ಸತ್ಯಕಾಮ ವಾರ್ತೆ ಯಾದಗಿರಿ:
ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತಾವಾಗಿ ನ.2 ರಂದು ಬೆಳಗ್ಗೆ 10.30 ಕ್ಕೆ ಜಿಲ್ಲಾ ಕಸಾಪ ಸಭಾಂಗಣದಲ್ಲಿ 70 ನೇ ಕರ್ನಾಟಕ ರಾಜ್ಯೋತ್ಸವ ಮತ್ತು 2025 ನೇ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಷ್ಕತ ಶಿಕ್ಷಕರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ ತಿಳಿಸಿದ್ದಾರೆ.
ಶುಕ್ರವಾರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಶ್ವಕರ್ಮ ಏಕದಂಡಿಗಿ ಮಠದ ಕುಮಾರ ಸ್ವಾಮಿಗಳ ಸಾನಿಧ್ಯದಲ್ಲಿ ನಡೆಯುವ ಈ ಜೋಡು ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಚನ್ನಬಸಪ್ಪ ಎಸ್. ಮುದೋಳ್ ಉದ್ಘಾಟಿಸುವರು,ನಿವೃತ್ತ ಶಿಕ್ಷಕರಾದ ಸಕ್ರಪ್ಪ ಮಾಮನಿ, ಬಸವರಾಜ ಸಾಹು ಗೊಂದಡಗಿ, ಶಿವಪ್ಪ ದಾಸನಕೇರಿ, ಹಸನ್ ಸಾಬ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರೆಂದು ಹೊಟ್ಟಿ ಹೇಳಿದರು.
ತಮ್ಮ ಅಧ್ಯಕ್ಷತೆಯಲ್ಲಿ ಸಾಗಲಿರುವ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ವೆಂಕಟರಾವ್ ಕುಲಕರ್ಣಿ ಅವರು ಕರ್ನಾಟಕ ಏಕಿಕರಣ ಚಳುವಳಿ ಕುರಿತು ಹಾಗೂ ಕನ್ನಡ ಅಧ್ಯಾಪಕ ಡಾ. ಡಿ.ಎನ್. ಪಾಟೀಲ್ ಕರಡಕಲ್ ಅವರು ಉತ್ತಮ ಸಮಾಜ ನಿರ್ಮಿಸುವಲ್ಲಿ ಶಿಕ್ಷಕರ ಪಾತ್ರ ಕುರಿತು ಉಪನ್ಯಾಸ ನೀಡಲಿದ್ದಾರೆಂದರು.
ಶಹಾಪುರ ತಾಲೂಕು ಕಸಾಪ ಅಧ್ಯಕ್ಷ ಡಾ.ರವಿಂದ್ರ ಹೊಸಮನಿ, ಯಾದಗಿರಿ ತಾಲೂಕು ಕಸಾಪ ಅಧ್ಯಕ್ಷ ವೆಂಕಟೇಶ ಕಲಕಂಭ ಅವರು ಗೌರವ ಅತಿಥಿಗಳಾಗಿ ಭಾಗವಹಿಸುವರೆಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಡಾ.