ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭಾರತ ಮಹಿಳಾ ತಂಡ ಐತಿಹಾಸಿಕ ಸಾಧನೆಯನ್ನು ಗೈದು ಫೈನಲ್‌ಗೆ ಪ್ರವೇಶಿಸಿದೆ. ಗುರುವಾರ ನಡೆದ ಸೆಮಿಫೈನಲ್‌ನಲ್ಲಿ ಭಾರತ ಹಾಲಿ ವಿಶ್ವಚಾಂಪಿಯನ್ ಆದ ಆಸ್ಟ್ರೇಲಿಯಾವನ್ನು 5 ವಿಕೆಟ್‌ಗಳಿಂದ ಮಣಿಸಿ ವಿಶ್ವದಾಖಲೆಯ ಗುರಿ ಬೆನ್ನತ್ತುವುದರ ಮೂಲಕ ಸಾಧನೆ ಮಾಡಿತು. 338 ರನ್‌ಗಳ ಗುರಿ ಎದುರಿಸಿದ ಭಾರತ, ಒತ್ತಡದ ಸಂದರ್ಭದಲ್ಲೂ ಶಾಂತಿ ಕಳೆದುಕೊಳ್ಳದೇ, ನಿರ್ಧಾರಾತ್ಮಕ ಬ್ಯಾಟಿಂಗ್ ಪ್ರದರ್ಶಿಸಿತು.
ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಮಹಿಳಾ ತಂಡ 49.5 ಓವರ್‌ಗಳಲ್ಲಿ 338 ರನ್ ಗಳಿಸಿತು. ಆಸ್ಟ್ರೇಲಿಯಾಗೆ ಉತ್ತಮ ಆರಂಭ ಸಿಕ್ಕಿದ್ದರೂ, ಮಧ್ಯ ಓವರ್‌ಗಳಲ್ಲಿ ವಿಕೆಟ್ ಕಳೆದುಕೊಳ್ಳುವ ಮೂಲಕ ಆಸ್ಟ್ರೇಲಿಯಾ ನಿರೀಕ್ಷಿತ ಅಂತ್ಯ ಪಡೆಯುವಲ್ಲಿ ವಿಫಲವಾಯಿತು. ಭಾರತೀಯ ಬೌಲರ್‌ಗಳು ಪ್ರಮುಖ ಕ್ಷಣಗಳಲ್ಲಿ ವಿಕೆಟ್ ತೆಗೆಯುವ ಮೂಲಕ ಪಂದ್ಯವನ್ನು ಹಿಡಿತದಲ್ಲಿಟ್ಟರು.
ಭಾರತದ ಇನ್ನಿಂಗ್ಸ್‌ಗೆ ಚಾಲನೆ ಸಿಕ್ಕ ತಕ್ಷಣವೇ, ಆರಂಭಿಕ ಆಟಗಾರ್ತಿಯರು ಶೆಫಾಲಿ ವರ್ಮಾ ಹಾಗೂ ಸ್ಮೃತಿ ಮಂದಾನ ಬೇಗನೆ ಪೆವಿಲಿಯನ್ ಸೇರುವ ಮೂಲಕ ತಂಡವನ್ನು ಒತ್ತಡಕ್ಕೆ ಸಿಲುಕಿಸಿದ್ದರು. ಆದರೆ ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ಸ್ಥಳೀಯ ಆಟಗಾರ್ತಿ ಜೆಮಿಮಾ ರೋಡ್ರಿಗಸ್ ಪಂದ್ಯದ ಭವಿಷ್ಯವನ್ನು ಬದಲಾಯಿಸಿ ಜತೆಯಾಟ ಪ್ರದರ್ಶಿಸಿದರು. ಇಬ್ಬರು ತಾಳ್ಮೆಯ ಜೊತೆಗೆ ಆಕ್ರಮಣಾತ್ಮಕ ಆಟ ತೋರಿಸಿ 165 ರನ್‌ಗಳ ಅಮೂಲ್ಯ ಜೊತೆಯಾಟ ಆಡಿದರು.
ಹರ್ಮನ್‌ಪ್ರೀತ್ ಕೌರ್ 89 ರನ್ ಗಳಿಸಿ ಔಟಾದರೂ, ಜೆಮಿಮಾ ರೋಡ್ರಿಗಸ್ ಕ್ರೀಸ್ ಕಚ್ಚಿ ನಿಂತಿದ್ದು ತಂಡಕ್ಕೆ ದೊಡ್ಡ ಸಹಾಯವಾಯ್ತು. ಒತ್ತಡದ ಸಂದರ್ಭದಲ್ಲೂ ಶಾಂತ ಮನೋಭಾವದಿಂದ ಆಡಿದ ಜೆಮಿಮಾ 127 ರನ್‌ಗಳ ಅಜೇಯ ಇನ್ನಿಂಗ್ಸ್ ಮೂಲಕ ಭಾರತಕ್ಕೆ ಗೆಲುವು ತಂದುಕೊಟ್ಟರು. ಅಂತಿಮ ಹಂತದಲ್ಲಿ ದೀಪ್ತಿ ಶರ್ಮಾ, ರಿಚಾ ಘೋಷ್ ಹಾಗೂ ಅಮನ್‌ಜೋತ್ ಕೌರ್ ಅಗತ್ಯ ರನ್‌ಗಳನ್ನು ಸೇರಿಸಿ ಭಾರತ ಗುರಿ ತಲುಪುವಲ್ಲಿ ಯಶಸ್ವಿಯಾದರು.
ಈ ಮೂಲಕ ವಿಶ್ವಕಪ್ ನಾಕೌಟ್ ಹಂತದಲ್ಲಿ ಅತಿ ದೊಡ್ಡ ಗುರಿ ಬೆನ್ನತ್ತಿದ ತಂಡ ಎಂಬ ಗೌರವ ಭಾರತಕ್ಕೆ ದೊರಕಿದೆ. ಲೀಗ್ ಹಂತದಲ್ಲಿ ಆಸ್ಟ್ರೇಲಿಯಾ ವಿರುದ್ಧ ಅನುಭವಿಸಿದ ಸೋಲಿಗೆ ಭಾರತ ಈ ಪಂದ್ಯದಲ್ಲಿ ಸಮರ್ಪಕ ತಿರುಗೇಟು ನೀಡಿದೆ.
ನವೆಂಬರ್ 2ರಂದು ನಡೆಯಲಿರುವ ಫೈನಲ್‌ನಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಕಣಕ್ಕಿಳಿಯಲಿದೆ. ಪ್ರಸ್ತುತ ಆಟದ ಶೈಲಿ, ತಂಡದ ಆತ್ಮವಿಶ್ವಾಸ ಹಾಗೂ ಪ್ರದರ್ಶನವನ್ನು ಗಮನಿಸಿದರೆ ಭಾರತ ಈ ಬಾರಿ ಟ್ರೋಫಿ ಗೆಲ್ಲಲು ಹಾಟ್ ಫೆವರೇಟ್ ತಂಡವಾಗಿದೆ.
 Total Visits: 1
Total Visits: 1 All time total visits: 31798
All time total visits: 31798
 
			 
                                 
                              
         
        
