Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News | Districts Yadgir

ಚಳಿಗಾಲದ ಅಧಿವೇಶನದಲ್ಲಿ ಸರ್ಕಾರಿ ಆತಿಥ್ಯ ತಿರಸ್ಕರಿಸಲು ಶಾಸಕ ಶರಣಗೌಡ ಕಂದಕೂರ ನಿರ್ಧಾರ

ಯಾದಗಿರಿ: ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ನಿರ್ಲಕ್ಷ್ಯ ಖಂಡಿಸಿ, ಬೆಳಗಾವಿಯಲ್ಲಿ ನಡೆಯಲಿರುವ ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರಿ ವಸತಿ, ಊಟೋಪಚಾರ ಸೇರಿದಂತೆ ಯಾವುದೇ ಅಧಿಕೃತ ಆತಿಥ್ಯ ಹಾಗೂ ಭತ್ಯೆಗಳನ್ನು ಸ್ವೀಕರಿಸದೆ, ಸ್ವಂತ ಖರ್ಚಿನಲ್ಲೇ ಅಧಿವೇಶನದಲ್ಲಿ ಪಾಲ್ಗೊಳ್ಳಲು ಗುರುಮಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ನಿರ್ಧರಿಸಿದ್ದಾರೆ.

ಈ ಕುರಿತು ವಿಧಾನಸಭೆಯ ಸಭಾಧ್ಯಕ್ಷರಿಗೆ ಪತ್ರ ಬರೆದಿರುವ ಅವರು, ಅಧಿವೇಶನದ ಅವಧಿಯಲ್ಲಿ ವಸತಿ, ಊಟ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಸ್ವಂತ ಖರ್ಚಿನಲ್ಲಿ ಮಾಡಿಕೊಳ್ಳಲು ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ.

news_1794994966_0_165.webp

ಈ ಹಿಂದಿನ ಚಳಿಗಾಲದ ಅಧಿವೇಶನದಲ್ಲಿಯೂ ಶರಣಗೌಡ ಕಂದಕೂರ ಅವರು ಇದೇ ನಿಲುವು ತಳೆದು, ಸರ್ಕಾರದಿಂದ ಒದಗಿಸುವ ಸೌಲಭ್ಯಗಳನ್ನು ತಿರಸ್ಕರಿಸಿ ಸ್ವಂತ ಖರ್ಚಿನಲ್ಲಿ ಅಧಿವೇಶನದಲ್ಲಿ ಭಾಗವಹಿಸಿದ್ದರು.

ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಉದ್ದೇಶ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಸಮಸ್ಯೆಗಳಿಗೆ ಧ್ವನಿಯಾಗುವುದು ಮತ್ತು ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಚರ್ಚೆ ನಡೆಸುವುದಾಗಿದೆ. ಆದರೆ, ಅಧಿವೇಶನಗಳಲ್ಲಿ ಹಲವು ಸಮಸ್ಯೆಗಳ ಕುರಿತು ಚರ್ಚೆ ನಡೆದರೂ ಅವುಗಳಿಗೆ ನಿರೀಕ್ಷಿತ ಮಟ್ಟದಲ್ಲಿ ಪರಿಹಾರ ದೊರೆಯುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

news_1794994977_0_987.webp

 

news_1794994977_0_987.webp

ಪ್ರದೇಶದಲ್ಲಿ ಮರುಕಳಿಸುತ್ತಿರುವ ಬರಗಾಲ, ಅತಿವೃಷ್ಟಿ, ಕೃಷಿ ಸಂಕಷ್ಟ, ನಿರುದ್ಯೋಗ, ಬಡತನ, ಶಿಕ್ಷಣ, ಆರೋಗ್ಯ ಮತ್ತು ಕುಡಿಯುವ ನೀರಿನ ಸಮಸ್ಯೆಗಳು ಇನ್ನೂ ಬಗೆಹರಿದಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಉದ್ಯೋಗ ಹಾಗೂ ಜೀವನೋಪಾಯ ಅರಸಿ ಯಾದಗಿರಿ ಸೇರಿದಂತೆ ಉತ್ತರ ಕರ್ನಾಟಕದ ಜನರು ಬೆಂಗಳೂರು, ಮುಂಬೈ, ಪುಣೆ ಮತ್ತು ಹೈದರಾಬಾದ್‌ನಂತಹ ನಗರಗಳಿಗೆ ವಲಸೆ ಹೋಗುತ್ತಿರುವುದು ಈ ಭಾಗದ ಹದಗೆಟ್ಟ ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಗೆ ಸಾಕ್ಷಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಧಿವೇಶನ ನಡೆಸಲು ಸರ್ಕಾರ ಕೋಟ್ಯಂತರ ರೂಪಾಯಿ ಸಾರ್ವಜನಿಕ ಹಣ ವ್ಯಯಿಸುತ್ತಿದ್ದರೂ, ಜನರ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ ಇಂತಹ ಅಧಿವೇಶನಗಳ ಉದ್ದೇಶವೇನು ಎಂಬ ಪ್ರಶ್ನೆಯನ್ನೂ ಅವರು ಎತ್ತಿದ್ದಾರೆ.

ಜನಪ್ರತಿನಿಧಿಗಳು ಜನರ ಆಶೋತ್ತರಗಳಿಗೆ ಸ್ಪಂದಿಸಿ, ಸದನದಲ್ಲಿ ವ್ಯಕ್ತವಾಗುವ ಬೇಡಿಕೆಗಳನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಸರ್ಕಾರಿ ಸೌಲಭ್ಯ ಹಾಗೂ ಭತ್ಯೆಗಳನ್ನು ನಿರಾಕರಿಸುವ ಮೂಲಕ ತಮ್ಮ ಪ್ರತಿಭಟನೆಯನ್ನು ಮುಂದುವರಿಸಲು ಶಾಸಕ ಶರಣಗೌಡ ಕಂದಕೂರ ಮುಂದಾಗಿದ್ದಾರೆ.

Author
Kudhan Sab
ನಾನು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಳೆದ ಆರು ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಸ್ತುತ ಸತ್ಯಕಾಮ ಪ್ರಾದೇಶಿಕ ಪತ್ರಿಕೆಯಲ್ಲಿ ಪತ್ರಕರ್ತನಾಗಿ ಸೇವೆ ಸಲ್ಲಿಸುತ್ತಿದ್ದು, ಜನಪರ ವಿಚಾರಗಳು, ಸ್ಥಳೀಯ ಸಮಸ್ಯೆಗಳು ಹಾಗೂ ಸಾರ್ವಜನಿಕ ಹಿತಾಸಕ್ತಿಯ ಸುದ್ದಿಗಳನ್ನು ವಸ್ತುನಿಷ್ಠವಾಗಿ ಜನರಿಗೆ ತಲುಪಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸುರಪುರ: ಉದ್ಯೋಗ ಖಾತ್ರಿ ಹಣ ದುರುಪಯೋಗ: ಇಬ್ಬರಿಗೆ ಜೈಲು ಶಿಕ್ಷೆಚಳಿಗಾಲದ ಅಧಿವೇಶನದಲ್ಲಿ ಸರ್ಕಾರಿ ಆತಿಥ್ಯ ತಿರಸ್ಕರಿಸಲು ಶಾಸಕ ಶರಣಗೌಡ ಕಂದಕೂರ ನಿರ್ಧಾರಔರಾದ್ ಬಂದ್ ಸಂಪೂರ್ಣ ಯಶಸ್ವಿ; ವಾರದೊಳಗೆ ನೀರಿನ ಸಮಸ್ಯೆ ಪರಿಹಾರದ ಭರವಸೆಬೆಳಗಾವಿ ಮಾದರಿ ದರ ನೀಡದಿದ್ದರೆ ಯರಗಲ್ಲ್ ಕಾರ್ಖಾನೆ ಬಂದ್'ಗೆ ರೈತರ ಸಂಘ ನಿರ್ಧಾರ; ಶಾಂತಗೌಡ ಪಾಟೀಲ್ಕಳ್ಳತನ ಪ್ರಕರಣ ರಾಜಿ ಮಾಡಿಸಲು 50 ಸಾವಿರ ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಸಿಬ್ಬಂದಿರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಖಂಡನೆ: ನ.12 ರಂದು ಜೆಡಿಎಸ್ ನಿಂದ ಬೃಹತ್ ಬೈಕ್ ರ್ಯಾಲಿYadgir: ನಿರ್ಮಾಣ ಹಂತದ ಸೇತುವೆಗೆ ಕಾರು ಡಿಕ್ಕಿ; ನಾಲ್ವರು ಸಾವುಪಂಚಾಯಿತಿಯ ಸ್ಥಿತಿಯೇ ಹೀಗಾದರೆ ಗ್ರಾಮದ ಗತಿಯೇನು?ಬಿಎಸ್‌ಎನ್‌ಎಲ್ ಟವರ್ ಅಳವಡಿಸುವ ನೆಪದಲ್ಲಿ 2.43 ಲಕ್ಷ ವಂಚನೆಶಹಾಪುರ: ನಿವೃತ್ತ ಉಪನ್ಯಾಸಕರಿಗೆ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 10 ಲಕ್ಷ ವಂಚನೆ!