ಸತ್ಯಕಾಮ ವಾರ್ತೆ ಯಾದಗಿರಿ:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025–28 ನೇ ಅವಧಿಯ ಚುನಾವಣೆಯು ನವೆಂಬರ್ 9ರಂದು ನಡೆಯಲಿದ್ದು, ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಪತ್ರಕರ್ತ ದಿನೇಶ್ ವಿ.ಸಿ ಮತ್ತು ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ಯಾದಗಿರಿ ಎಕ್ಸ್‌ಪ್ರೆಸ್ ಪತ್ರಿಕೆಯ ಸಂಪಾದಕ ಕುಮಾರಸ್ವಾಮಿ ಅವರು ಸೋಮವಾರ ಜಿಲ್ಲಾ ಚುನಾವಣಾಧಿಕಾರಿ ನರಸಪ್ಪ ಅವರಿಗೆ ತಮ್ಮ ನಾಮಪತ್ರಗಳನ್ನು ಸಲ್ಲಿಸಿದರು.
ಈ ವೇಳೆ ಸಂಜೆಕಾಲ ಪತ್ರಿಕೆಯ ಸಂಪಾದಕರಾದ ರಾಜೇಶ್ ಪಾಟೀಲ್, ಪತ್ರಕರ್ತರಾದ ತೋಟೆಂದ್ರ, ಮಲ್ಲು ಕಾಮರೆಡ್ಡಿ, ಕುದಾನ್ ಸಾಬ್, ಬಸವರಾಜ್ ಕಾಂಬಳೆ, ಮಂಜು ಬಿರಾದಾರ್, ದೇವಿಂದ್ರ ಕಿಲ್ಲನಕೇರಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.
