಕ ಕಾರ್ಯದಿಂದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದರು.

     

    ದೇವರು ಕೊಟ್ಟಿರುವ ಅವಕಾಶವನ್ನು ಸರಿಯಾದ ರೀತಿ ಬಳಸಿಕೊಂಡು ಧರ್ಮ ಉಳಿಸುವ ಕೆಲಸ ಮಾಡಬೇಕಿದೆ ಎಂದರು. ದುಃಖ ದೂರಮಾಡಲು ದೇವರ ಪೂಜೆ ಮಾಡಬೇಕು. ಭಕ್ತನಿಗೂ ಮತ್ತು ಭಗವಂತನಿಗೂ ಸಂದಿಸುವ ಸ್ಥಳ ದೇವಾಲಯ. ಇಂಥ ಭವ್ಯ ದೇಗುಲವನ್ನು ನರೇಂದ್ರ ರಾಠೋಡ ನಿರ್ಮಾಣ ಮಾಡಿದ್ದಾರೆ. ಹೀಗೆ ಧಾಮಿರ್ಕ ಕಾರ್ಯಗಳನ್ನು ಹೆಚ್ಚೆಚ್ಚು ನಡೆಸಿ, ಉಳಿಸಿ, ಬೆಳೆಸಿಕೊಂಡು ಹೋಗಬೇಕು. ಭಕ್ತಿಭಾವವನ್ನು ಹೆಚ್ಚಿಸಬೇಕು ಎಂದರು.

     

    ಧಾರ್ಮಿಕ ಸೇವೆಯಲ್ಲಿ ತೊಡಗಿರುವ ದೇಗುಲ ವ್ಯವಸ್ಥಾಪಕ ನರೇಂದ್ರ ರಾಠೋಡ ಅವರ ಕುಟುಂಬ ಹಾಗೂ ಗ್ರಾಮಸ್ಥರು ವಿಜೃಂಭಣೆಯಿAದ ದೇವರ ಜಾತ್ರೆ, ದೀಪೋತ್ಸವ ಆಚರಿಸಿದ್ದು, ಸುತ್ತಲಿನ ಭಕ್ತರು ದರ್ಶನ ಪಡೆದು ಪಾವನರಾಗುತ್ತಿದ್ದಾರೆ. ಜೀವನದಲ್ಲಿ ಪರೋಪಕಾರಿ ಕಾರ್ಯದಿಂದ ಹೆಸರು ಅಮರವಾಗಲಿದೆ ಎಂದರು.

     

    ಬೆಳಿಗ್ಗೆಯಿಂದಲೇ ಸುಪ್ರಭಾತ ಸೇವೆ, ಪಂಚಾಮೃತಾಭಿಷೇಕ, ಅಲಂಕಾರ ಸೇವೆ ಶ್ರೀಲಕ್ಷ್ಮೀ ತಿಮ್ಮಪ್ಪ ದೇವರ ಕಲ್ಯಾಣೋತ್ಸವ, ರಥೋತ್ಸವ ಹಾಗೂ ಉಂಜಿಲು ಸೇವೆ ಕಾರ್ಯಕ್ರಮ ನೆರವೇರಿತು.

     

    ಮುರಾರಿ ಮಹರಾಜ, ಯು.ಪಿ.ಯ ಯೋಜಿ ಮಹೇಂದ್ರನಾಥ ಸ್ವಾಮಿ, ಅನೀಲ ಮಹರಾಜ, ಶಂಕರ್ ಮಹರಾಜ, ಸುರೇಶ ಮಹರಾಜ, ಸರಸ್ವತಿ ಮಾತೆ, ಶಾಂತಾ ಮಾತೆ, ಲಕ್ಷ್ಮೀಮಾತೆ, ಯಶೋಧಾ, ಧರ್ಮಿಣಿ ಮಾತೆ, ಪೂಜ್ಯ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮಿ, ದಕ್ಷಿಣ ಕನ್ನಡ ಬಿಜೆಪಿ ಕಾರ್ಯಕಾರಿಣಿ ಸದಸ್ಯೆ ಸಂಗೀತಾ ಲಕ್ಷ್ಮಣ ಪವಾರ್ ಅಯ್ಯಪ್ಪ ದಾಸ್, ರಾಜು ರಾಠೋಡ, ಕರವೇ ಜಿಲ್ಲಾಧ್ಯಕ್ಷ ಭೀಮುನಾಯಕ, ಆನಂದ ಬೋಯಿನಿ, ಸಾಯಬಣ್ಣ ಹೂಗರ್, ಕಾಶಿನಾಥ್ ರಾಠೋಡ, ಶರಣು ಎಲ್ಲೇರಿ, ವಿಜಯ ಮಗ್ಗಂಪೂರ, ಮೋಹನ್, ಸುರೇಶ ಚಿನ್ನಾ ರಾಠೋಡ ಸೇರಿ ಪ್ರಮುಖರು ತಾಂಡಾ ನಿವಾಸಿಗಳು, ಸುತ್ತಮುತ್ತಲಿನ ಭಕ್ತರು ಇದ್ದರು.

  • ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪೃಥ್ವಿಕ್ ಶಂಕರ್

    ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪೃಥ್ವಿಕ್ ಶಂಕರ್

    ಸತ್ಯಕಾಮ ವಾರ್ತೆ ಯಾದಗಿರಿ: 

    ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪೃಥ್ವಿಕ್ ಶಂಕರ್ ಅವರನ್ನು ನಿಯೋಜಿಸಿ ರಾಜ್ಯ ಸರ್ಕಾರ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

     

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಜಿ. ಸಂಗೀತಾ ಅವರನ್ನು ಅಪರಾಧ ತನಿಖಾ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ನೂತನವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿರುವ ಪೃಥ್ವಿಕ್ ಶಂಕರ್ ಅಪರಾಧ ತನಿಖಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

  • ಡಿ.14 ರಂದು ರಾಷ್ಟೀಯ ಲೋಕ ಅದಾಲತ್ : ನ್ಯಾ ಮರಿಯಪ್ಪ

    ಡಿ.14 ರಂದು ರಾಷ್ಟೀಯ ಲೋಕ ಅದಾಲತ್ : ನ್ಯಾ ಮರಿಯಪ್ಪ

    ಸತ್ಯಕಾಮ ವಾರ್ತೆ ಯಾದಗಿರಿ:

    ಡಿ.14 ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಯುತ್ತಿದ್ದು, ಬಾಕಿ ಇರುವ ವ್ಯಾಜ್ಯಗಳನ್ನು ಸಾರ್ವಜನಿಕರು ಇತ್ಯರ್ಥ ಮಾಡಿಕೊಳ್ಳಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮರಿಯಪ್ಪ ಅವರು ಹೇಳಿದರು.

     

    ಗುರುವಾರ ನಗರದ ಜಿಲ್ಲಾ ನ್ಯಾಯಾಲಯದ ಕಚೇರಿಯಲ್ಲಿ ನೆಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ರಾಷ್ಟ್ರೀಯ ಲೋಕ ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಉದ್ದೇಶಿಸಲಾಗಿದೆ. ಇದರ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯಲ್ಲಿರುವ ಎಲ್ಲಾ ನ್ಯಾಯಾಲಯಗಳ ವ್ಯಾಪ್ತಿಯಲ್ಲಿ ಲೋಕ್ ಅದಾಲತ್ತನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಅದಾಲತ್‌ನ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕೆಂದರು.

     

    ಈ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾಜಿಯಾ ಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಮೋಟಾ‌ರ್ ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಎಂ.ಎಂ.ಡಿ.ಆರ್. ಕಾಯ್ದೆಯಡಿಯ ಪ್ರಕರಣಗಳನ್ನು ಪರಿಹರಿಸಿಕೊಳ್ಳಬಹುದು. ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು (ವಿಚ್ಛೇದನ ಹೊರತು ಪಡಿಸಿ) ಪಿಂಚಣಿ ಪ್ರಕರಣಗಳು, ವೇತನ ಭತ್ಯೆ ಸಂಬಂಧಿಸಿದ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಕೈಗಾರಿಕಾ ಕಾರ್ಮಿಕರ ವೇತನ, ಕಾರ್ಮಿಕ ವಿವಾದ ಇತ್ಯಾದಿ ಪ್ರಕರಣಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ ಎಂದರು.

     

    ಇದುವರೆಗೆ ಜಿಲ್ಲೆಯ್ಯಾದಂತ ಒಟ್ಟು 19492 ಪ್ರಕರಣಗಳನ್ನು ಲೋಕ ಅದಾಲತನಲ್ಲಿ ಇತ್ಯರ್ಥಪಡಿಸಲು ಗುರುತಿಸಲಾಗಿದೆ. 2661 ರಾಜೀ ಮಾಡಬಲ್ಲ ಪ್ರಕರಣಗಳೆಂದು ಗುರುತಿಸಲಾಗಿದೆ. ಯಾದಗಿರಿ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಒಟ್ಟು 04 ಬೆಂಚ್‌ ಗಳನ್ನು, ಶಹಾಪೂರ 03 ಮತ್ತು ಸುರಪೂರದಲ್ಲಿ 02 ಬೆಂಚ್‌ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಪ್ರತಿ ಬೆಂಚನಲ್ಲಿ ಒಬ್ಬರು ನ್ಯಾಯಾಧೀಶರು ಹಾಗೂ ಒಬ್ಬರು ವಕೀಲರು ಸಂಧಾನಕಾರರಾಗಿ ಭಾಗವಹಿಸುವರು, ಅವರ ಮುಖಾಂತರ ರಾಜೀ ಸಂಧಾನ ಮಾಡಿಸಲಾಗುವುದು ಎಂದು ಹೇಳಿದರು.

