amp-web-push-widget button.amp-subscribe { display: inline-flex; align-items: center; border-radius: 5px; border: 0; box-sizing: border-box; margin: 0; padding: 10px 15px; cursor: pointer; outline: none; font-size: 15px; font-weight: 500; background: #4A90E2; margin-top: 7px; color: white; box-shadow: 0 1px 1px 0 rgba(0, 0, 0, 0.5); -webkit-tap-highlight-color: rgba(0, 0, 0, 0); } .web-stories-singleton.alignleft,.web-stories-singleton.alignnone,.web-stories-singleton.alignright{display:block;width:100%}.web-stories-singleton.aligncenter{text-align:initial}.web-stories-singleton .wp-block-embed__wrapper{position:relative}.web-stories-singleton.alignleft .wp-block-embed__wrapper{margin-right:auto}.web-stories-singleton.alignright .wp-block-embed__wrapper{margin-left:auto}.web-stories-singleton.alignnone .wp-block-embed__wrapper{max-width:var(--width)}.web-stories-singleton.aligncenter .wp-block-embed__wrapper{margin-left:auto;margin-right:auto;max-width:var(--width)}.web-stories-singleton-poster{aspect-ratio:var(--aspect-ratio);border-radius:8px;cursor:pointer;overflow:hidden;position:relative}.web-stories-singleton-poster a{aspect-ratio:var(--aspect-ratio);display:block;margin:0}.web-stories-singleton-poster .web-stories-singleton-poster-placeholder{box-sizing:border-box}.web-stories-singleton-poster .web-stories-singleton-poster-placeholder a,.web-stories-singleton-poster .web-stories-singleton-poster-placeholder span{border:0;clip:rect(1px,1px,1px,1px);-webkit-clip-path:inset(50%);clip-path:inset(50%);height:1px;margin:-1px;overflow:hidden;padding:0;position:absolute;width:1px;word-wrap:normal;word-break:normal}.web-stories-singleton-poster img{box-sizing:border-box;height:100%;object-fit:cover;position:absolute;width:100%}.web-stories-singleton-poster:after{background:linear-gradient(180deg,hsla(0,0%,100%,0),rgba(0,0,0,.8));content:"";display:block;height:100%;left:0;pointer-events:none;position:absolute;top:0;width:100%}.web-stories-singleton .web-stories-singleton-overlay{bottom:0;color:var(--ws-overlay-text-color);line-height:var(--ws-overlay-text-lh);padding:10px;position:absolute;z-index:1}.web-stories-embed.alignleft,.web-stories-embed.alignnone,.web-stories-embed.alignright{display:block;width:100%}.web-stories-embed.aligncenter{text-align:initial}.web-stories-embed .wp-block-embed__wrapper{position:relative}.web-stories-embed.alignleft .wp-block-embed__wrapper{margin-right:auto}.web-stories-embed.alignright .wp-block-embed__wrapper{margin-left:auto}.web-stories-embed.alignnone .wp-block-embed__wrapper{max-width:var(--width)}.web-stories-embed.aligncenter .wp-block-embed__wrapper{margin-left:auto;margin-right:auto;max-width:var(--width)}.web-stories-embed:not(.web-stories-embed-amp) .wp-block-embed__wrapper{aspect-ratio:var(--aspect-ratio)}.web-stories-embed:not(.web-stories-embed-amp) .wp-block-embed__wrapper amp-story-player{bottom:0;height:100%;left:0;position:absolute;right:0;top:0;width:100%}.block-editor-block-inspector .web-stories-embed-poster-remove{margin-left:12px} .amp-logo amp-img{width:190px} .amp-menu input{display:none;}.amp-menu li.menu-item-has-children ul{display:none;}.amp-menu li{position:relative;display:block;}.amp-menu > li a{display:block;} .icon-widgets:before {content: "\e1bd";}.icon-search:before {content: "\e8b6";}.icon-shopping-cart:after {content: "\e8cc";}
ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12 ಈಗ ವಿವಾದದ ಕೇಂದ್ರಬಿಂದುವಾಗಿದೆ. ಮನರಂಜನೆ, ಡ್ರಾಮಾ ಮತ್ತು ಸಂವಾದಗಳೊಂದಿಗೆ ಪ್ರೇಕ್ಷಕರ ಮನ ಗೆಲ್ಲುತ್ತಿದ್ದ ಈ ಕಾರ್ಯಕ್ರಮ ಈಗ ಕಾನೂನು ಗೋಜಿಗೆ ಸಿಲುಕಿದೆ. ಸ್ಪರ್ಧಿಗಳ ನಡುವೆ ನಡೆದ ಒಂದು ಘಟನೆ, ಆಡಿದ ಮಾತು, ಬಳಸಿದ ಪದ ಬಳಕೆ ಮತ್ತು ಅದರ ಪರಿಣಾಮವಾಗಿ ಉಂಟಾದ ಸಾಮಾಜಿಕ ಪ್ರತಿಕ್ರಿಯೆ ಇವೆಲ್ಲದರ ಹಿನ್ನೆಲೆ ಈಗ ಚರ್ಚೆಗೆ ಗ್ರಾಸವಾಗಿದೆ.
