Blog

  • ಆಧುನಿಕ ಭರಾಟೆಯಲ್ಲಿ ನಶಿಸುತ್ತಿರುವ ಕಲೆಗಳು

    ಆಧುನಿಕ ಭರಾಟೆಯಲ್ಲಿ ನಶಿಸುತ್ತಿರುವ ಕಲೆಗಳು

    ಸತ್ಯಕಾಮ ವಾರ್ತೆ ಶಹಾಪುರ:
    ಆಧುನಿಕತೆಯ ಭರಾಟೆಯಲ್ಲಿ ಗ್ರಾಮೀಣ ಸೊಗಡಿನ ಕಲೆಗಳು ನಶಿಸಿ ಹೋಗುತ್ತಿರುವ ಸಂದರ್ಭದಲ್ಲಿ ಅವುಗಳನ್ನು ಮುನ್ನೆಲೆಗೆ ತರಲು ಸಂಘ ಸಂಸ್ಥೆಗಳು ಸಾಕಷ್ಟು ಶ್ರಮಿಸುತ್ತಿವೆ ಎಂದು ಗುಂಬಳಾಪುರ ಮಠದ ಯೋಗಿರತ್ನ ಸಿದ್ದೇಶ್ವರ ಶಿವಾಚಾರ್ಯರು ಹೇಳಿದರು.

    ನಗರದ ಗುಂಬಳಾಪುರ ಮಠದ ಕಲ್ಯಾಣ ಮಂಟಪದಲ್ಲಿ ಪೂಜ್ಯ ಶ್ರೀ ಚನ್ನಬಸವ ಸಂಗೀತ ಮತ್ತು ಸಾಂಸ್ಕೃತಿಕ,ಸಾಹಿತ್ಯ,ಜನಪದ ಕಲಾ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಯಾದಗಿರಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರುವ ಸಂಗೀತ ಮತ್ತು ನಾಟಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾಡಿಗೆ ಜಾಗೃತಿ ಮೂಡಿಸುವ ಬೀದಿ ನಾಟಕಕಲಾವಿದರು, ಹಾಗೂ ಟಿವಿ,ಧಾರವಾಹಿಗಳಿಂದ ಕಲೆ ಮತ್ತು ಕಲಾವಿದರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು,ಇಂಥಹ ಸಂದರ್ಭದಲ್ಲಿ ಹಲವಾರು ಬಾಲ ಪ್ರತಿಭೆ ಹಾಗೂ ಯುವ ಪ್ರತಿಭೆಗಳನ್ನು ಗುರುತಿಸಿ ವೇದಿಕೆ ಕಲ್ಪಿಸಿ ಕೊಡುವುದರ ಜೊತೆಗೆ ಕಲೆಯನ್ನು ಪ್ರೋತ್ಸಾಹಿಸುತ್ತಿರುವುದು ನಿಜಕ್ಕೂ ಈ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ನುಡಿದರು.

    ವೀಡಿಯೊ: ಲಂಚ ಪಡೆಯುವ ಪಿಡಿಓಗಳಿಗೆ ಖಡಕ್ ವಾರ್ನಿಂಗ್ ನೀಡಿದ ಡಿಸಿಎಂ ಡಿ. ಕೆ.ಶಿವಕುಮಾರ್| Satyakam News

    ಈ ಸಮಾರಂಭದ ವೇದಿಕೆ ಮೇಲೆ ಇನ್ನೋರ್ವ ಅತಿಥಿಗಳು ಹಾಗು ಸಾಹಿತಿ,ಸಂಘಟಕ,ಪತ್ರಕರ್ತ, ಬಸವರಾಜ ಶಿಣ್ಣೂರ ಮಾತನಾಡಿ, ಸಂಗೀತಕ್ಕೆ ಅಘಾತವಾದ ಶಕ್ತಿ ಇದೆ, ಸಂಗೀತಕ್ಕೆ ಈ ಪ್ರಪಂಚದಲ್ಲಿ ತಲೆ ತೂಗದವರೇ ಇಲ್ಲ,ಸಂಗೀತ ಆಲಿಸುವುದರಿಂದ, ಮನಸ್ಸಿಗೆ ಮುದ ನೀಡುವುದರ ಜೊತೆಗೆ, ಪಾರ್ಶುವಾಯು ನಂತಹ ಮಹಾ ರೋಗಗಳು ವಾಸಿ ಆಗುತ್ತದೆ ಎಂಬುದನ್ನು ವಿಜ್ಞಾನಿಗಳೆ ಸ್ಪಷ್ಟಪಡಿಸಿದ್ದಾರೆ,ಎಂದು ಹೇಳಿದರು. ಆದ್ದರಿಂದ ಕಲೆಯನ್ನು ಪ್ರೋತ್ಸಾಹಿಸುವ ಕೆಲಸ ನಾವು ನೀವೆಲ್ಲರೂ ಮಾಡಬೇಕಾಗಿದೆ ಎಂದರು.

    ಈ ಸಮಾರಂಭದ ವೇದಿಕೆಯ ಮೇಲೆ.ಸುರಪುರ ಪತ್ರಿಮಠದ ಶಿವಕುಮಾರ, ಮೆಹಬೂಬ್ ಸಾಬ್ ತಡಬಿಡಿ, ರಂಗಭೂಮಿ ಕಲಾವಿದ ಶ್ರೀನಿವಾಸ್ ದೋರನಹಳ್ಳಿ, ಸಂಗೀತ ಕಲಾವಿದ ಗುರುಪಾದ ಹುಣಸಿಗಿಡ, ಡಿ ಜೂನ್ ನೃತ್ಯ ಅಕಾಡೆಮಿ ಅಧ್ಯಕ್ಷರ ಲಕ್ಷ್ಮಿ ಕುಂಬಾರ,ಚಿದಾನAದಯ್ಯ ಚಿಕ್ಕಮಠ ಹಾಗೂ ಸಂಸ್ಥೆಯ ಕಾರ್ಯದರ್ಶಿಗಳು ಉಪಸ್ಥಿತರಿದ್ದರು, ಈ ಸಂಸ್ಥೆಯ ಅಧ್ಯಕ್ಷರಾದ ಬೂದಯ್ಯ ಸ್ವಾಮಿ ಹಿರೇಮಠ, ಇನ್ನಿತರರು ಹಾಜರಿದ್ದರು. ನಂತರ ನೀನಾಸಮ್ ತರಬೇತಿ ಪಡೆದು ವಿದ್ಯಾರ್ಥಿಗಳಿಂದ ಟ್ಯಾಬ್ಲೆಟ್ ಎಂಬ ಸುಂದರ ಸಾಮಾಜಿಕ ಹಾಗೂ ಜಾಗೃತಿ ಕಿರು ನಾಟಕ ಜರುಗಿತು, ನಂತರದಲ್ಲಿ ಹಲವಾರು ಸಂಗೀತ, ನೃತ್ಯ,ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

    apvc-iconPost Views: 9
  • ಟಿಇಟಿ ಪರೀಕ್ಷೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ

    ಟಿಇಟಿ ಪರೀಕ್ಷೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ

    ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಬಂದರೆ ಮಾತ್ರ ಪರೀಕ್ಷೆ ಕೇಂದ್ರದೊಳಗೆ ಅವಕಾಶ : ಜಿಲ್ಲಾಧಿಕಾರಿ

    ಸತ್ಯಕಾಮ ವಾರ್ತೆ ಯಾದಗಿರಿ:

    ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಜೂನ್ 30 ರಂದು 25 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಸೂಚಿಸಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರೀಕ್ಷೆ ಸಂಬಂಧ ನಿಯೋಜಿತ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಲು ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

    ಈ ಪರೀಕ್ಷೆಯ ಮೊದಲ ಪತ್ರಿಕೆಗೆ 4002 ಹಾಗೂ ಮಧ್ಯಾಹ್ನ ಪತ್ರಿಕೆಗೆ 6026 ಸೇರಿ ಒಟ್ಟು 10,028 ಅಭ್ಯರ್ಥಿಗಳು ಹಾಜರಾಗಲಿದ್ದಾರೆ.

