ಸತ್ಯಕಾಮ ವಾರ್ತೆ ಯಾದಗಿರಿ:
ಮೂರುವರೆ ದಶಕಗದಿಂದ ಹೋರಾಟ ನಡೆಸಿದರು ರಾಜ್ಯದಲ್ಲಿ ಮಾದಿಗರಿಗೆ ಒಳ ಮೀಸಲಾತಿ ರಾಜ್ಯ ಸರ್ಕಾರ ನೀಡುತ್ತಿಲ್ಲ ಪ್ರಸ್ತುತ ಸಿಎಂ ಸಿದ್ದರಾಮಯ್ಯ ಮಾದಿಗರಲ್ಲಿ ಗೊಂದಲ ಸೃಷ್ಟಿಸುತ್ತ ವಿನಾಕಾರಣ ವಿಳಂಬ ಧೋರಣೆ ಅನುಸರಿಸುತ್ತ ಇರುವುದನ್ನು ಖಂಡಿಸಿ ಯಾದಗಿರಿ ಜಿಲ್ಲೆ ವತಿಯಿಂದ ಆಗಸ್ಟ್ 1 ನಗರದಲ್ಲಿ ಜಿಲ್ಲಾ ಮಾದಿಗ ಸಮಾಜದ ವತಿಯಿಂದ ಸಮಾಜದ ಪಕ್ಷಾತೀತವಾಗಿ ಬೃಹತ್ ಪ್ರತಿಭಟನೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಅಲೆಮಾರಿ ಅರೆ ಅಲೆಮಾರಿ ನಿಗಮದ ಅಧ್ಯಕ್ಷರಾದ ರಾಜ್ಯಮಾದಿಗ ಸಮಾಜದ ಮುಖಂಡರಾದ ದೇವಿಂದ್ರನಾಥ್ ನಾದ್ ತಿಳಿಸಿದರು.
ಸೈದಾಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಮಾಜದ ಬಾಂಧವರನ್ನು ಉದ್ದೇಶಿಸಿ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯನವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಮೊದಲ ಅಧಿವೇಶನದಲ್ಲಿಯೇ ಜಾರಿಗೆ ತರುತ್ತೇನೆ ಎಂದು ಸುಳ್ಳು ಹೇಳುತ್ತಾ ದಲಿತರಲ್ಲಿ ಜಗಳ ಹಚ್ಚುವ ಕೆಲಸ ಮೋಸ ಮಾಡುತ್ತಾ ಕಾಲ ಹರಣ ಮಾಡುತ್ತಿದ್ದಾರೆ ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಈಗಾಗಲೇ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ಬಂದಿವೆ ಸುಪ್ರೀಂ ಕೋರ್ಟ್ ಒಳ ಮೀಸಲಾತಿ ಆದೇಶ ನೀಡಿ ಆಗಸ್ಟ್ 1 ಆದೇಶ ನೀಡಿ ಒಂದು ವರ್ಷ ಗತಿಸಿದರು ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ಮಾಡದೆ ಮಾದಿಗರಲ್ಲಿ ತಾಳ್ಮೆ ಕಟ್ಟೆ ಒಡೆದಿದೆ ಮುಂದೆ ಆಗುವ ಅನಾಹುತಗಳಿಗೆ ಸರಕಾರವೇ ಜವಾಬ್ದಾರಿ ಎಂದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಹಣಮಂತ ಇಟಗಿ, ನ್ಯಾಯವಾದಿಗಳಾದ ಚೆನ್ನಯ್ಯ ಮ್ಯಾಳಿಕೇರಿ, ನಿಂಗಪ್ಪ ವಡ್ನಳ್ಳಿ, ಆಂಜನೇಯ ಬಬಲಾದಿ, ಚಂದ್ರಶೇಖರ್ ಕಡೆಸೂರ್, ಸಂಜೀವಪ್ಪ, ರಾಜು ಕೂಡ್ಲೂರ್, ಭಿಮಾಸೆಪ್ಪ್, ನರಸಪ್ಪ ನೀಲಳ್ಳಿ, ಮಲ್ಲಿಕಾರ್ಜುನ್ ಕೊಡ್ಲೂರ್, ಸಾಗರ್, ಮೌನೇಶ್, ಸಹದೇವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

