Blog

  • ಯಾದಗಿರಿ: ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಂಸದ ಜಿ ಕುಮಾರ ನಾಯಕ ಭೇಟಿ

    ಯಾದಗಿರಿ: ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಂಸದ ಜಿ ಕುಮಾರ ನಾಯಕ ಭೇಟಿ

    • ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರೊಡನೆ ಪಕ್ಷದ ಬಲವರ್ಧನೆ ಬಗ್ಗೆ ಚರ್ಚೆ ಅಭಿಪ್ರಾಯ ಸಂಗ್ರಹ

    ಸತ್ಯಕಾಮ ವಾರ್ತೆ ಯಾದಗಿರಿ:

    ಮುಂಬರುವ ತಾಲ್ಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನ ಮಂತ್ರವನ್ನು ಜಪಿಸುವ ಮೂಲಕ ಪಕ್ಷವನ್ನು ಬಲವರ್ಧನೆ ಗೊಳಿಸಿ, ಅತಿ ಹೆಚ್ಚು ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯ ನಿರ್ವಹಿಸಬೇಕು ಎಂದು ರಾಯಚೂರು ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ ಕುಮಾರ ನಾಯಕ ಹೇಳಿದರು.

     

    ಶನಿವಾರ ಇಲ್ಲಿನ  ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾಂಗ್ರೆಸ್‌ನ ಹಿರಿಯ ಮುಖಂಡರೊಡನೆ ಸಭೆ ನಡೆಸಿ  ಅವರು ಮಾತನಾಡಿದರು. ಬಳಿಕ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು.

    ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಬಸರೆಡ್ಡಿ ಅನಪೂರ್, ರಾಘವೇಂದ್ರ ಮಾನಸಗಲ್ ,ಡಾ ಭೀಮಣ್ಣ ಮೇಟಿ, ಸೇರಿದಂತೆ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರು ಮಹಿಳಾ ಘಟಕದ ಕಾಂಗ್ರೆಸ್ ಅಧ್ಯಕ್ಷರು ಮಾಜಿ ಕಾಂಗ್ರೆಸ್ ಬ್ಲಾಕ್‌ ಅಧ್ಯಕ್ಷರು ಮಹಿಳಾ ಘಟಕದ ಘಟಕದ ಅಧ್ಯಕ್ಷರು ಉಪಾಧ್ಯಕ್ಷರು ಮುಂಚೂಣಿ ಘಟಕದ ಅಧ್ಯಕ್ಷರುಗಳು ಸೇರಿದಂತೆ ಕಾಂಗ್ರೆಸ್‌ ಹಿರಿಯ ಮುಖಂಡರು ಕಾರ್ಯಕರ್ತರು ಹಾಜರಿದ್ದರು..

    apvc-iconPost Views: 25
  • ಗೆಸ್ಟ್ ಹೌಸ್ ನಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

    ಗೆಸ್ಟ್ ಹೌಸ್ ನಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

    ಸತ್ಯಕಾಮ ವಾರ್ತೆ ಕಲಬುರಗಿ:

    ನಗರದ ದರ್ಗಾ ಏರಿಯಾದಲ್ಲಿರುವ ಇಂಡಿಯನ್ ಗೆಸ್ಟ್ ಹೌಸ್ ನಲ್ಲಿ ಸಾಧಿಕಾ ಮನಿಯಾರ್ (25) ಎಂಬ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಪತಿ ಅಬ್ದುಲ್ ರಹೀಮ್ ಜೊತೆ ಕಲಬುರಗಿಯಲ್ಲಿರುವ ಖಾಜಾ ಬಂದೇ ನವಾಜ್ ದರ್ಗಾದ ಭೇಟಿ ನೀಡಲು ಕಲಬುರಗಿಗೆ ಆಗಮಿಸಿದ್ದರು

    ನಿನ್ನೆ ಸಂಜೆ ಪತ್ನಿಗೆ ಲಾಡ್ಜ್ ನಲ್ಲಿ ಬಿಟ್ಟು ಪತಿ ಅಬ್ದುಲ್ ರಹೀಮ್ ಅಧೋನಿಗೆ ತೆರಳಿದ್ದ, ಬೆಳಗಾಗುವಷ್ಟರಲ್ಲೆ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಈ ಘಟನೆ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

    apvc-iconPost Views: 53
  • ಕಾಣೆಯಾದ ಮಹಿಳೆಯ ಪತ್ತೆಗೆ ಮನವಿ

    ಕಾಣೆಯಾದ ಮಹಿಳೆಯ ಪತ್ತೆಗೆ ಮನವಿ

    ಸತ್ಯಕಾಮ ವಾರ್ತೆ ಯಾದಗಿರಿ:

    ಜಿಲ್ಲೆಯ ಯಾದಗಿರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸದರ ದರ್ವಾಜ ನಗರದ ನುಸ್ಸರ್ತ ತಂದೆ ಮೈಹಿಬೂಬ ಕುರೇಶಿ ಕಾಣೆಯಾದ ಮಹಿಳೆ 2024ರ ನವೆಂಬರ್ 12ರ ಮಂಗಳವಾರ ರಂದು ಬೆಳಿಗ್ಗೆ ಮನೆಯಿಂದ ಊಟ ಮಾಡಿ ಹೊರಗಡೆ ಹೋದವಳು ಮರಳಿ ಮನೆಗೆ ಬಂದಿರುವುದಿಲ್ಲ ಹಿನ್ನೆಲೆ ಈ ಕುರಿತು ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ ಎಂದು ಯಾದಗಿರಿ ನಗರ ಪೊಲೀಸ್ ಠಾಣೆ ಠಾಣಾಧಿಕಾರಿ ಅವರು ತಿಳಿಸಿದ್ದಾರೆ.