    ಪರೀಕ್ಷಾ ಕೇಂದ್ರಗಳಲ್ಲಿ ಅಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12 ಗಂಟೆವರೆಗೆ ಪೇಪರ್-1 ಮತ್ತು ಮಧ್ಯಾಹ್ನ 2 ರಿಂದ ಸಂಜೆ 4.30 ರವರೆಗೆ ಪೇಪರ್-2 ಪರೀಕ್ಷೆ ನಡೆಯಲಿವೆ. ಪರೀಕ್ಷಾ ಕೇಂದ್ರದ ಆವರಣದೊಳಗೆ ಅಭ್ಯರ್ಥಿಗಳ ಪ್ರವೇಶ, ಬೆಲ್ ಆಗುವ ಸಮಯ, ನಿಗದಿತ ವೇಳಾಪಟ್ಟಿಯಂತೆ ಮತ್ತು ಮಾರ್ಗಸೂಚಿ ಅನ್ವಯ ಪರೀಕ್ಷೆ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

    ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಬಂದರೆ ಮಾತ್ರ ಪರೀಕ್ಷೆ ಕೇಂದ್ರದೊಳಗೆ ಅವಕಾಶ ಕಲ್ಪಿಸಲಾಗುತ್ತದೆ. ಸಮಯ ಮೀರಿ ಬಂದರೆ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಾಗಿ ಸೂಚಿಸಿದರು.

    ಯಾವುದೇ ರೀತಿಯ ಮೊಬೈಲ್, ಎಲೆಕ್ಟ್ರಾನಿಕ್ ವಸ್ತುಗಳು ಮತ್ತು ವಾಚ್‍ಗಳನ್ನು ಪ್ರವೇಶ ಕೇಂದ್ರಗಳೊಳಗೆ ನಿರ್ಬಂಧಿಸಬೇಕು. ಸೂಕ್ತವಾದ ಆಸನ ವ್ಯವಸ್ಥೆ, ಅಂಗವಿಕಲರಿಗೆ ಅನುಕೂಲಕರ ವ್ಯವಸ್ಥೆ ಮಾಡಬೇಕು. ಪರೀಕ್ಷೆಗೆ ಪೂರ್ವಭಾವಿಯಾಗಿ ಕೇಂದ್ರಗಳಿಗೆ ಸಂಬಂಧಿಸಿದ ಅಧಿಕಾರಿ ಗಳು ತೆರಳಿ, ಆಸನ ವ್ಯವಸ್ಥೆ, ಸಿಸಿ ಟಿವಿ ಸೇರಿದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದರು.

    ಪರೀಕ್ಷೆ ಶಾಂತಿಯುತವಾಗಿ ನಡೆಸಲು ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಸಿಬ್ಬಂದಿ ಹಾಗೂ ಜಿಲ್ಲಾ ಖಜಾನೆಯಿಂದ ಪ್ರಶ್ನೆಪತ್ರಿಕೆಗಳನ್ನು ಮಾರ್ಗಾಧಿಕಾರಿಗಳು ಪಡೆದು ಸಂಬಂಧಪಟ್ಟ ಪರೀಕ್ಷಾ ಕೇಂದ್ರಗಳಿಗೆ ಸರಬರಾಜು ಮಾಡಲು ಪ್ರತಿ ಮಾರ್ಗಕ್ಕೆ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕೆಂದು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

    ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

    ಅಂದು ಪರೀಕ್ಷೆಯಲ್ಲಿ ಯಾವುದೇ ಅವ್ಯವಹಾರಗಳಿಗೆ, ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಲುವಾಗಿ ಸೆಕ್ಷನ್ 144 ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ ವರೆಗೆ ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

    ಪರೀಕ್ಷಾ ಕೇಂದ್ರಗಳು

    ನಗರದ ಸಭಾ ಪಿಯು ಕಾಲೇಜು, ನ್ಯೂ ಕನ್ನಡ ಪ್ರೌಢಶಾಲೆ, ದೋಖಾ ಜೈನ್ ಸ್ಕೂಲ್, ಆರ್ ವಿ ಹೈಸ್ಕೂಲ್ ಹಾಗೂ ಪಿಯು ಕಾಲೇಜು, ಜವಾಹರ್ ಪ್ರೌಢಶಾಲೆ ಮತ್ತು ಪಿಯು ಕಾಲೇಜು, ಸರಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ ಮತ್ತು ಮಹಿಳಾ ಪಿಯು ಹಾಗೂ ಹುಡುಗಿಯರ ಪ್ರೌಢಶಾಲೆ, ಡಾನ್ ಬಾಸ್ಕೋ ಪ್ರೌಢಶಾಲೆ ಹಾಗೂ ಪಿಯು ಕಾಲೇಜು, ಡಿಡಿಯು ಇಂಟರ್ ನ್ಯಾಷನಲ್ ಹೆಚ್ ಎಸ್, ನಿವೇದಿತಾ ಪಾಲಿಟೆಕ್ನಿಕ್ ಕಾಲೇಜು, ಆದರ್ಶ ವಿದ್ಯಾಲಯ, ಮಹತ್ಮಾ ಗಾಂಧಿ ಪ್ರೌಢಶಾಲೆ, ಚಿರಂಜೀವಿ ಪ್ರೌಢಶಾಲೆ, ಎಲ್.ಕೆ.ಇ.ಟಿ ಮಹಿಳಾ ಪಿಯು ಕಾಲೇಜು, ನವನಂದಿ ಹೈಸ್ಕೂಲ್, ಸ್ವಾಮಿ ವಿದ್ಯಾರಣ್ಯ ಹೆಚ್.ಪಿ.ಎಸ್ ಶಾಲೆ, ದಿವಂಗತ ತಿಮ್ಮಣ್ಣ ಹೆಡಗಿಮದ್ರಾ ಆಂಗ್ಲ ಮಾಧ್ಯಮ ಶಾಲೆ, ಸಪ್ತಗಿರಿ ಆಂಗ್ಲ ಮಾಧ್ಯಮ ಶಾಲೆ, ಸರಕಾರಿ ಮಹಿಳಾ ಪದವಿ ಕಾಲೇಜು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

    ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧರಣೇಶ ಎಸ್.ಪಿ, ಜಿಲ್ಲಾ ಖಜಾನೆ ಅಧಿಕಾರಿ ಮಾಲಿಂಗರಾಯ ಬಿ, ಡಿಡಿಪಿಐ ಮಂಜುನಾಥ, ಜಿಲ್ಲಾ ನೋಡಲ್ ಅಧಿಕಾರಿ ಬಸನಗೌಡ ಆಲ್ದಾಳ ಸೇರಿದಂತೆ ಪರೀಕ್ಷೆಗೆ ಜವಾಬ್ದಾರಿ ವಹಿಸಿದ ಇತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    apvc-iconPost Views: 63
  • ಲಂಚ ಪಡೆಯುವ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಡಿಸಿಎಂ ಡಿ. ಕೆ.ಶಿವಕುಮಾರ್

    ಲಂಚ ಪಡೆಯುವ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಡಿಸಿಎಂ ಡಿ. ಕೆ.ಶಿವಕುಮಾರ್

    ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿಯಲ್ಲಿ ಸೋಮವಾರ ನಡೆದ “ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಇದಕ್ಕೂ ಮೊದಲು ಕಾರ್ಯಕ್ರಮದ ಉದ್ದೇಶ, ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಪ್ರಕ್ರಿಯೆ ಕುರಿತು ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಎಂಎಲ್ಸಿ ರವಿ, ಜಿಲ್ಲಾಧಿಕಾರಿ ಅವಿನಾಶ್ ಮೆನನ್, ಸಿಇಓ ದಿಗ್ವಿಜಯ್ ಸಿಂಗ್ ಬೋಡಕೆ, ಎಸ್ಪಿ ಕಾರ್ತಿಕ್ ರೆಡ್ಡಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

     

    ಭೂಮಿ, ಮನೆ, ನಿವೇಶನ ರಹಿತರು, ರೈತರ ಕಷ್ಟಗಳಿಗೆ ಸ್ಥಳದಲ್ಲೇ ಪರಿಹಾರ; ಲಂಚ ಪಡೆಯುವ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಡಿಸಿಎಂ ಡಿ. ಕೆ.ಶಿವಕುಮಾರ್

    ಚನ್ನಪಟ್ಟಣ, ಜೂನ್ 24: 

    “ವಿವಿಧ ಸಮಸ್ಯೆ ಹೊತ್ತು ಬಂದವರಿಗೆ ಸ್ಥಳದಲ್ಲೇ ಪರಿಹಾರ. ರೈತರ ಜಮೀನುಗಳಿಗೆ ಖಾತೆ ಮಾಡಿಕೊಡಲು ಒಂದು ರೂಪಾಯಿ ಲಂಚ ಮುಟ್ಟುವಂತಿಲ್ಲ ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ” – ಇದು ಚನ್ನಪಟ್ಟಣದ ಜಿಲ್ಲಾ ಪಂಚಾಯ್ತಿ ಮಟ್ಟದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ “ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದ ಒಟ್ಟು ಚಿತ್ರಣ.