ಬಿಗ್ ಬಾಸ್‌ನ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ಹೈಕೋರ್ಟ್ ವಕೀಲ ಪ್ರಶಾಂತ್ ಮೆತಾಲ್ ಅವರು ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರಿನ ಪ್ರಕಾರ, ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಅವರು ಸಹ ಸ್ಪರ್ಧಿ ರಕ್ಷಿತಾ ಶೆಟ್ಟಿ ಬಗ್ಗೆ ಮಾತನಾಡುವಾಗ “She is S… ಆ ಕ್ಯಾಟೆಗರಿನವರು” ಎಂಬ ಪದಬಳಕೆ ಮಾಡಿರುವುದು ವ್ಯಕ್ತಿತ್ವ ನಿಂದನೆಯಾಗಿದೆ ಎಂದು ಆರೋಪಿಸಲಾಗಿದೆ.
ದೂರಿನಲ್ಲಿ ಅಶ್ವಿನಿ ಗೌಡ ಅವರೊಂದಿಗೆ ಕಲರ್ಸ್ ಕನ್ನಡ ಚಾನೆಲ್‌ನ ವ್ಯವಹಾರ ಮುಖ್ಯಸ್ಥ ಪ್ರಶಾಂತ್ ನಾಯಕ್, ಕ್ಲಸ್ಟರ್ ಹೆಡ್ ಸುಷ್ಮಾ, ಹಾಗೂ ಡೈರೆಕ್ಟರ್ ಪ್ರಕಾಶ್ ಅವರ ಮೇಲೂ ಆರೋಪ ಹೊರಿಸಲಾಗಿದೆ. ಆರೋಪದಂತೆ, ಈ ರೀತಿಯ ನಿಂದನಾತ್ಮಕ ಪದಗಳನ್ನು ಸಂಪಾದನೆ ಮಾಡದೆ ಪ್ರಸಾರ ಮಾಡುವ ಮೂಲಕ ಚಾನೆಲ್ ಸಾಮಾಜಿಕ ಜವಾಬ್ದಾರಿಯನ್ನು ಉಲ್ಲಂಘಿಸಿದೆ. ಬಿಡದಿ ಪೊಲೀಸರು ಈ ಕುರಿತು ದೂರು ಸ್ವೀಕರಿಸಿ, ಎನ್‌ಸಿಆರ್ (Non-Cognizable Report) ದಾಖಲಿಸಿದ್ದಾರೆ ಅಂದರೆ ಇದು ಗಂಭೀರವಲ್ಲದ ಪ್ರಕರಣ ಎಂದು ಗುರುತಿಸಲಾಗಿದೆ.
ದೂರಿನ ವಿಷಯವೇನು?:
ದೂರಿನಲ್ಲಿ ಉಲ್ಲೇಖಿಸಿರುವಂತೆ, ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಅಶ್ವಿನಿ ಗೌಡ ಅವರು ಬಳಸಿದ “S Category” ಎಂಬ ಪದ ಜಾತಿ ನಿಂದನೆ ಹಾಗೂ ವ್ಯಕ್ತಿತ್ವ ಹಾನಿಗೆ ಕಾರಣವಾಗುವಂತದ್ದು. ಈ ಪದ ಬಳಕೆ ಕೇವಲ ವ್ಯಕ್ತಿಗಷ್ಟೇ ಅಲ್ಲ, ಸಮಾಜದ ಕೆಲವು ವರ್ಗಗಳಿಗೂ ನೋವುಂಟುಮಾಡುತ್ತದೆ ಎಂಬ ಆರೋಪ ಇದೆ.
