ಯಾದಗಿರಿ: ನ್ಯಾ. ನಾಗಮೋಹನದಾಸ್ ಸಮಿತಿಯ ಒಳಮೀಸಲಾತಿ ವರದಿಯನ್ನು ಖಂಡಿಸಿ ಬಲಗೈ ಸಮುದಾಯವು ಆಗಸ್ಟ್ 14ರಂದು(ನಾಳೆ) ನಗರದ ಅಂಬೇಡ್ಕರ್ ನಗರದಿಂದ ಸುಭಾಷ್‌ಚಂದ್ರ ಬೋಸ್ ವೃತ್ತದವರೆಗೆ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ನಗರದ ಹಳೆ ಪ್ರವಾಸ ಮಂದಿರದಲ್ಲಿ ನಡೆದ ಸಭೆಯಲ್ಲಿ ಬಲಗೈ ಸಮುದಾಯದ 100ಕ್ಕೂ ಹೆಚ್ಚು ಸದಸ್ಯರು ಭಾಗವಹಿಸಿ, ವರದಿಯಲ್ಲಿ ತಮ್ಮ ಸಮುದಾಯಕ್ಕೆ ಜನಸಂಖ್ಯೆಗೆ ತಕ್ಕ ಮೀಸಲಾತಿ ನೀಡದ ಮೂಲಕ ಉದ್ದೇಶಪೂರ್ವಕವಾಗಿ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದರು. ಈ ನಿರ್ಧಾರ ಮುಂದಿನ ಪೀಳಿಗೆಯ ಭವಿಷ್ಯಕ್ಕೆ ಹಾನಿಕಾರಕವಾಗಲಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
“ವರದಿ ಜಾರಿಯಾಗಲು ಬಿಡುವುದಿಲ್ಲ” ಎಂದು ಸಮಾಜದ ಮುಖಂಡರು ಎಚ್ಚರಿಕೆ ನೀಡಿದ್ದು, ನಾಳೆಯ ಪ್ರತಿಭಟನೆಯಲ್ಲಿ ಜಿಲ್ಲೆಯ ಸಾವಿರಾರು ಜನರು ಆಗಮಿಸಿ ಭಾಗವಹಿಸುವಂತೆ ಕರೆ ನೀಡಿದರು.
ಸಭೆಯಲ್ಲಿ ಹಿರಿಯ ಮುಖಂಡರು ಹಾಗೂ ಯುವಕರು ಉಪಸ್ಥಿತರಿದ್ದರು.