    ಕೋಡಂಬಳ್ಳಿ ಹಾಗೂ ಅಕ್ಕೂರು ಜಿಲ್ಲಾ ಪಂಚಾಯ್ತಿ ಮಟ್ಟದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಕ್ಷೇತ್ರದ ಜನರ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ವ್ಯಕ್ತವಾದ ಪ್ರಮುಖ ಸಮಸ್ಯೆಗಳಿಗೆ ಶಿವಕುಮಾರ್ ಅವರು ಸ್ಪಂದಿಸಿದ ರೀತಿ ಹೀಗಿತ್ತು:

    ಜೆ. ಬ್ಯಾಡರಹಳ್ಳಿ ಪಂಚಾಯತಿ ವ್ಯಾಪ್ತಿಯಲ್ಲಿ ಖಾತೆ ಮಾಡಿಕೊಡಲು 15- 20 ಸಾವಿರ ಲಂಚ ತೆಗೆದುಕೊಳ್ಳುತ್ತಿದ್ದಾರೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷೆ ಪೂರ್ಣಿಮಾ ಅವರು ದೂರು ನೀಡಿದರು.

    ಇದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು “ಲಂಚ ಪಡೆಯುವ ಪಿಡಿಓ, ಗ್ರಾಮ ಲೆಕ್ಕಿಗರು ಬೇರೆ ಜಾಗ ಹುಡುಕಿಕೊಳ್ಳಿ. ನನ್ನ ಕ್ಷೇತ್ರದ ಜನರಿಗೆ ತೊಂದರೆ ಆಗಬಾರದು” ಎಂದರು.

    ಲಂಚ ಪಡೆಯುವ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಡಿಸಿಎಂ ಡಿ. ಕೆ.ಶಿವಕುಮಾರ್

    “ಮುಂದಿನ 15 ದಿನಗಳಲ್ಲಿ ಲಂಚ ಪಡೆಯುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಮುಂದಿನ ದಿನಗಳಲ್ಲಿ ಈ ಬಗ್ಗೆ ದೂರುಗಳು ಬರಬಾರದು” ಎಂದು ಜಿಲ್ಲಾ ಪಂಚಾಯತಿ ಸಿಇಓ ದಿಗ್ವಿಜಯ ಬೋಡಕೆ ಅವರಿಗೆ ಖಡಕ್ ಸೂಚನೆ ನೀಡಿದರು.

    ಶ್ರವಣಯ್ಯನ ತೋಪಿನ ಸುಶೀಲ, ರತ್ನಮ್ಮ, ರಾಜಮ್ಮ, ಚಿಕ್ಕತಾಯಮ್ಮ ಸೇರಿದಂತೆ 21 ಕ್ಕೂ ಹೆಚ್ಚು ಜನ ಕಳೆದ 10 ವರ್ಷಗಳಿಂದ ಮನೆಗಳಿಗೆ ಹಕ್ಕುಪತ್ರ ನೀಡುತ್ತಿಲ್ಲ ಎಂದು ದೂರಿದಾಗ, “ಮುಂದಿನವಾರದೊಳಗೆ ಇವರಿಗೆ ಹಕ್ಕುಪತ್ರಗಳನ್ನು ನೀಡಬೇಕು” ಎಂದು ಹೇಳಿದರು. ಸ್ಥಳದಲ್ಲೇ ಇದ್ದ ಜಿಲ್ಲಾಧಿಕಾರಿಗಳು ಮುಂದಿನವಾರ ಖುದ್ದಾಗಿ ನಾನೇ ಬಂದು ನಿಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದರು.

    ನಿಮ್ಮನ್ನು ನೋಡಲು ಮಾತ್ರ ಬಂದಿದ್ದೇನೆ

    “ಅರ್ಜಿ ಎಲ್ಲಿ, ಏನು ಸಮಸ್ಯೆ” ಎಂದು ಡಿಸಿಎಂ ಅವರ ಪ್ರಶ್ನೆಗೆ ಉತ್ತರಿಸಿದ ಚನ್ನಪಟ್ಟಣದ ನಿವಾಸಿ ಶಿವಗಂಗಮ್ಮ, “ಗೃಹಲಕ್ಷ್ಮಿ, ಅನ್ನಭಾಗ್ಯ ಮತ್ತು ಶಕ್ತಿ ಯೋಜನೆಯಿಂದ ನನಗೆ ತುಂಬಾ ಒಳ್ಳೆಯದಾಗಿದೆ, ನನ್ನದು ಏನೂ ಸಮಸ್ಯೆ ಇಲ್ಲ. ನಿಮ್ಮನ್ನು ನೋಡಲು ಮಾತ್ರ ಬಂದಿದ್ದೇನೆ” ಎಂದಾಗ ಡಿಸಿಎಂ ನಕ್ಕು ಹಿರಿಯ ಜೀವದ ಆಶೀರ್ವಾದ ಪಡೆದು “ನಿನ್ನಂತೆ ಎಲ್ಲರ ಸಮಸ್ಯೆಯು ಇಲ್ಲದಂತೆ ಆಗಲಿ ಕಣವ್ವ” ಎಂದರು.

    ಹುಣಸನಹಳ್ಳಿಯ ಬಿಸಿಲಮ್ಮ ದೇವಿ ದೇವಸ್ಥಾನದ ಮಾಳಿಗೆ ಸೋರುತ್ತಿದೆ, ಸೇವಾ ಸಮಿತಿಯನ್ನು ಅಭಿವೃದ್ಧಿ ಸಮಿತಿಯನ್ನಾಗಿ ಪರಿವರ್ತಿಸಲು ಅನುವು ಮಾಡಿಕೊಡಬೇಕು ಎನ್ನುವ ಮನವಿಗೆ, ” ದೇವಸ್ಥಾನಕ್ಕೆ ಸಂಬಂಧಪಟ್ಟ ಜಮೀನಿನಲ್ಲಿ ಕಟ್ಟಿರುವ ತೆಂಗಿನ ನಾರಿನ ಕಾರ್ಖಾನೆಗೆ ಪರ್ಯಾಯ ಜಾಗ ಕಲ್ಪಿಸಿ ಅಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲಾಗುವುದು ಹಾಗೂ ನಿಮ್ಮ ಎಲ್ಲಾ ಮನವಿಗಳಿಗೆ ಪರಿಹಾರ ನೀಡಲಾಗುವುದು” ಎಂದು ಭರವಸೆ ನೀಡಿದರು.

    ಕಾಲಿನ ಸ್ವಾಧೀನ ಕಳೆದುಕೊಂಡಿರುವ ಕರಲಹಳ್ಳಿಯ ವಿಕಲಚೇತನ ಪುಟ್ಟರಾಜು ಅವರಿಗೆ “ಸ್ವಂತ ಉದ್ಯೋಗ ಮಾಡಲು 1 ಲಕ್ಷ ಹಣ ಬರುವಂತೆ ಮಾಡುತ್ತೇನೆ. ಜಿಲ್ಲಾ ಕಾಂಗ್ರೆಸ್ ಪಕ್ಷದ ನಾಯಕರನ್ನು ಭೇಟಿಯಾಗು, ಅವರು ನನ್ನ ಪರವಾಗಿ ನಿನಗೆ ಸಹಾಯ ಮಾಡುತ್ತಾರೆ” ಎಂದರು. ಪುಟ್ಟರಾಜುವಿಗೆ ಸಹಾಯ ಮಾಡಬೇಕು ಎಂದು ಜಿಲ್ಲಾ ನಾಯಕರಿಗೆ ಸೂಚನೆ ನೀಡಿದರು.