ದೂರುದಾರ ಪ್ರಶಾಂತ್ ಮೆತಾಲ್ ಅವರ ಪ್ರಕಾರ, “ಇಂತಹ ಪದಗಳು ಸಾರ್ವಜನಿಕವಾಗಿ ಪ್ರಸಾರವಾಗುವುದರಿಂದ ಸಮಾಜದಲ್ಲಿ ತಪ್ಪು ಸಂದೇಶ ಹರಡುತ್ತದೆ ಮತ್ತು ಕಾರ್ಯಕ್ರಮದ ಟಿಆರ್‌ಪಿ ಹೆಚ್ಚಿಸುವ ಉದ್ದೇಶದಿಂದ ಈ ಭಾಗವನ್ನು ತೆಗೆಯದೆ ಪ್ರಸಾರ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.
ರಕ್ಷಿತಾ ಶೆಟ್ಟಿ ಕ್ಯಾಮೆರಾ ಮುಂದೆ ಮಾತನಾಡುತ್ತಿದ್ದಾಗ, ಜಾಹ್ನವಿ ಮತ್ತು ಅಶ್ವಿನಿ ಗೌಡ ಫನ್ ಮಾಡಲು ಗೆಜ್ಜೆ (anklet) ಹಿಡಿದು ಅಲ್ಲಾಡಿಸಿದರೆಂದು ಹೇಳಲಾಗಿದೆ. ನಂತರ ಮನೆಯವರು ಯಾರು ಎಂದು ಕೇಳಿದಾಗ, ಇಬ್ಬರೂ ಅದು ರಕ್ಷಿತಾ ಮಾಡಿದ ಕೆಲಸ ಎಂದು ಸುಳ್ಳು ಹೇಳಿದ್ದಾರೆ.
ಈ ವಿಷಯಕ್ಕೆ ಕೋಪಗೊಂಡ ರಕ್ಷಿತಾ ಇಬ್ಬರನ್ನೂ ಪ್ರಶ್ನಿಸಿದಾಗ ವಾಗ್ವಾದ ಉಂಟಾಯಿತು. ಅಶ್ವಿನಿ ಮತ್ತು ಜಾಹ್ನವಿ ತಮ್ಮ ತಪ್ಪನ್ನು ಒಪ್ಪದೆ ಗಲಾಟೆ ಮುಂದುವರಿಸಿದರು.
ಮರುದಿನ ಬೆಳಗ್ಗೆ, ಅಶ್ವಿನಿ ಗೌಡ ಜಾಹ್ನವಿಯೊಂದಿಗೆ ಮಾತನಾಡುತ್ತಿದ್ದ ವೇಳೆ, ರಕ್ಷಿತಾಳ ಬಗ್ಗೆ “She is S… ಆ ಕ್ಯಾಟೆಗರಿಯವಳು” ಎಂದು ಹೇಳಿದ್ದು ಕ್ಯಾಮೆರಾದಲ್ಲಿ ಸೆರಿಯಾಗಿದೆ.
ಸಾಮಾಜಿಕ ಪ್ರತಿಕ್ರಿಯೆ :
ಈ ಘಟನೆ ಪ್ರಸಾರವಾದ ಬಳಿಕ ಸಾಮಾಜಿಕ ಮಾಧ್ಯಮದಲ್ಲಿ ಅಶ್ವಿನಿ ಗೌಡ ವಿರುದ್ಧ ಟೀಕೆಗಳ ಮಳೆ ಸುರಿಯುತ್ತಿದ್ದು, ಕೆಲವು ವೀಕ್ಷಕರು ಅವರ ಮಾತುಗಳನ್ನು ವೈಯಕ್ತಿಕ ಹಾಗೂ ಸಾಮಾಜಿಕ ನಿಂದನೆ ಎಂದು ಕರೆಯುತ್ತಿದ್ದರೆ, ಇನ್ನೂ ಕೆಲವರು ಬಿಗ್ ಬಾಸ್ ತಂಡದ ಸಂಪಾದನೆ ಮತ್ತು ಪ್ರಸಾರದ ನೀತಿಗಳನ್ನು ಪ್ರಶ್ನಿಸುತ್ತಿದ್ದಾರೆ.
