ಯಾದಗಿರಿ: ನಶಾ ಮುಕ್ತ ಭಾರತ ನಿರ್ಮಾಣ ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಿದಾಗ ಮಾತ್ರ ಸಾಧ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮರಿಯಪ್ಪ ಅವರು ಹೇಳಿದರು.
ನಶಾ ಮುಕ್ತ ಭಾರತ ಅಭಿಯಾನ ಯೋಜನೆಯು 5 ವರ್ಷ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಬುಧವಾರ ಹಮ್ಮಿಕೊಂಡಿದ್ದ ನಶಾ ಮುಕ್ತ ಭಾರತ ಅಭಿಯಾನ ಹಾಗೂ ಸಾಮೂಹಿಕ ಪ್ರತಿಜ್ಞೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ಯುವಜನತೆ ಇದಕ್ಕೆ ಅತಿಯಾಗಿ ಅಂಟಿಕೊಂಡು ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಇದನ್ನು ಗಂಭೀರವಾಗಿ ಪರಿಗಣಿಸಿ ಅನೇಕ ಕಾರ್ಯಕ್ರಮ ಮತ್ತು ಯೋಜನೆಗಳನ್ನು ಹಮ್ಮಿಕೊಳ್ಳುವ ಮೂಲಕ ಇದನ್ನು ತಡೆಯಲು ಸಾಕಷ್ಟು ಪ್ರಯತ್ನ ಮಾಡುತ್ತಿದೆ.ಈ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ನ್ಯಾಯಧೀಶರು ಹೇಳಿದರು.
ಇದೇ ಸಂದರ್ಭದಲ್ಲಿ ನಶಾಮುಕ್ತ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.ಜಿಲ್ಲಾ ಪಂಚಾಯತ್ ಆವರಣದಲ್ಲಿ ಸಸಿ ನೆಡುವ ಮೂಲಕ ಅರ್ಥಪೂರ್ಣವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಧರಣೇಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಶಿರಸಗಿ, ಜಿಲ್ಲಾ ಆಯುಷ್ ಅಧಿಕಾರಿ ವಂದನಾ ಗಾಳಿ,ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