    ಸರ್ಕಾರಿ ಕೆಲಸ ಕೊಡಿಸಲು ಆಗುವುದಿಲ್ಲ

    ಸರ್ಕಾರಿ ಕೆಲಸ ಕೊಡಿಸಿ ಎಂಬ ವೈ.ಟಿ. ಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಜು ಮನವಿಗೆ, “ಸರ್ಕಾರಿ ಕೆಲಸ ಕೊಡಿಸಲು ಆಗುವುದಿಲ್ಲ. ಏನಾದರೂ ಸ್ವಯಂ ಉದ್ಯೋಗ ಮಾಡು” ಎಂದು ಹೇಳಿದರು.

    ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಕರೆ ಮಾಡಿ ಪರಿಹಾರ ಸೂಚನೆ

    ಕೊಂಡಾಪುರ ಕೃಷ್ಣ, ಜಮೀನು ನನ್ನ ಹೆಸರಿಗೆ ಆಗಿ 5 ವರ್ಷಗಳು ಕಳೆದರೂ ಖಾತೆ ನೀಡುತ್ತಿಲ್ಲ ಎಂದು ಹೇಳಿದಾಗ, ಪಕ್ಕದಲ್ಲೇ ಇದ್ದ ಜಿಲ್ಲಾಧಿಕಾರಿಗಳು ಡಿಸಿಎಂ ಸೂಚನೆ ಮೇರೆಗೆ ತಕ್ಷಣ ಕಂದಾಯ ಅಧಿಕಾರಿಗೆ ಕರೆ ಮಾಡಿ ಕೂಡಲೇ ದಾಖಲೆ ನೀಡುವಂತೆ ತಿಳಿಸಿದರು.

    ಚನ್ನಪಟ್ಟಣ ತಾಲ್ಲೂಕಿನ ಅಂಗನವಾಡಿ ಕಾರ್ಯಕಾರ್ಯಕರ್ತೆಯರು ಎಲ್ ಕೆಜಿ, ಯುಕೆಜಿ ಶಿಕ್ಷಕರಾಗಿ ನಮ್ಮನ್ನೇ ಮುಂದುವರೆಸಿ ಎಂದು ಮನವಿ ಮಾಡಿದಾಗ, “ಇದು ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಬೇಕು” ಎಂದರು.

    ಅಂಬಾಡಳ್ಳಿಯ ರೇಣುಕಮ್ಮ, ಮಾದಾಪುರ ಗ್ರಾಮದ ಚಿಕ್ಕಮ್ಮ ಒಂದು ವರ್ಷ ಕಳೆದರೂ ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದಾಗ “ಮುಂದಿನ ತಿಂಗಳು ಬರುವಂತೆ ಮಾಡುತ್ತೇನೆ” ಎಂದು ಭರವಸೆ ನೀಡಿದರು.

    ಪೋಡಿ, ಪಹಣಿ, ಬಗರ್ ಹುಕುಂ, ವಸತಿ ಯೋಜನೆಗೆ ಸಂಬಂಧಿಸಿದ ಹೆಚ್ಚಿನ ಮನವಿಗಳು ಸಲ್ಲಿಕೆಯಾದವು.

    apvc-iconPost Views: 21
  • ಈಜು ತರಬೇತುದಾರರ ನೇಮಕಕ್ಕೆ ಅರ್ಜಿ ಆಹ್ವಾನ

    ಈಜು ತರಬೇತುದಾರರ ನೇಮಕಕ್ಕೆ ಅರ್ಜಿ ಆಹ್ವಾನ

    ಸತ್ಯಕಾಮ ವಾರ್ತೆ ಯಾದಗಿರಿ:

    ಈಜು ತರಬೇತುದಾರರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ರಾಜು ಬಾವಿಹಳ್ಳಿ ಅವರು ತಿಳಿಸಿದ್ದಾರೆ.

    ಯುವಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಖೇಲೋ ಇಂಡಿಯಾ ಸಣ್ಣ ತರಬೇತಿ ಕೇಂದ್ರವನ್ನು ಆರಂಭಕ್ಕೆ ತರಬೇತಿ ಕೇಂದ್ರ ಖೇಲೋ ಇಂಡಿಯಾ ನಿಯಮಾನುಸಾರ ಈಜು ತರಬೇತುದಾರರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ರಾಷ್ಟç, ರಾಜ್ಯಮಟ್ಟದ ಈಜು ಕ್ರೀಡೆಯಲ್ಲಿ ಪದಕ ಪಡೆದ ಅಥವಾ ಸರ್ಕಾರಿ ಅಧಿಕೃತ ಸಂಸ್ಥೆಯಿAದ ಈಜು ತರಬೇತಿ ಪ್ರಮಾಣ ಪತ್ರ ಹೊಂದಿರುವ ಆಸಕ್ತ ಈಜು ತರಬೇತುದಾರರು ತಮ್ಮ ದಾಖಲಾತಿಗಳನ್ನು ಸಿ.ವಿ (RESUME) ಯೊಂದಿಗೆ ಸಹಾಯಕ ನಿರ್ದೇಶಕರ, ಕಾರ್ಯಾಲಯ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಚಿತ್ತಾಪೂರ ರಸ್ತೆ, ಯಾದಗಿರಿ 2024ರ ಜುಲೈ 5ರ ಒಳಗೆ ಅರ್ಜಿಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

     

     

    apvc-iconPost Views: 21
  • ನಗರ ವಸತಿ ರಹಿತರ ಆಶ್ರಯ ಕೇಂದ್ರದಲ್ಲಿ ನಡೆದ ನಿರಾಶ್ರಿತರಿಗೆ ಆರೋಗ್ಯ ತಪಾಸಣೆ ಶಿಬಿರ

    ನಗರ ವಸತಿ ರಹಿತರ ಆಶ್ರಯ ಕೇಂದ್ರದಲ್ಲಿ ನಡೆದ ನಿರಾಶ್ರಿತರಿಗೆ ಆರೋಗ್ಯ ತಪಾಸಣೆ ಶಿಬಿರ

    ನಿರಾಶ್ರಿತರಿಗೆ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಂಡಿದ್ದು ಶ್ಲಾಘನೀಯ ನಗರಸಭೆ ಸದಸ್ಯ ಎಂ.ಡಿ ಮಹೆಬೂಬ ಅಲಿ

     

     

    ಸತ್ಯಕಾಮ ವಾರ್ತೆ ಯಾದಗಿರಿ:

    ವಸತಿ ರಹಿತರಿಗೆ ಇರುವ ಉಚಿತ ಆಶ್ರಯ ಕೇಂದ್ರದಲ್ಲಿ ನಿರಾಶ್ರಿತರಿಗೆ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಂಡಿದ್ದು ಶ್ಲಾಘನೀಯವಾಗಿದ್ದು ಈ ಕೇಂದ್ರಕ್ಕೆ ಮೂಲಸೌಕರ್ಯ ಒದಗಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ನಗರಸಭೆ ಸದಸ್ಯ ಎಂ.ಡಿ ಮಹೆಬೂಬ ಅಲಿ ಅವರು ಅಭಿಪ್ರಾಯಪಟ್ಟರು.

    ನಗರಸಭೆ, ಜಿಲ್ಲಾ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ದೀನದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ( ಡೇ- ನಲ್ಮಾ) ಅಭಿಯಾನದಡಿಯಲ್ಲಿ ಭಾರತಾಂಬೆ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ನಗರದ ವಸತಿರಹಿತರ ಆಶ್ರಯ ಕೇಂದ್ರದಲ್ಲಿ ನಡೆದ ನಿರಾಶ್ರಿತರಿಗೆ ಆರೋಗ್ಯ ತಪಾಸಣೆ ಶಿಬಿರವನ್ನು ಸಸಿಗಳನ್ನು ನೆಟ್ಟು ಹಾಗೂ ಸಸಿಗೆ ನೀರೆರೆದು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ಆರೋಗ್ಯವೇ ಭಾಗ್ಯ, ಆರೋಗ್ಯ ವಾಗಿದ್ದರೆ ಸುಖವಾಗಿ ಬಾಳಬಹುದ ಎಂದರು. ಎಲ್ಲರೂ ಆಗಾಗ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರು ನೀಡುವ ಸಲಹೆ ಪಾಲಿಸಬೇಕು ಎಂದರು.