ಇನ್ನು, ಈ ಪ್ರಕರಣದಲ್ಲಿ ಪೊಲೀಸರು ಪ್ರಾಥಮಿಕ ತನಿಖೆ ಆರಂಭಿಸಿದ್ದು, ಅಗತ್ಯ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ. ಅಶ್ವಿನಿ ಗೌಡ ಅಥವಾ ಚಾನೆಲ್ ಪರವಾಗಿ ಅಧಿಕೃತ ಪ್ರತಿಕ್ರಿಯೆ ಇನ್ನೂ ಹೊರಬಿದ್ದಿಲ್ಲ. ಬಿಗ್ ಬಾಸ್ ಮನೆಯ ಮನರಂಜನೆ ಈಗ ವಿವಾದದ ಗೂಡಿನಲ್ಲಿ ಸಿಲುಕಿದೆ. ಶಿಸ್ತಿನ ಅಭಾವ ಕಾನೂನು ಗೊಂದಲಕ್ಕೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಪೊಲೀಸರು ಮತ್ತು ನ್ಯಾಯಾಲಯ ಯಾವ ಕ್ರಮ ಕೈಗೊಳ್ಳುತ್ತವೆ ಎಂಬುದು ಕಾದು ನೋಡಬೇಕಾಗಿದೆ.
ಉದ್ಯೋಗ ಜೀವನದಲ್ಲಿ ಪ್ರತಿಯೊಬ್ಬ ನೌಕರನಿಗೂ ಒಂದು ಗುರಿ ಇರುತ್ತದೆ ಭದ್ರ ಭವಿಷ್ಯವನ್ನು ನಿರ್ಮಿಸುವುದು. ವರ್ಷಗಳ ಕಾಲ ನಿಷ್ಠೆಯಿಂದ, ಪರಿಶ್ರಮದಿಂದ ಕೆಲಸ…
ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ ವೈರಲ್ ಆಗಿರುವ ಒಂದು ವಿಡಿಯೋ ತುಣುಕಿನಿಂದ ಕಾಡಿನ ಕಳ್ಳ ವೀರಪ್ಪನ್ ಅವರ ಪುತ್ರಿಯರು ಮತ್ತೆ ಸುದ್ದಿಯಲ್ಲಿದ್ದಾರೆ. ಅಂಕಣಕಾರ…
ಸತ್ಯಕಾಮ ವಾರ್ತೆ ಮುದ್ದೇಬಿಹಾಳ; ಮುದ್ದೇಬಿಹಾಳ ಮತಕ್ಷೇತ್ರದ ಶಾಸಕರು ಸಿ.ಎಸ್ ನಾಡಗೌಡ ಅವರಿಗೆ ಬರುವ ಪುನರ್ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಕೇಳಬಾರದು…
ಶತಮಾನಗಳಿಂದ ಕೋಟ್ಯಂತರ ಭಕ್ತರ ಕನಸಾಗಿದ್ದ ಅಯೋಧ್ಯೆಯ ಶ್ರೀರಾಮ ಮಂದಿರ ಇದೀಗ ಸಂಪೂರ್ಣ ರೂಪ ಪಡೆದುಕೊಂಡಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ…
ಸಿನಿಮಾ ಲೋಕದಲ್ಲಿ ಜನಪ್ರಿಯತೆ ಪಡೆದವರು ಎದುರಿಸಬೇಕಾದ ದೊಡ್ಡ ಸವಾಲುಗಳಲ್ಲಿ ಒಂದು ಎಂದರೆ ತಮ್ಮ ಹೆಸರು ಮತ್ತು ಮುಖದ ದುರುಪಯೋಗ. ಇತ್ತೀಚಿನ…
ಸತ್ಯಕಾಮ ವಾರ್ತೆ ಯಾದಗಿರಿ: ಆಸ್ಪತ್ರೆಗೆ ಬರುವ ಬಡರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವ ಮೂಲಕ ತಮ್ಮ ಸೇವೆಯನ್ನು ಸಾರ್ಥಕ ಮಾಡಿಕೊಳ್ಳಬೇಕೆಂದು ಶಾಸಕ ಶರಣಗೌಡ…