    ಮನೆಯಲ್ಲಿ ಊಟ ಮಾಡಿ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ನಮ್ಮ ಅಕ್ಕ ಶಮಿಬೇಗಂ ಇವರ ಮನೆಗೆ ಊಟಕೊಟು ಬರಲು ನಮ್ಮ ತಾಯಿ ಕಳಿಸಿದ್ದು, ಇನ್ನೂ ಸಂಜೆ 6 ಗಂಟೆಯಾದರು ಇನ್ನೂ ಮನೆಗೆ ಬಂದಿರುವುದಿಲ್ಲ, ಅಂತ ನಮ್ಮ ಅಕ್ಕ ಶಮೀಬೇಗಂ ಇವರಿಗೆ ಪೋನ್ ಮಾಡಿ ವಿಚಾರಿಸಲಾಗಿ ನುಸ್ಸರ್ತ ನಮ್ಮ ಮನೆಗೆ ಇವತ್ತು ಬಂದಿರುವುದಿಲ್ಲ, ಅಂತ ತಿಳಿಸಿದಳು. ಆಗ ನಾನು ನಮ್ಮ ಅಕ್ಕ ಶಮೀಬೇಗಂ ನಮ್ಮ ತಾಯಿ ಎಲ್ಲಾರು ಗಾಬರಿಯಾಗಿ ಯಾದಗಿರಿ ನಗರದಲ್ಲಿ ಹುಡುಗಾಡಲಾಗಿ ಸಿಗದ ಕಾರಣ ನಮ್ಮ ಸಂಬAಧಿಕರಿಗೆ ನುಸ್ಸರ್ತ ಇಮ್ಮಲ್ಲಿಗೆ ಬಂದಿರುವ ಬಗ್ಗೆ ವಿಚಾರಿಸಲಾಗಿ ಬಂದಿರುವುದಿಲ್ಲ ಅಂತ ತಿಳಿಸಿದರು, ನಾವು 2024ರ ನವೆಂಬರ್ 12 ರಿಂದ ಇಲ್ಲಿಯ ವರೆಗೆ ನುಸ್ಸರ್ತಳು ಹುಡಿಕಾಡಿಲಾಗಿ ಇರುವಿಕೆ ಬಗ್ಗೆ ಯಾವುದೇ ಮಾಹಿತಿ ಬಂದಿರುವುದಿಲ್ಲ, ಇಂದು ತಡವಾಗಿ ಪೊಲೀಸ್ ಠಾಣೆಗೆ ಬಂದು ಫರ‍್ಯಾದಿ ಸಲ್ಲಿಸಿದ್ದು, ಇರುತ್ತದೆ.

    ಮಹಿಳೆಯ ಚಹರೆ ಪಟ್ಟಿ 25 ವರ್ಷ ಇದ್ದು, ಅಂದಾಜು 5 ಫೀಟ್ ಎತ್ತರ ಇದ್ದು, ನುಸ್ಸರ್ತ ಇವಳಿಗೆ ಮಾನಸಿಕ ಅಸ್ವಸಂತ್ತಾಳಾಗಿದ್ದಳು, ಕನ್ನಡ ಮತ್ತು ಹಿಂದಿ ಭಾಷೆ ಮಾತನಾಡುತ್ತಾನೆ. ಮಹಿಳೆಯ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಯಾದಗಿರಿ ನಗರ ಠಾಣೆಗೆ ಅಥವಾ ಯಾದಗಿರಿ ಮೊ.ನಂ.8147108970 ಕರೆ ಮಾಡಲು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    apvc-iconPost Views: 7
  • ಯಾದಗಿರಿ: ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಂಸದ ಜಿ ಕುಮಾರ ನಾಯಕ ಸಭೆ

    ಯಾದಗಿರಿ: ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಂಸದ ಜಿ ಕುಮಾರ ನಾಯಕ ಸಭೆ

    ಸತ್ಯಕಾಮ ವಾರ್ತೆ ಯಾದಗಿರಿ:
    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲವೀಶ್ ಒರಡಿಯಾರವರೊಂದಿಗೆ ಜಿಲ್ಲೆಯ ಕೃಷಿ, ಹೈನುಗಾರಿಕೆ, ರೇಷ್ಮೆ ಮತ್ತು ಮೀನುಗಾರಿಕೆಯ ಸಂಬಂಧಪಟ್ಟಂತಹ ಇಲಾಖೆ ಅಧಿಕಾರಿಗಳೊಂದಿಗೆ ಸಂಸದ ಜಿ ಕುಮಾರ ನಾಯಕ ಸಭೆ ನಡೆಸಿದರು.

    ಈ ವೇಳೆ ಮಾತನಾಡಿದ ಸಂಸದ ಜಿ ಕುಮಾರ ನಾಯಕ ರೈತರು ಕೇವಲ ಕೃಷಿಗೆ ಸೀಮಿತವಾಗದೆ ರೈತರು ಜೇನು ಸಾಗಾಣಿಕೆ, ಹೈನುಗಾರಿಕೆ, ಮೀನು ಸಾಗಾಣಿಕೆ, ಕೋಳಿ ಸಾಗಾಣಿಕೆ ಬಗ್ಗೆ ಅವರಿಗೆ ಸಲಹೆಗಳನ್ನು ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

    ಅಧಿಕಾರಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಸಿಗುವಂತಹ ಸಾಲ ಸೌಲಭ್ಯಗಳು ಯೋಜನೆಗಳ ಕುರಿತು ಸರಿಯಾದ ಮಾಹಿತಿ ನೀಡಿ ರೈತರ ಆರ್ಥಿಕತೆಯನ್ನು ಹೆಚ್ಚಿಸುವುದು ನಮ್ಮ ನಿಮ್ಮೆಲ್ಲರ ಜವಾಬ್ದಾರಿ ರೈತರ ಆರ್ಥಿಕತೆ ಹಾಗೂ ಬೆಳವಣಿಗೆಗೊಂಡಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲವೀಶ್ ಒರಡಿಯಾ ಸೇರಿದಂತೆ ಜಿಲ್ಲೆಯ ಅನೇಕ ಅಧಿಕಾರಿಗಳು ಹಾಜರಿದ್ದರು.

    apvc-iconPost Views: 270
  • ಜನಪರ ಚಿಂತಕ, ದೂರದೃಷ್ಟಿಯ ಅಭಿವೃದ್ಧಿಯ ಹರಿಕಾರ ಬಾಪುಗೌಡರು: ಕೇದಾರಲಿಂಗಯ್ಯ ಹಿರೇಮಠ 

    ಜನಪರ ಚಿಂತಕ, ದೂರದೃಷ್ಟಿಯ ಅಭಿವೃದ್ಧಿಯ ಹರಿಕಾರ ಬಾಪುಗೌಡರು: ಕೇದಾರಲಿಂಗಯ್ಯ ಹಿರೇಮಠ 

    ಸತ್ಯಕಾಮ ವಾರ್ತೆ ಶಹಾಪುರ: 

    ಕರ್ನಾಟಕದ ಅಪರೂಪದ ರಾಜಕೀಯ ಮುತ್ಸದ್ಧಿ, ದೀಮಂತ ನಾಯಕರಾಗಿದ್ದ ಬಾಪುಗೌಡ ದರ್ಶನಾಪುರ ಅವರು ಸತ್ಯ, ಪ್ರಾಮಾಣಿಕತೆ, ದಕ್ಷತೆಯ, ನೇರ ನಡೆನುಡಿಯ ಜನಪರ ಚಿಂತಕ ಹಾಗೂ ದೂರದೃಷ್ಟಿಯ ಅಭಿವೃದ್ಧಿಯ ಹರಿಕಾರರಾಗಿ ಇಂದಿಗೂ ನಾಡಿನ ಜನತೆಯ ಮನಸ್ಸಿನಲ್ಲಿ ಶಾಶ್ವತವಾಗಿದ್ದಾರೆ ಎಂದು ರೈತ ಹೋರಾಟಗಾರ ಹಾಗೂ ಪ್ರಗತಿಪರ ಚಿಂತಕರಾದ ಕೇದಾರಲಿಂಗಯ್ಯ ಹಿರೇಮಠ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

     

    ನಗರದ ಚರಬಸವೇಶ್ವರ ಪ್ರೌಢಶಾಲೆಯ ಆವರಣದಲ್ಲಿ ಚರಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯ ವತಿಯಿಂದ ಹಮ್ಮಿಕೊಂಡ ಜನಾನುರಾಗಿ ಬಾಪುಗೌಡ ದರ್ಶನಾಪುರ ಅವರ ೩೬ನೇ ಪುಣ್ಯಸ್ಮರಣೆಯ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದ ಅವರು ಶಹಾಪುರ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ ಬಾಪುಗೌಡರ ವಿಚಾರಗಳಿಗೆ ಶಾಸನ ಸಭೆಗಳಲ್ಲಿ ತುಂಬಾ ಮಹತ್ವವಿತ್ತು. ಭೀಮರಾಯನಗುಡಿಯಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಯ ಮುಖ್ಯ ಕೇಂದ್ರ ಕಛೇರಿ ಸ್ಥಾಪಿಸಿ ಕಲ್ಯಾಣ ಕರ್ನಾಟಕದ್ಯಾಂತ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯಗಳನ್ನು ಒದಗಿಸಿದರು. ವಸತಿ ಸೌಕರ್ಯಕ್ಕಾಗಿ ಅನೇಕ ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತಂದರು. ದೀನ-ದಲಿತರ, ಶೋಷಿತರ, ಹಿಂದುಳಿದ ವರ್ಗಗಳ ಸೇರಿದಂತೆ ಎಲ್ಲಾ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸಿದ ರಾಜಕೀಯ ಚೇತನರಾಗಿದ್ದಾರೆ ಎಂದು ಹಲವಾರು ನಿರ್ದೇಶನಗಳ ಮೂಲಕ ತಿಳಿಸಿದರು.

    ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣ ಕಮಕನೂರ ಅವರು ಮಾತನಾಡಿ ಬಹು ಅಂತಃಕರಣವುಳ್ಳ ರಾಜಕಾರಣಿಯಾಗಿದ್ದ ಬಾಪುಗೌಡರ ಸಾಮಾಜಿಕ ಕಳಕಳಿ, ಅಭಿವೃದ್ಧಿಯ ಚಿಂತನೆ, ಕೃಷಿ, ನೀರಾವರಿ, ಶೈಕ್ಷಣಿಕ ಅಭಿವೃದ್ಧಿಯ ಕಾರ್ಯಗಳು ಅವರನ್ನು ಕರ್ನಾಟಕದ ಅಪರೂಪದ ಸಜ್ಜನಿಕೆಯ ರಾಜಕಾರಣಿಯಾಗಿ ಮಾಡಿದವು. ತಂದೆಯ ಹಾದಿಯಲ್ಲಿ ಸಾಗಿರುವ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ರಾಜ್ಯ ರಾಜಕಾರಣದಲ್ಲಿ ಅಪರೂಪದ ಸರಳ ಸಜ್ಜನಿಕೆಯ ಮಾದರಿ ಜನನಾಯಕರಾಗಿ ಎಲ್ಲರ ಪ್ರೀತಿ ವಿಶ್ವಾಸಗಳಿಗೆ ಪಾತ್ರರಾಗಿದ್ದಾರೆ. ನಾಡಿನ ಅಭಿವೃದ್ಧಿಯ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಬದ್ಧತೆಯ ಹೆಮ್ಮೆಯ ನಾಯಕರಾಗಿದ್ದಾರೆ. ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿಗಳಾದ ಬಸವರಾಜಪ್ಪಗೌಡ ದರ್ಶನಾಪುರ ಅವರ ಧಾರ್ಮಿಕ, ಸಾಮಾಜಿಕ ಸೇವಾ ಕಾರ್ಯಗಳನ್ನು ಶ್ಲಾಘಿಸಿದರು.

     

    ಚರಬಸವೇಶ್ವರ ಗದ್ದುಗೆ ಸಂಸ್ಥಾನದ ವೇದಾಮೂರ್ತಿ ಬಸವಯ್ಯ ಶರಣರು, ನಾಗನಟಿಗಿಯ ಸಿದ್ಧರಾಮೇಶ್ವರ ಸ್ವಾಮಿಜಿಯವರು ಸಾನಿಧ್ಯ ವಹಿಸಿದ್ದರು. ಸಚಿವ ಶರಣಬಸಪ್ಪಗೌಡ ದರ್ಶನಾಪುರ, ಯಾದಗಿರಿ ಶಾಸಕ ಚೆನ್ನಾರಡ್ಡಿ ಪಾಟೀಲ ತುನ್ನೂರ, ಕಲಬುರ್ಗಿ ದಕ್ಷಿಣಕ್ಷೇತ್ರದ ಶಾಸಕ ಅಲಮಪ್ರಭು ಪಾಟೀಲ, ಆರ್.ಎಚ್. ಪಾಟೀಲ, ಚರಬಸವೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜಪ್ಪಗೌಡ ದರ್ಶನಾಪುರ, ಚಂದ್ರಶೇಖರ ಆರಬೋಳ, ಶಂಕ್ರಣ್ಣ ವಣಿಕ್ಯಾಳ, ಭೀಮರಡ್ಡಿ ಬೈರಡ್ಡಿ, ಶರಣಪ್ಪ ಸಲಾದಪುರ, ವಾಮನರಾವ ದೇಶಪಾಂಡೆ, ಸಿದ್ಧಲಿಂಗಣ್ಣ ಆನೆಗುಂದಿ, ಸಂತೋಷ ದೇವದುರ್ಗ, ಮಲ್ಲಿಕಾರ್ಜುನ ಪೂಜಾರಿ, ನೀಲಕಂಠ ಬಡಿಗೇರ, ಸಣ್ಣನಿಂಗಪ್ಪ ನಾಯ್ಕೋಡಿ, ಬಸವರಾಜ ಹಿರೇಮಠ, ಗುಂಡಪ್ಪ ತುಂಬಗಿ, ಬಸವರಾಜ ಹೇರುಂಡಿ, ಅಲ್ಲಾಪಟೇಲ ಮಕ್ತಾಪುರ, ಇಬ್ರಾಹಿಂ ಶಿರವಾಳ, ಇಸ್ಮಾಯಿಲ್ ಚಾಂದ್, ತಲತ್‌ಚಾಂದ್, ಮಲ್ಲಣ್ಣ ಉಳ್ಳುಂಡಗೇರಿ, ಆನಂದ ದೊಡ್ಡಮನಿ, ಬಾಪುಗೌಡ, ವಿಜಯಕುಮಾರ ಎದರಮನಿ, ಮಹಾದೇವಪ್ಪ ಸಾಲಿಮನಿ, ಗುರುಬಾಣತಿಹಾಳ, ಬಸವರಾಜ ಪಾಟೀಲ ಕೆಂಭಾವಿ, ಸಿದ್ಧಣ್ಣ ಗೌಡ, ಹಣಮಂತ್ರಾಯ ದೊರೆ, ಶಾಂತಗೌಡ ನಾಗನಟಗಿ, ಗೌಡಪ್ಪಗೌಡ ಆಲ್ದಾಳ, ಪ್ರೌಢಶಾಲೆಯ ಮುಖ್ಯಗುರು ತಿಪ್ಪಣ್ಣ ಜಮಾದಾರ, ಪಿ.ಯು. ಕಾಲೇಜಿನ ಪ್ರಾಂಶುಪಾಲ ಧರ್ಮಣ್ಣಗೌಡ ಬಿರಾದಾರ ಮುಂತಾದ ಅನೇಕ ರಾಜಕೀಯ ಮುಖಂಡರು ಹಾಗೂ ಬಾಪುಗೌಡ ದರ್ಶನಾಪುರ ಅವರ ಅಪಾರ ಅಭಿಮಾನಿಗಳು ಪಾಲ್ಗೊಂಡಿದ್ದರು.

     

    ಈ ಸಂದರ್ಭದಲ್ಲಿ ಚರಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯ ಪ್ರೌಢಶಾಲೆ, ಪದವಿಪೂರ್ವ ಮತ್ತು ಪದವಿ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಶಿಕ್ಷಕ ಅರುಣಕುಮಾರ ಜೇವರ್ಗಿ ನಿರೂಪಿಸಿದರು. ಶಿಕ್ಷಕ ಶರಣಯ್ಯಸ್ವಾಮಿ ಹಿರೇಮಠ ಸ್ವಾಗತಿಸಿದರು. ಪ್ರಾಂಶುಪಾಲ ಪ್ರೊ. ಶಿವಲಿಂಗಣ್ಣ ಸಾಹು ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಸುರೇಶ ದೊರೆ ಮುಡಬೂಳ ವಂದಿಸಿದರು.

     

    ಸಂಗೀತ ಕಲಾವಿದರಾದ ಮಲ್ಲಯ್ಯಸ್ವಾಮಿ ಹಿರೇಮಠ, ಬಸವರಾಜ ವಿಶ್ವಕರ್ಮ ಹಾಗೂ ಸಂಗಡಿಗರಿಂದ ಸಂಗೀತ ಕಾರ್ಯಕ್ರಮ ಜರುಗಿತು.

     

    apvc-iconPost Views: 161
  • ದೇವಾಲಯಗಳು ಶಾಂತಿ-ನೆಮ್ಮದಿ ನೀಡುವ ಪುಣ್ಯಸ್ಥಳಗಳು- ಸಿದ್ದಲಿಂಗ ಸ್ವಾಮೀಜಿ

    ದೇವಾಲಯಗಳು ಶಾಂತಿ-ನೆಮ್ಮದಿ ನೀಡುವ ಪುಣ್ಯಸ್ಥಳಗಳು- ಸಿದ್ದಲಿಂಗ ಸ್ವಾಮೀಜಿ

    ಸತ್ಯಕಾಮ ವಾರ್ತೆ ಗುರುಮಠಕಲ್ :

    ದೇವಾಲಯಗಳು ಮನುಷ್ಯನಿಗೆ ಶಾಂತಿ, ನೆಮ್ಮದಿ ನೀಡುವ ಪುಣ್ಯಸ್ಥಳಗಳಾಗಿವೆ. ಊರಿಗೊಂದು ವನ ಹಾಗೂ ದೇವಾಲಯ ಇದ್ದರೆ, ಆ ಊರು ಸಂಪದ್ಭರಿತವಾಗುತ್ತದೆ ಎಂದು ನೇರಡಗಂನ ಪೂಜ್ಯ ಸಿದ್ಧಲಿಂಗ ಸ್ವಾಮೀಜಿ ಅಭಿಪ್ರಾಯಪಟ್ಟರು.

     

    ತಾಲೂಕಿನ ಬೋರಬಂಡಾದ ಶ್ರೀಲಕ್ಷ್ಮೀ ತಿಮ್ಮಪ್ಪ ದೇವಸ್ಥಾನದ ಕಲ್ಯಾಣೋತ್ಸವ ಹಾಗೂ ರಥೋತ್ಸವ ಉದ್ದೇಶಿಸಿ ಆಶೀರ್ವಚನ ನೀಡಿದ ಅವರರು, ಮಾನವ ಸಕಲ ಜೀವರಾಶಿಗಳನ್ನು ಶ್ರೇಷ್ಠ ಎನಿಸಿದ್ದಾನೆ. ಹೀಗಾಗಿ ಜೀವನದಲ್ಲಿ ಶ್ರದ್ಧಾಭಕ್ತಿಯಿಂದ ಕೈಗೊಂಡ ಧಾರ್ಮಿಕ ಕಾರ್ಯದಿಂದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದರು.

     

    ದೇವರು ಕೊಟ್ಟಿರುವ ಅವಕಾಶವನ್ನು ಸರಿಯಾದ ರೀತಿ ಬಳಸಿಕೊಂಡು ಧರ್ಮ ಉಳಿಸುವ ಕೆಲಸ ಮಾಡಬೇಕಿದೆ ಎಂದರು. ದುಃಖ ದೂರಮಾಡಲು ದೇವರ ಪೂಜೆ ಮಾಡಬೇಕು. ಭಕ್ತನಿಗೂ ಮತ್ತು ಭಗವಂತನಿಗೂ ಸಂದಿಸುವ ಸ್ಥಳ ದೇವಾಲಯ. ಇಂಥ ಭವ್ಯ ದೇಗುಲವನ್ನು ನರೇಂದ್ರ ರಾಠೋಡ ನಿರ್ಮಾಣ ಮಾಡಿದ್ದಾರೆ. ಹೀಗೆ ಧಾಮಿರ್ಕ ಕಾರ್ಯಗಳನ್ನು ಹೆಚ್ಚೆಚ್ಚು ನಡೆಸಿ, ಉಳಿಸಿ, ಬೆಳೆಸಿಕೊಂಡು ಹೋಗಬೇಕು. ಭಕ್ತಿಭಾವವನ್ನು ಹೆಚ್ಚಿಸಬೇಕು ಎಂದರು.

     

    ಧಾರ್ಮಿಕ ಸೇವೆಯಲ್ಲಿ ತೊಡಗಿರುವ ದೇಗುಲ ವ್ಯವಸ್ಥಾಪಕ ನರೇಂದ್ರ ರಾಠೋಡ ಅವರ ಕುಟುಂಬ ಹಾಗೂ ಗ್ರಾಮಸ್ಥರು ವಿಜೃಂಭಣೆಯಿAದ ದೇವರ ಜಾತ್ರೆ, ದೀಪೋತ್ಸವ ಆಚರಿಸಿದ್ದು, ಸುತ್ತಲಿನ ಭಕ್ತರು ದರ್ಶನ ಪಡೆದು ಪಾವನರಾಗುತ್ತಿದ್ದಾರೆ. ಜೀವನದಲ್ಲಿ ಪರೋಪಕಾರಿ ಕಾರ್ಯದಿಂದ ಹೆಸರು ಅಮರವಾಗಲಿದೆ ಎಂದರು.

     

    ಬೆಳಿಗ್ಗೆಯಿಂದಲೇ ಸುಪ್ರಭಾತ ಸೇವೆ, ಪಂಚಾಮೃತಾಭಿಷೇಕ, ಅಲಂಕಾರ ಸೇವೆ ಶ್ರೀಲಕ್ಷ್ಮೀ ತಿಮ್ಮಪ್ಪ ದೇವರ ಕಲ್ಯಾಣೋತ್ಸವ, ರಥೋತ್ಸವ ಹಾಗೂ ಉಂಜಿಲು ಸೇವೆ ಕಾರ್ಯಕ್ರಮ ನೆರವೇರಿತು.

     

    ಮುರಾರಿ ಮಹರಾಜ, ಯು.ಪಿ.ಯ ಯೋಜಿ ಮಹೇಂದ್ರನಾಥ ಸ್ವಾಮಿ, ಅನೀಲ ಮಹರಾಜ, ಶಂಕರ್ ಮಹರಾಜ, ಸುರೇಶ ಮಹರಾಜ, ಸರಸ್ವತಿ ಮಾತೆ, ಶಾಂತಾ ಮಾತೆ, ಲಕ್ಷ್ಮೀಮಾತೆ, ಯಶೋಧಾ, ಧರ್ಮಿಣಿ ಮಾತೆ, ಪೂಜ್ಯ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮಿ, ದಕ್ಷಿಣ ಕನ್ನಡ ಬಿಜೆಪಿ ಕಾರ್ಯಕಾರಿಣಿ ಸದಸ್ಯೆ ಸಂಗೀತಾ ಲಕ್ಷ್ಮಣ ಪವಾರ್ ಅಯ್ಯಪ್ಪ ದಾಸ್, ರಾಜು ರಾಠೋಡ, ಕರವೇ ಜಿಲ್ಲಾಧ್ಯಕ್ಷ ಭೀಮುನಾಯಕ, ಆನಂದ ಬೋಯಿನಿ, ಸಾಯಬಣ್ಣ ಹೂಗರ್, ಕಾಶಿನಾಥ್ ರಾಠೋಡ, ಶರಣು ಎಲ್ಲೇರಿ, ವಿಜಯ ಮಗ್ಗಂಪೂರ, ಮೋಹನ್, ಸುರೇಶ ಚಿನ್ನಾ ರಾಠೋಡ ಸೇರಿ ಪ್ರಮುಖರು ತಾಂಡಾ ನಿವಾಸಿಗಳು, ಸುತ್ತಮುತ್ತಲಿನ ಭಕ್ತರು ಇದ್ದರು.

    apvc-iconPost Views: 16
  • ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪೃಥ್ವಿಕ್ ಶಂಕರ್

    ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪೃಥ್ವಿಕ್ ಶಂಕರ್

    ಸತ್ಯಕಾಮ ವಾರ್ತೆ ಯಾದಗಿರಿ: 

    ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪೃಥ್ವಿಕ್ ಶಂಕರ್ ಅವರನ್ನು ನಿಯೋಜಿಸಿ ರಾಜ್ಯ ಸರ್ಕಾರ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

     

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಜಿ. ಸಂಗೀತಾ ಅವರನ್ನು ಅಪರಾಧ ತನಿಖಾ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ನೂತನವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿರುವ ಪೃಥ್ವಿಕ್ ಶಂಕರ್ ಅಪರಾಧ ತನಿಖಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

    apvc-iconPost Views: 284
  • ಡಿ.14 ರಂದು ರಾಷ್ಟೀಯ ಲೋಕ ಅದಾಲತ್ : ನ್ಯಾ ಮರಿಯಪ್ಪ

    ಡಿ.14 ರಂದು ರಾಷ್ಟೀಯ ಲೋಕ ಅದಾಲತ್ : ನ್ಯಾ ಮರಿಯಪ್ಪ

    ಸತ್ಯಕಾಮ ವಾರ್ತೆ ಯಾದಗಿರಿ:

    ಡಿ.14 ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಯುತ್ತಿದ್ದು, ಬಾಕಿ ಇರುವ ವ್ಯಾಜ್ಯಗಳನ್ನು ಸಾರ್ವಜನಿಕರು ಇತ್ಯರ್ಥ ಮಾಡಿಕೊಳ್ಳಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮರಿಯಪ್ಪ ಅವರು ಹೇಳಿದರು.

     

    ಗುರುವಾರ ನಗರದ ಜಿಲ್ಲಾ ನ್ಯಾಯಾಲಯದ ಕಚೇರಿಯಲ್ಲಿ ನೆಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ರಾಷ್ಟ್ರೀಯ ಲೋಕ ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಉದ್ದೇಶಿಸಲಾಗಿದೆ. ಇದರ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯಲ್ಲಿರುವ ಎಲ್ಲಾ ನ್ಯಾಯಾಲಯಗಳ ವ್ಯಾಪ್ತಿಯಲ್ಲಿ ಲೋಕ್ ಅದಾಲತ್ತನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಅದಾಲತ್‌ನ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕೆಂದರು.

     

    ಈ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾಜಿಯಾ ಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಮೋಟಾ‌ರ್ ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಎಂ.ಎಂ.ಡಿ.ಆರ್. ಕಾಯ್ದೆಯಡಿಯ ಪ್ರಕರಣಗಳನ್ನು ಪರಿಹರಿಸಿಕೊಳ್ಳಬಹುದು. ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು (ವಿಚ್ಛೇದನ ಹೊರತು ಪಡಿಸಿ) ಪಿಂಚಣಿ ಪ್ರಕರಣಗಳು, ವೇತನ ಭತ್ಯೆ ಸಂಬಂಧಿಸಿದ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಕೈಗಾರಿಕಾ ಕಾರ್ಮಿಕರ ವೇತನ, ಕಾರ್ಮಿಕ ವಿವಾದ ಇತ್ಯಾದಿ ಪ್ರಕರಣಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ ಎಂದರು.

     

    ಇದುವರೆಗೆ ಜಿಲ್ಲೆಯ್ಯಾದಂತ ಒಟ್ಟು 19492 ಪ್ರಕರಣಗಳನ್ನು ಲೋಕ ಅದಾಲತನಲ್ಲಿ ಇತ್ಯರ್ಥಪಡಿಸಲು ಗುರುತಿಸಲಾಗಿದೆ. 2661 ರಾಜೀ ಮಾಡಬಲ್ಲ ಪ್ರಕರಣಗಳೆಂದು ಗುರುತಿಸಲಾಗಿದೆ. ಯಾದಗಿರಿ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಒಟ್ಟು 04 ಬೆಂಚ್‌ ಗಳನ್ನು, ಶಹಾಪೂರ 03 ಮತ್ತು ಸುರಪೂರದಲ್ಲಿ 02 ಬೆಂಚ್‌ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಪ್ರತಿ ಬೆಂಚನಲ್ಲಿ ಒಬ್ಬರು ನ್ಯಾಯಾಧೀಶರು ಹಾಗೂ ಒಬ್ಬರು ವಕೀಲರು ಸಂಧಾನಕಾರರಾಗಿ ಭಾಗವಹಿಸುವರು, ಅವರ ಮುಖಾಂತರ ರಾಜೀ ಸಂಧಾನ ಮಾಡಿಸಲಾಗುವುದು ಎಂದು ಹೇಳಿದರು.

     

    ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ ಸಾಕಷ್ಟು ಸಮಯ ಮತ್ತು ಹಣ ಉಳಿತಾಯ ಮಾಡಬಹುದಾಗಿದೆ. ಸಿವಿಲ್ ಪ್ರಕರಣಗಳಲ್ಲಿ ರಾಜೀ ಆದರೆ ನ್ಯಾಯಾಲಯಕ್ಕೆ ತುಂಬಿದ ನ್ಯಾಯಾಲಯ ಶುಲ್ಕ ಸಹ ವಾಪಸ್ಸಾಗುತ್ತದೆ. ಮತ್ತು ಇದರಿಂದ ಉಭಯ ಪಕ್ಷಗಾರರಲ್ಲಿ ದ್ವೇಷದ ಭಾವನೆ ಕಡಿಮೆಯಾಗಿ ಸಾಮರಸ್ಯ ಮೂಡುತ್ತದೆ. ಸಾರ್ವಹನಿಕರು ವಿಶೇಷವಾಗಿ ಕಕ್ಷಿಗಾರರು ಹೆಚ್ಚಿನ ಸಂಖ್ಯೆಯಲ್ಲಿ ರಾಷ್ಟ್ರೀಯ ಲೋಕ ಅದಾಲತ್‌ನ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.

    apvc-iconPost Views: 41
  • ಕನ್ನಡ ಶಾಲೆಗಳ ನಿರ್ಲಕ್ಷ್ಯ: ರಾಜ್ಯೋತ್ಸವದಂದು ಕರಾಳ ದಿನವಾಗಿ ಆಚರಣೆ

    ಕನ್ನಡ ಶಾಲೆಗಳ ನಿರ್ಲಕ್ಷ್ಯ: ರಾಜ್ಯೋತ್ಸವದಂದು ಕರಾಳ ದಿನವಾಗಿ ಆಚರಣೆ

    ಸತ್ಯಕಾಮ ವಾರ್ತೆ ಗುರುಮಠಕಲ್ :

    ಕನ್ನಡ ಮಾಧ್ಯಮ ಖಾಸಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ರಾಜ್ಯದ ಖಾಸಗಿ ಶಾಲೆಗಳಲ್ಲಿ ಕರಾಳ ದಿನ ಆಚರಿಸಲು ಕರ್ನಾಟಕ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ ನಿರ್ಣಯ ಕೈಗೊಂಡಿದೆ ಎಂದು ಬಸವೇಶ್ವರ ಶಿಕ್ಷಣ ಸಂಸ್ಥೆಯ ನಿರ್ದೇಶಕ ಅಖಂಡೇಶ್ವರ ಹಿರೇಮಠ ಹೇಳಿದರು.

     

    ಶಿಕ್ಷಕರು, ಆಡಳಿತ ಮಂಡಳಿ ಸದಸ್ಯರು ಕಪ್ಪುಪಟ್ಟಿ ಧರಿಸಿ ಕರಾಳ ದಿನಕ್ಕೆ ಸಾಥ್ ನೀಡಿ ಮಾತನಾಡಿದ ಅವರು, 1995 ರ ನಂತರ ಆರಂಭವಾದ ಖಾಸಗಿ ಕನ್ನಡ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವಂತೆ ಅನೇಕ ವರ್ಷಗಳಿಂದ ಬೇಡಿಕೆ ಇದೆ. ಆದರೆ, ಸರ್ಕಾರಗಳು ಇದಕ್ಕೆ ಮನ್ನಣೆ ನೀಡಿಲ್ಲ.

     

    ದಶಕಗಳ ಕಾಲ ಪಾಠ ಮಾಡಿದ ಶಿಕ್ಷಕರು ಅನುದಾನದ ವೇತನ ಇಲ್ಲದೆ ನಿವೃತ್ತರಾಗಿದ್ದಾರೆ.ಶಾಲೆಗಳಿಗೆ ಮಾನ್ಯತೆ ನವೀಕರಣ, ಆರ್‌ಟಿಇಗೆ ಚಾಲನೆ, ಆರ್‌ಟಿಇ ಶುಲ್ಕ ಮರುಪಾವತಿ, ಗ್ರಾಚ್ಯುಟಿ ಪಾವತಿ ಸೇರಿದಂತೆ ಇನ್ನಿತರ ಸಮಸ್ಯೆಗಳು ಇತ್ಯಾರ್ಥವಾಗಬೇಕಾಗಿದೆ ಎಂದರು.

    apvc-iconPost Views: 6
  • ರೈಲ್ವೆ ಇಲಾಖೆಯಲ್ಲಿ 60 ಸಾವಿರ ಹುದ್ದೆಗಳ ನೇಮಕಾತಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಈ ಬಾರಿ ಅವಕಾಶ – ವಿ ಸೋಮಣ್ಣ

    ರೈಲ್ವೆ ಇಲಾಖೆಯಲ್ಲಿ 60 ಸಾವಿರ ಹುದ್ದೆಗಳ ನೇಮಕಾತಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಈ ಬಾರಿ ಅವಕಾಶ – ವಿ ಸೋಮಣ್ಣ

    ಮೈಸೂರು: ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವರಾದ ವಿ ಸೋಮಣ್ಣ ಅವರು ತಿಳಿಸಿದರು.

    ಇಂದು ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಹಾಗೂ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರಿಂದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತದ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ರಾಷ್ಟ್ರೀಯ ರೋಜಗಾರ್ ಯೋಜನೆಯನ್ನು ಜಾರಿಗೆ ತಂದರು. 2014 ರಿಂದ 12 ಆವೃತ್ತಿಯಲ್ಲಿ ಉದ್ಯೋಗ ಮೇಳವನ್ನು ಮಾಡಿ ಇಲ್ಲಿಯವರೆಗೆ 14 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ. ಇದರಿಂದ ಪ್ರತಿಭಾವಂತರಿಗೆ ಉದೋಗಗಳನ್ನು ನೀಡಲಾಗುತ್ತಿದೆ. ರೈಲ್ವೆ ಇಲಾಖೆಯಲ್ಲಿ 2014 ರಿಂದ ಇಲ್ಲಿಯವರೆಗೆ ಮಿಶನ್ ಮೋಡ್ ನಲ್ಲಿ 5.2 ಲಕ್ಷ ಉದ್ಯೋಗಳನ್ನು ನೀಡಲಾಗಿದೆ ಎಂದರು.

    ಅಂಚೆ ಇಲಾಖೆಯಲ್ಲಿ ಹೆಚ್ಚಿನ ನೇಮಕಾತಿಗಳು ನಡೆಯುತ್ತಿವೆ. ಭಾರತದಲ್ಲಿ ಕರ್ನಾಟಕ ಸಾಂಸ್ಕೃತಿಕ ರಾಜ್ಯ, ಕರ್ನಾಟಕದಲ್ಲಿ ಮೈಸೂರು ಸಾಂಸ್ಕೃತಿಕ ರಾಜಧಾನಿ.ಪ್ರಧಾನ ಮಂತ್ರಿ ಜನ ಧನ್ ಯೋಜನೆಯಡಿ ಸೌಲಭ್ಯ, ಆರೋಗ್ಯ ಸೌಲಭ್ಯ ಹೆಚ್ಚಿಸಲು ಆಯುಷ್ಮನ ಭಾರತ್ ಯೋಜನೆ, ಮುದ್ರ ಯೋಜನೆ, ಬೇಟಿ ಬಚಾವ್ ಬೇಟಿ ಪಡವೋ ಯೋಜನೆ, ಮುಂತಾದ ಯೋಜನೆಗಳನ್ನು ಜಾರಿಗೆ ನರೇಂದ್ರ ಮೋದಿಯವರ ಸರ್ಕಾರ ಜಾರಿಗೆ ತಂದು ಅಭಿವೃದ್ದಿ ಮಾಡಿದೆ. ವಾಕ್ ಮತ್ತು ಶ್ರವಣ ಸಂಸ್ಥೆಗೆ 150 ಕೋಟಿ ಅನುಧಾನ ನೀಡಿ ಇದರ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೊಡುಗೆ ನೀಡಿದೆ ಎಂದರು

    ದೇಶಕ್ಕೆ ತನ್ನದೇ ಅದ ಪರಂಪರೆ ಇದೆ ಇತಿಹಾಸ ಇದೆ. ಪ್ರತಿಯೊಬ್ಬರೂ ದೇಶ ಪ್ರೇಮವನ್ನು ಬೆಳೆಸಿಕೊಳ್ಳಿ. ಉದೋಗವನ್ನು ಪಡೆದ 51 ಸಾವಿರ ಅಭ್ಯರ್ಥಿಗಳಿಗೆ ಶುಭವಾಗಲಿ. ಮೈಸೂರು ವಿಭಾಗದಲ್ಲಿ 171 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

    ಕೊಡಗು ಮೈಸೂರು ಲೋಕಸಭಾ ಸಂಸದರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ ಕಳೆದ 10 ವರ್ಷಗಳಲ್ಲಿ ಮಾನ್ಯ ಪ್ರಧಾನ ಮಂತ್ರಿ ಗಳು ವಿಕಸಿತ ಭಾರತಕ್ಕೆ ಅಡಿಪಾಯ ಇಟ್ಟಿದ್ದಾರೆ. ವಿಕಸಿತ ಭಾರತ 2047 ಕ್ಕೇ ಅಭಿವೃದ್ದಿ ಗುರಿಯನ್ನು ರೂಪಿಸಿದ್ದಾರೆ. ಸರ್ಕಾರದ ಹಲವು ಇಲಾಖೆಗಳು ದೇಶದ ಅಭಿವೃದ್ದಿ ಹಾಗೂ ಉದ್ಯೋಗ ನೀಡುವಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಿವೆ. ಭಾರತ ಉತ್ತಮ ಭವಿಷ್ಯವನ್ನು ಹೊಂದಿದ್ದು, ವಿಕಸಿತ ಭಾರತದ ಅಬಿವೃದ್ದಿಗೆ ಪ್ರತಿಯೊಬ್ಬರೂ ಕೈಜೋಡಿಸಿ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀವತ್ಸ, ದಕ್ಷಿಣ ಕರ್ನಾಟಕ ವಿಭಾಗದ ಅಂಚೆ ಇಲಾಖೆಯ ನಿರ್ದೇಶಕರಾದ ಸಂದೇಶ್ ಮಹದೇವಪ್ಪ, ರೈಲ್ವೆ ಇಲಾಖೆಯ ಡಿ ಆರ್ ಎಂ ಶಿಲ್ಪಿ ಅಗರವಾಲ್, ಆಯುಷ್ ಸಂಸ್ಥೆ ನಿರ್ದೇಶಕರಾದ ಪುಷ್ಪಾವತಿ,

    ದಕ್ಷಿಣ ಭಾರತದ ಪೋಸ್ಟ್ ಮಾಸ್ಟರ್ ಜನರಲ್ ಮ್ಯಾನೇಜರ್ ಚಂದ್ರಶೇಖರ್ ಕಾಕುಮಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

    apvc-iconPost Views: 33