    ಕೌಶಲ್ಯಾಭಿವೃದ್ದಿ ಇಲಾಖೆಯ ಅಭಿಯಾನ ವ್ಯವಸ್ಥಾಪಕ ವಿಜಯಕುಮಾರ ಪಾಟೀಲ ಮಾತನಾಡಿ, ನಗರದಲ್ಲಿ ಕಾರ್ಮಿಕರಾಗಿದ್ದು, ವಸತಿ ಇಲ್ಲದವರಿಗೆ ತಾತ್ಕಾಲಿಕವಾಗಿ ಆಶ್ರಯ ನೀಡುವ ಉದ್ದೇಶದಿಂದ ಈ ಆಶ್ರಯ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಇಲ್ಲಿ ವಾಸ್ತವ್ಯ ಇರುವವರಿಗೆ ಊಟ, ತಿಂಡಿಯ ಅಗತ್ಯವಿದ್ದರೆ ಅದನ್ನು ಕೂಡ ಒದಗಿಸಿಕೊಡಲಾಗುತ್ತದೆ ಎಂದರು. ಆಶ್ರಯದಲ್ಲಿ ಇರುವವರು ಸ್ವಯಂ ಉದ್ಯೋಗಿಗಳಾಗಲು ಸರ್ಕಾರದ ಹಲವು ಯೋಜನೆಗಳಿದ್ದು ಅವುಗಳ ಸದುಪಯೋಗ ಪಡೆಯಲು ಅಗತ್ಯ ಸಹಕಾರವನ್ನು ಇಲಾಖೆಯಿಂದ ನೀಡುತ್ತೇವೆ ಎಂದರು.

    ನಗರಸಭೆಯ ಮ್ಯಾನೇಜರ್ ಅಶ್ವಿನಿ ಅವರು ಮಾತನಾಡಿ, ವಸತಿರಹಿತ ನಿರಾಶ್ರಿತರಿಗೆ ಆಶ್ರಯ ನೀಡೋ ನಿಟ್ಟಿನಲ್ಲಿ ಸರ್ಕಾರಗಳು ಅನೇಕ ಯೋಜನೆಗಳನ್ನ ಜಾರಿಗೆ ತಂದಿವೆ. ಇಂತಹ ನಿರಾಶ್ರಿತರ ರಕ್ಷಣೆ ನಮ್ಮ ಕರ್ತವ್ಯ ಆಗಿದೆ ಎಂದರು.

    ಡಾ.ಮಹೇಶ ಅವರು ನಿರಾಶ್ರಿತರಿಗೆ ಆರೋಗ್ಯ ತಪಾಸಣೆ ನಡೆಸಿ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ ನೀಡಿದರು

    ಈ ಸಂದರ್ಭದಲ್ಲಿ ನಗರಸಭೆಯ ಸಮುದಾಯ ಸಂಘಟನಾಧಿಕಾರಿ ಭೀಮಣ್ಣ ವೈದ್ಯ, ನಗರಠಾಣೆಯ ಎಎಸ್ಐ ಹಸನ್ ಪಟೇಲ್, ಭಾರತಾಂಬೆ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ಭೀಮಾಶಂಕರ ದೊಡ್ಡಮನಿ, ನಗರಸಭೆಯ ಸಿಬ್ಬಂದಿಗಳಾದ ಪದ್ಮಾ, ಮಂಜುನಾಥ, ಶಿವಪುತ್ರ, ಸಿಆರ್ಪಿ ಗಳಾದ ಅವ್ವಮ್ಮ, ಪ್ರೇಮಾ ಸಂಸ್ಥೆಯ ವ್ಯವಸ್ಥಾಪಕರಾದ ಮೌನೇಶ ಇಟಗಿ, ಭೀಮಾಶಂಕರ ಕಟ್ಟಿಮನಿ, ಸೇವಕರಾದ ಬೀರಲಿಂಗಪ್ಪ ಕಿಲ್ಲನಕೇರಾ, ಕೇರಟೇಕರಗಳಾದ ಮಲ್ಲು ನಾಟೇಕಾರ, ದೇವಮ್ಮ, ಕೃಷ್ಣ ಸೇರಿದಂತೆ ನಿರಾಶ್ರಿತರು ಉಪಸ್ಥಿತರಿದ್ದರು.

    apvc-iconPost Views: 44
  • ಶಿಕ್ಷಕರು ವಿಧ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಜೊತೆಗೆ ಸ್ಪರ್ಧಾ ಮನೋಭಾವನೆ ಮೂಡಿಸಿ : ಶಾಸಕ ಕಂದಕೂರ

    ಶಿಕ್ಷಕರು ವಿಧ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಜೊತೆಗೆ ಸ್ಪರ್ಧಾ ಮನೋಭಾವನೆ ಮೂಡಿಸಿ : ಶಾಸಕ ಕಂದಕೂರ

    
    
    
    ಸತ್ಯಕಾಮ ವಾರ್ತೆ ಯಾದಗಿರಿ:

    ಪ್ರಸಕ್ತ ದಿನಗಳಲ್ಲಿ ಶಿಕ್ಷಣಕ್ಕೆ ಎಲ್ಲರೂ ಒತ್ತು ನೀಡುವುದು ಅವಶ್ಯಕವಾಗಿದೆ, ಈ ನಿಟ್ಟಿನಲ್ಲಿ ವಸತಿ ಶಾಲೆಗಳಲ್ಲಿ ಶಿಕ್ಷಕರು ವಿಧ್ಯಾರ್ಥಿಗಳನ್ನು ತಮ್ಮ ಮಕ್ಕಳೆಂದು ಭಾವಿಸಿ, ಅವರಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಅವರಲ್ಲಿ ಸ್ಪರ್ಧಾ ಮನೊಭಾವನೆ ಮೂಡಿಸಿದಲ್ಲಿ ಮಾತ್ರ ಅವರಲ್ಲಿರುವ ಪ್ರತಿಭೆಗಳು, ಜ್ಞಾನ ವಿಕಾಸವಾಗುತ್ತದೆ ಎಂದು ಗುರುಮಿಠಕಲ್ ಮತಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಅಭಿಪ್ರಾಯ ಪಟ್ಟರು.

    ಗುರುಮಿಠಕಲ್ ಮತಕ್ಷೇತ್ರದ ಕೊಟಗೇರಾ ಗ್ರಾಮದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಯಾದಗಿರಿ ವತಿಯಿಂದ ೨೪ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಡಾ. ಬಿ.ಆರ್ ಅಂಬೇಡ್ಕರ ವಸತಿ ಶಾಲೆ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ, ಆರೋಗ್ಯ, ಶುದ್ಧ ಕುಡಿಯುವ ನೀರು, ಉದ್ಯೋಗ ಸೃಷ್ಟಿಗೆ ಹೆಚ್ಚು ಗಮನ ನೀಡುತ್ತಿದ್ದೇನೆ, ಕಾರಣ ಗ್ರಾಮೀಣ ಭಾಗದ ಜನರು ತಮ್ಮ ಮಕ್ಕಳಿಗೆ ತಪ್ಪದೇ ಶಿಕ್ಷಣ ಒದಗಿಸಲು ಪ್ರಯತ್ನಿಸಬೇಕೆಂದು ಸಲಹೆ ನೀಡಿದರು.