     

    ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ ಸಾಕಷ್ಟು ಸಮಯ ಮತ್ತು ಹಣ ಉಳಿತಾಯ ಮಾಡಬಹುದಾಗಿದೆ. ಸಿವಿಲ್ ಪ್ರಕರಣಗಳಲ್ಲಿ ರಾಜೀ ಆದರೆ ನ್ಯಾಯಾಲಯಕ್ಕೆ ತುಂಬಿದ ನ್ಯಾಯಾಲಯ ಶುಲ್ಕ ಸಹ ವಾಪಸ್ಸಾಗುತ್ತದೆ. ಮತ್ತು ಇದರಿಂದ ಉಭಯ ಪಕ್ಷಗಾರರಲ್ಲಿ ದ್ವೇಷದ ಭಾವನೆ ಕಡಿಮೆಯಾಗಿ ಸಾಮರಸ್ಯ ಮೂಡುತ್ತದೆ. ಸಾರ್ವಹನಿಕರು ವಿಶೇಷವಾಗಿ ಕಕ್ಷಿಗಾರರು ಹೆಚ್ಚಿನ ಸಂಖ್ಯೆಯಲ್ಲಿ ರಾಷ್ಟ್ರೀಯ ಲೋಕ ಅದಾಲತ್‌ನ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.

  • ಕನ್ನಡ ಶಾಲೆಗಳ ನಿರ್ಲಕ್ಷ್ಯ: ರಾಜ್ಯೋತ್ಸವದಂದು ಕರಾಳ ದಿನವಾಗಿ ಆಚರಣೆ

    ಕನ್ನಡ ಶಾಲೆಗಳ ನಿರ್ಲಕ್ಷ್ಯ: ರಾಜ್ಯೋತ್ಸವದಂದು ಕರಾಳ ದಿನವಾಗಿ ಆಚರಣೆ

    ಸತ್ಯಕಾಮ ವಾರ್ತೆ ಗುರುಮಠಕಲ್ :

    ಕನ್ನಡ ಮಾಧ್ಯಮ ಖಾಸಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ರಾಜ್ಯದ ಖಾಸಗಿ ಶಾಲೆಗಳಲ್ಲಿ ಕರಾಳ ದಿನ ಆಚರಿಸಲು ಕರ್ನಾಟಕ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ ನಿರ್ಣಯ ಕೈಗೊಂಡಿದೆ ಎಂದು ಬಸವೇಶ್ವರ ಶಿಕ್ಷಣ ಸಂಸ್ಥೆಯ ನಿರ್ದೇಶಕ ಅಖಂಡೇಶ್ವರ ಹಿರೇಮಠ ಹೇಳಿದರು.

     

    ಶಿಕ್ಷಕರು, ಆಡಳಿತ ಮಂಡಳಿ ಸದಸ್ಯರು ಕಪ್ಪುಪಟ್ಟಿ ಧರಿಸಿ ಕರಾಳ ದಿನಕ್ಕೆ ಸಾಥ್ ನೀಡಿ ಮಾತನಾಡಿದ ಅವರು, 1995 ರ ನಂತರ ಆರಂಭವಾದ ಖಾಸಗಿ ಕನ್ನಡ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವಂತೆ ಅನೇಕ ವರ್ಷಗಳಿಂದ ಬೇಡಿಕೆ ಇದೆ. ಆದರೆ, ಸರ್ಕಾರಗಳು ಇದಕ್ಕೆ ಮನ್ನಣೆ ನೀಡಿಲ್ಲ.

     

    ದಶಕಗಳ ಕಾಲ ಪಾಠ ಮಾಡಿದ ಶಿಕ್ಷಕರು ಅನುದಾನದ ವೇತನ ಇಲ್ಲದೆ ನಿವೃತ್ತರಾಗಿದ್ದಾರೆ.ಶಾಲೆಗಳಿಗೆ ಮಾನ್ಯತೆ ನವೀಕರಣ, ಆರ್‌ಟಿಇಗೆ ಚಾಲನೆ, ಆರ್‌ಟಿಇ ಶುಲ್ಕ ಮರುಪಾವತಿ, ಗ್ರಾಚ್ಯುಟಿ ಪಾವತಿ ಸೇರಿದಂತೆ ಇನ್ನಿತರ ಸಮಸ್ಯೆಗಳು ಇತ್ಯಾರ್ಥವಾಗಬೇಕಾಗಿದೆ ಎಂದರು.