    ಇಂತಹ ಒಳ್ಳೆಯ ಪರಿಸರದಲ್ಲಿ ಸುಸಜ್ಜಿತ ವಸತಿ ಶಾಲೆ ನಿರ್ಮಾಣ ಮಾಡಲಾಗಿದೆ, ಇಲ್ಲಿನ ಶಿಕ್ಷಕರು ಪರಿಸರ ಸ್ವಚ್ಚತೆ ಆದ್ಯತೆ ನೀಡುವ ಜೊತೆಗೆ ನಿಮಗೆ ತಂಗಲು ವಸತಿ ಗೃಹಗಳನ್ನು ನಿರ್ಮಾಣ ಮಾಡಲಾಗಿದೆ, ಇಲ್ಲಿಯೇ ಎಲ್ಲರೂ ವಾಸ ಮಾಡಿ, ವಿಧ್ಯಾರ್ಥಿಗಳಿಗೆ ಇನ್ನೂ ಹೆಚ್ಚು ಬೋಧನೆ ಮಾಡುವ ಜೊತೆಗೆ ಅವರ ಚಟುವಟಿಕೆಗಳ ಮೇಲೆ ಗಮನ ಹರಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು.

    ಕೆಕೆಆರ್‌ಡಿಬಿ ಯೋಜನೆಯಡಿಯಲ್ಲಿ ವಸತಿ ಶಾಲೆಯ ಶಿಕ್ಷಕರಿಗೆ ಸಂಬಳ ನೀಡಲಾಗುತ್ತಿದೆ, ಈ ಹಿಂದೆ ನಮ್ಮ ತಂದೆಯವರು ಶಾಸಕರಾಗಿದ್ದ ಸಮಯದಲ್ಲಿ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಶಾಲಾ ಕೋಣೆಗಳನ್ನು ಮಂಜೂರು ಮಾಡಿ, ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದರು, ಜಿಲ್ಲೆಯಲ್ಲಿ ೩ ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆಯಿದೆ, ನಾನು ಕೂಡ ಸರ್ಕಾರದ ಮೇಲೆ ನೇಮಕಕ್ಕೆ ಒತ್ತಡ ಹಾಕಿದ್ದೇನೆ, ಅಲ್ಲದೇ ಜಿಲ್ಲಾ ಕೇಂದ್ರ ಯಾದಗಿರಿಯಲ್ಲಿ ೨ ಬಿಸಿಎಂ ವಸತಿ ನಿಲಯಗಳ ಸ್ಥಾಪನೆಗೆ ಕ್ರಮ ಕೈಗೊಂಡಿದ್ದೇನೆ ಎಂದರು.

    ನೆರೆಯ ಮೊಟನಳ್ಳಿ ಕ್ರಾಸ್ ಹತ್ತಿರ ಇರುವ ಮೋರಾರ್ಜಿ ವಸತಿ ಶಾಲೆ ದುರಸ್ತಿಗೆ ಆದಷ್ಟು ಬೇಗನೇ ಕ್ರಮ ಕೈಗೊಂಡು ವಿಧ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಅನುಕೂಲತೆ ಮಾಡಿಕೊಡಲಾಗುವುದು ಎಂದು ತಿಳಿಸಿದರು,ಮತಕ್ಷೇತ್ರದಲ್ಲಿ ನಿರುದ್ಯೋಗ ಸಮಸ್ಯೆಯಿಂದ ಸಾವಿರಾರು ಜನರು ಉದ್ಯೊಗ ಹರಸಿ ಬೃಹತ್ ನಗರಗಳಿಗೆ ವಲಸೆ ಹೋಗಿದ್ದಾರೆ, ಉನ್ನತ ಅಭ್ಯಾಸ ಮಾಡಿದ ನಮ್ಮ ಯುವಕರು ಉದ್ಯೋಗದ ನಿರೀಕ್ಷೆಯಲ್ಲಿದ್ದಾರೆ, ಕೇಂದ್ರದ ಎನ್‌ಡಿಎ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಬೃಹತ್ ಕೈಗಾರಿಕಾ ಸಚಿವರಾಗಿದ್ದಾರೆ, ಕಡೆಚೂರ-ಬಾಡಿಯಾಲ ಭಾಗದಲ್ಲಿ ೩ ಸಾವಿರ ಎಕರೆ ಕೈಗಾರಿಕಾ ಭೂಮಿಯಿದೆ, ನಾನೂ ಈಗಾಗಲೇ ಅವರನ್ನು ಭೇಟಿಯಾಗಿ ಇಲ್ಲಿನ ವಾಸ್ತವಿಕ ಪರಿಸ್ಥಿತಿಯನ್ನು ವಿವರಿಸಿ, ಬೃಹತ್ ಕೈಗಾರಿಕೆಗಳ ಸ್ಥಾಪನೆಗೆ ಅದ್ಯತೆ ನಿಡಬೇಕೆಂದು ಮನವಿ ಮಾಡಿದ್ದೇನೆ, ಅವರಿಂದಲೂ ಕೂಡ ಸಕರಾತ್ಮಕ ಬೆಂಬಲ ದೊರೆಯಲಿದೆ ಎಂದು ಹೇಳಿದರು.

    ಈ ಹಿಂದೆ ಶಾಸಕರಾಗಿದ್ದ ನಮ್ಮ ತಂದೆ ದಿ. ನಾಗನಗೌಡ ಕಂದಕೂರ ಅವರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದರು, ಅವರ ಜೊತೆಯಲ್ಲಿ ನಾನೂ ಕೂಡ ಜನರ ಹಾಗೂ ಪಕ್ಷದ ಕಾರ್ಯಕರ್ತರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂಧಿಸಿದ ಪರಿಣಾಮ ನೀವೂ ನನ್ನನ್ನೂ ಶಾಸಕನಾಗಿ ಆಯ್ಕೆ ಮಾಡಿದ್ದೀರಿ, ಈ ಭಾಗದ ಹಳ್ಳಿಗಳ ಪ್ರಗತಿಗೆ ಆದ್ಯತೆ ಮೇರೆಗೆ ನಾನೂ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

    ವೇದಿಕೆ ಮೇಲೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಸರೋಜಾ, ಕ್ಷೇತ್ರ ಶಿಕ್ಷಣಾಧಿಕಾರಿ ಋಷಿಕೇಶ, ಬಿಆರ್‌ಸಿ ಮಲ್ಲಿಕಾರ್ಜುನ, ಮೋಟನಳ್ಳಿ ಗ್ರಾ.ಪಂ ಅಧ್ಯಕ್ಷೆ ಧನಲಕ್ಷಿö್ಮ, ಪ್ರಾಂಶುಪಾಲೆ ರಮಾಭಾಯಿ, ಗುರುಮಿಠಕಲ್ ಪಟ್ಟಣ ಪಂಚಾಯತ ಅಧ್ಯಕ್ಷ ಪಾಪಣ್ಣ ಮನ್ನೆ, ಬ್ಲಾಕ್ ಜೆಡಿಎಸ್ ಅಧ್ಯಕ್ಷ ಪ್ರಕಾಶ ನೀರಟ್ಟಿ, ರಾಮಣ್ಣ ಕೋಟಗೇರಾ, ಸುಭಾಶ್ಚಂದ್ರ ಕಟಕಟಿ ಹೊನಗೇರಾ, ದೀಪಕ್ ಬೆಳ್ಳಿ, ರವಿ ಪಾಟೀಲ್, ಗಿರಿನಾಥರಡ್ಡಿ ಚಿಂತಗುAಟಾ, ಅಶೋಕ ಕೋಟಗೇರಾ, ಬಂದಪ್ಪಗೌಡ ಲಿಂಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    apvc-iconPost Views: 44
  • ಶನಿವಾರ ಜಿಲ್ಲೆಗೆ ಗೃಹ ಸಚಿವರ ಆಗಮನ.?

    ಶನಿವಾರ ಜಿಲ್ಲೆಗೆ ಗೃಹ ಸಚಿವರ ಆಗಮನ.?

    *ಸತ್ಯಕಾಮ ವಾರ್ತೆ ಯಾದಗಿರಿ:*
    ಕಳೆದ ವರ್ಷದಲ್ಲೇ ಉದ್ಘಾಟನೆಯಾಗಬೇಕಿದ್ದ ನಗರ ಪೊಲೀಸ್ ಠಾಣೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದೂ.?, ಇದೇ ಶನಿವಾರದಂದು ಡಾಕ್ಟರ್ ಜಿ ಪರಮೇಶ್ವರ್ ರವರು ನಗರದ ಗಾಂಧಿ ವೃತದಲ್ಲಿರುವ ನೂತನ ನಗರ ಪೊಲೀಸ್ ಠಾಣೆಯನ್ನು ಉದ್ಘಾಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಜೂ.22ರಂದು ಜಿಲ್ಲೆಗೆ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ಅವರು ಆಗಮಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದ್ದು, ಅಂದು ಸವ್ಯಸಾಚಿ ಡಾಕ್ಟರ್ ಜಿ ಪರಮೇಶ್ವರ್ ಯುವ ಬ್ರಿಗೇಡ್ ನ ನೂತನ ಕಛೇರಿಯನ್ನು ಉದ್ಘಾಟನೆ ಮಾಡಲಿದ್ದಾರೆ. ಬಳಿಕ ನಗರ ಪೊಲೀಸ್ ಠಾಣೆಯನ್ನು ಉದ್ಘಾಟಿಸಲಿದ್ದಾರೆ, ತದನಂತರ ಗ್ರಾಮೀಣ ಪೊಲೀಸ್ ಠಾಣೆ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

    ಗೃಹ ಸಚಿವರು ಜಿಲ್ಲೆಗೆ ಆಗಮಿಸುತ್ತಿರುವ ಬೆನ್ನಲ್ಲೇ ಬುಧವಾರ ತಡರಾತ್ರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗ್ರಾಮೀಣ ಪೊಲೀಸ್ ಠಾಣೆಗೆ ಭೇಟಿ ನೀಡಿ ಕಾರ್ಯಕ್ರಮ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸಿಬ್ಬಂದಿಗಳಿಗೆ ತಿಳಿಸಿದ್ದಾರೆಂದು ಮೂಲಗಳು ಖಚಿತಪಡಿಸಿವೆ..

    ಇನ್ನು ಗೃಹ ಸಚಿವರು ಜಿಲ್ಲೆಗೆ ಆಗಮಿಸುತ್ತಿರುವ ಬಗ್ಗೆ ಯಾದಗಿರಿ ಪೊಲೀಸ್ ಇಲಾಖೆ ಅಧಿಕೃತವಾಗಿ ತಿಳಿಸಿಲ್ಲ.

    apvc-iconPost Views: 668
  • ಸಂಪಾದಕರ ಸಂಘದ ಪ್ರಪ್ರಥಮ ರಾಜ್ಯ ಮಟ್ಟದ ಸಮ್ಮೇಳನಕ್ಕೆ ಸಿಎಂಗೆ ಆಹ್ವಾನ

    ಸಂಪಾದಕರ ಸಂಘದ ಪ್ರಪ್ರಥಮ ರಾಜ್ಯ ಮಟ್ಟದ ಸಮ್ಮೇಳನಕ್ಕೆ ಸಿಎಂಗೆ ಆಹ್ವಾನ


    ಕರ್ನಾಟಕ ಕಾರ್ಯನಿರತ ದಿನ ಪತ್ರಿಕೆಗಳ ಸಂಪಾದಕರ ಸಂಘದ ಪ್ರಪ್ರಥಮ ರಾಜ್ಯ ಮಟ್ಟದ ಸಮ್ಮೇಳನಕ್ಕೆ ಸಿಎಂಗೆ ಆಹ್ವಾನ

    ಬೆಂಗಳೂರು: ಕರ್ನಾಟಕ ಕಾರ್ಯನಿರತ ದಿನ ಪತ್ರಿಕೆಗಳ ಸಂಪಾದಕರ ಸಂಘದ ಪ್ರಪ್ರಥಮ ರಾಜ್ಯ ಮಟ್ಟದ ಸಮ್ಮೇಳನ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತಿ ಶೀಘ್ರದಲ್ಲಿ ಸಮ್ಮೇಳನಕ್ಕೆ ದಿನಾಂಕ ನೀಡುವುದಾಗಿ ಭರವಸೆ ನೀಡಿದರು.

    ರಾಜ್ಯಾಧ್ಯಕ್ಷರಾದ ಎ.ಸಿ. ತಿಪ್ಪೇಸ್ವಾಮಿ ಅವರು ಮಾತನಾಡಿ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಜಿಲ್ಲಾ, ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರು ಮತ್ತು ಮಾಲೀಕರ ಸಂಘವು ನಮ್ಮದಾಗಿದೆ. ರಾಜ್ಯಾದ್ಯಂತ ನಮ್ಮ ಸಂಘದ ಜಿಲ್ಲಾ ಘಟಕಗಳು ಪತ್ರಿಕೆಗಳ ಅಭಿವೃದ್ಧಿ ಮತ್ತು ಬೆಳವಣಿಗೆಗೆ ತಮ್ಮ ನೇತೃತ್ವದ ಸರ್ಕಾರದ ವತಿಯಿಂದ ನೀಡಿದ ಮತ್ತು ನೀಡುತ್ತಿರುವ ಎಲ್ಲಾ ರೀತಿಯ ಸಹಕಾರವನ್ನು ಸ್ಮರಿಸುತ್ತಿವೆ. ನಮ್ಮ ಸಂಘದ ಪ್ರಪ್ರಥಮ ರಾಜ್ಯ ಮಟ್ಟದ ಸಮ್ಮೇಳನವನ್ನು  ಜುಲೈ ತಿಂಗಳಲ್ಲಿ ಎರಡು ದಿನಗಳ ಕಾಲ ಗದಗ ಜಿಲ್ಲೆಯಲ್ಲಿ ನಡೆಯಲಿದೆ. ಗದಗ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ  ಹೆಚ್.ಕೆ. ಪಾಟೀಲ್ ಅವರ ಘನ ಅಧ್ಯಕ್ಷತೆಯಲ್ಲಿ ನಡೆಸಲಾಗುವುದು ಎಂದರು.

    ಈ ಸಮ್ಮೇಳನದಲ್ಲಿ ರಾಜ್ಯಾದ್ಯಂತ ಇರುವ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರು, ಉಪ ಸಂಪಾದಕರು, ಪ್ರಧಾನ ಸಂಪಾದಕರು, ವ್ಯವಸ್ಥಾಪಕ ಸಂಪಾದಕರು, ಆವೃತ್ತಿಗಳ ಸಂಪಾದಕರು ಭಾಗವಹಿಸಲಿದ್ದಾರೆ ಎಂದರು.

    ಈ ಸಮ್ಮೇಳನದಲ್ಲಿ ಮಾಧ್ಯಮ ಗಣನೀಯ ಸೇವೆ ಸಲ್ಲಿಸಿದ ಹಿರಿಯ ಪತ್ರಿಕಾ ಸಂಪಾದಕರಿಗೆ ಮತ್ತು ಪತ್ರಿಕಾ ವಿತರಕರಿಗೆ ಮತ್ತು ಸಂಪಾದಕರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದು. ಈ ಸಮ್ಮೇಳನದಲ್ಲಿ ಸುಮಾರು ಎರಡು ಸಾವಿರಕ್ಕೂ ಮೇಲ್ಪಟ್ಟು ಪತ್ರಿಕಾ ಸಂಪಾದಕರು ಮತ್ತು ಅವರ ಕುಟುಂಬದ ಸದಸ್ಯರುಗಳು ಭಾಗವಹಿಸಲಿದ್ದಾರೆ ಎಂದರು.

    ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಮಂಜುನಾಥ ಬಸಪ್ಪ ಅಬ್ಬಿಗೇರಿ, ಪ್ರಧಾನ ಕಾರ್ಯದರ್ಶಿಗಳಾದ ಚನ್ನ ಬಸವ, ಖಜಾಂಚಿ ಖಾನ್ ಸಾಬ್ ಮೆಮೂನ್, ಕಾರ್ಯದರ್ಶಿಗಳಾದ ವಿ.ಅನೂಪ್ ಕುಮಾರ್, ಸಹ ಕಾರ್ಯದರ್ಶಿ ಡಾ.ಕೆ.ಎಸ್ ಸ್ವಾಮಿ,  ಸೇರಿದಂತೆ ಮತ್ತಿತರರು ಇದ್ದರು.

    apvc-iconPost Views: 170
  • ಬಿರುಕು ಬಿಟ್ಟ ವಿದ್ಯುತ್ ಕಂಬ: ಜೀವ ಭಯದಲ್ಲಿ ಅಂಗನವಾಡಿ ಮಕ್ಕಳು

    ಬಿರುಕು ಬಿಟ್ಟ ವಿದ್ಯುತ್ ಕಂಬ: ಜೀವ ಭಯದಲ್ಲಿ ಅಂಗನವಾಡಿ ಮಕ್ಕಳು

    ಶಿಥಿಲಗೊಂಡ ಕಂಬ ದುರಸ್ತಿ ಕಾರ್ಯಕ್ಕೆ ಮುಂದಾಗದೆ ಕ್ಯಾರೇ ಎನ್ನದ ಅಧಿಕಾರಿಗಳು

    *ಸತ್ಯಕಾಮ ವಾರ್ತೆ ಯಾದಗಿರಿ:*
    ಮಕ್ಕಳ ಕಲಿಕೆಯ ಮೊದಲ ಹಂತವಾಗಿರುವ ಅಂಗನವಾಡಿ ಆವರಣದಲ್ಲಿನ ವಿದ್ಯುತ್ ಟ್ರಾನ್ಸ್‌ಫಾರ್ಮ್‌ರ್‌ ಕಂಬ ಬಿರುಕು ಬಿಟ್ಟು, ಈಗಲೋ ಆಗಲೋ ಬಿಳುವ ಹಂತದಲ್ಲಿದ್ದೂ, ಅಂಗನವಾಡಿ ಮಕ್ಕಳ ಜೀವ ರಕ್ಷಣೆಗೆ ಬೆಲೆ ಇಲ್ಲದಂತಾಗಿದೆ.

    ಹೌದು ಯಾದಗಿರಿ ಪಟ್ಟಣದ ಹತ್ತಿಕುಣಿ-ಸೇಡಂ ರಸ್ತೆ ಸಮೀಪದ ಹಳೆ ಜಾಕ್ವಾಲ್ ಮುಸ್ಲಿಂಪೂರದಲ್ಲಿರುವ ಅಂಗನವಾಡಿ ಕೇಂದ್ರ-2ರಲ್ಲಿನ ಆವರಣದಲ್ಲಿ ಬಿರುಕು ಬಿಟ್ಟ ವಿದ್ಯುತ್ ಟ್ರಾನ್ಸ್‌ಫಾರ್ಮ್‌ರ್‌ ಕಂಬ ಕಾಣಬಹುದು, ಅಲ್ಲದೆ ಕಂಬದ ಸುತ್ತಲೂ ತಂತಿ ಬೇಲಿ ಅಳವಡಿಸದೇ ಇರುವುದರಿಂದ ಮಕ್ಕಳು ಆಟವಾಡುತ್ತ ಹೋಗಿ ಕಂಬ ಮುಟ್ಟಿದರೆ ಅಪಾಯ ಸಂಭವಿಸುವ ಸ್ಥಿತಿ ಇದೆ.

    ಈ ವಿದ್ಯುತ್ ಟ್ರಾನ್ಸ್‌ಫಾರ್ಮ್‌ರ್‌ ಕಂಬದಲ್ಲಿ ಸಿಮೆಂಟ್ ಉದುರಿದ್ದು ಒಳಭಾಗದ ಕಬ್ಬಿಣದ ಸರಳುಗಳು ಎದ್ದು ಕಾಣುತ್ತಿವೆ. ಬಲವಾದ ಗಾಳಿ ಬೀಸಿದರೆ ಕಂಬ ನೆಲಕ್ಕೊರಗುವ ಸಾಧ್ಯತೆಗಳಿವೆ. ಕೂಡಲೇ ಈ ಕಂಬ ಬದಲಾಯಿಸಲು ಜೆಸ್ಕಾಂ ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ.

    ವಿದ್ಯುತ್ ಕಂಬ ದುರಸ್ಥಿ ಮಾಡುವಂತೆ ವರ್ಷದ ಹಿಂದೆಯೇ ಅಧಿಕಾರಿಗಳಿಗೆ ತಿಳಿಸಿದ್ದೆವೆ ಆದರೆ ಕಂಬದಲ್ಲಿನ ವಿದ್ಯುತ್ ಸಂಪರ್ಕವನ್ನು ತೆಗೆದಿದ್ದಾರೆ ಹೊರತು ದುರಸ್ಥಿ ಕಾರ್ಯಕ್ಕೆ ಮುಂದಾಗಿಲ್ಲ ಎಂದು ಸ್ಥಳೀಯರೊಬ್ಬರು ತಿಳಿಸಿದರು.

    ಇತ್ತೀಚಿಗೆ ಜಿಲ್ಲೆಯಲ್ಲಿ ಬಿರುಸಿನ ಗಾಳಿ ಸಹಿತ ಸುರಿದ ಮಳೆಗೆ ವಿದ್ಯುತ್ ಕಂಬ ಹಾಗೂ ಮರಗಳು ಧರೆಗೆ ಉರುಳಿದ ಘಟನೆಗಳು ಜೆಸ್ಕಾಂ ಮುಂದಿದ್ದರೂ ಕೂಡ ಅಂಗನವಾಡಿ ಕೇಂದ್ರದ ಆವರಣದಲಿರುವ ವಿದ್ಯುತ್ ಪರಿವರ್ತಕ ಕಂಬಗಳನ್ನು ತೆರುವುಗೊಳಿಸದೇ ಜೆಸ್ಕಾಂ ಅಧಿಕಾರಿಗಳು ಹಸುಗೂಸು ಮಕ್ಕಳ ಜೀವನದಲ್ಲಿ ಆಟವಾಡುತ್ತಿರುವುದು ವಿಪರ್ಯಾಸವಾಗಿದೆ.

    ಆದಷ್ಟು ಬೇಗ ಅಧಿಕಾರಿಗಳು ಕ್ರಮ ಕೈಗೊಂಡು ಅನಾಹುತವನ್ನು ತಪ್ಪಿಸಲು ಮುಂದಾಗುವರಾ.? ಎಂಬುದನ್ನು ಕಾದು ನೋಡಬೇಕಿದೆ.

    apvc-iconPost Views: 218
  • ಸತ್ಯಕಾಮ ವರದಿಗೆ ಸ್ಪಂದಿಸಿದ ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು

    ಸತ್ಯಕಾಮ ವರದಿಗೆ ಸ್ಪಂದಿಸಿದ ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು

    ಕಲಬುರ್ಗಿ: ಇತ್ತೀಚೆಗೆ ಕಳೆದ ತಿಂಗಳು ದಿನಾಂಕ 30 ರಂದು ನಮ್ಮ ಪತ್ರಿಕೆಯಲ್ಲಿ ಅನಧಿಕೃತ ಕೇಬಲ್ ತೆರವು ಯಾವಾಗ ಎಂಬ ವರದಿಗೆ ಇಂದು ಮುಹೂರ್ತ ಬಂದಿದೆ ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಯಾದಗಿರಿ ಅವರು ಜಿಲ್ಲೆಯಲ್ಲಿ ಅನಧಿಕೃತ ಕೇಬಲ್ ಮಾಫಿಯಾ ಜಿಯೋ ಹೊರತುಪಡಿಸಿ ಇನ್ನುಳಿದ ಕೇಬಲ್ ಗಳು ಅನಧಿಕೃತ ಎಂದು ತಮ್ಮ ಉಪ ವಿಭಾಗವಾರು ವಿದ್ಯುತ್ ಕಂಬಗಳಿಗೆ ಅನಧಿಕೃತವಾಗಿ ಕೇಬಲ್ ಅಳವಡಿಸಿದವರಿಗೆ ಕಂಪನಿ ನಿಯಮ ಸಂಸಾರ ಸೂಕ್ತ ಕ್ರಮ ಕೈಗೊಂಡು ಹಾಗೂ ಇಲ್ಲಿವರೆಗೆ ವಿದ್ಯುತ್ ಕಂಬಗಳಿಗೆ ಕೇಬಲ್ ಅಳವಡಿಸಲು ಪಾವತಿಸಿದ ಶುಲ್ಕವನ್ನು ಮತ್ತು ಶುಲ್ಕದ ವಿವರ ತಮ್ಮ ಕಚೇರಿಗೆ ತಕ್ಷಣ ಸಲ್ಲಿಸಲು ಸೂಚಿಸುತ್ತಾರೆ.

    apvc-iconPost Views: 117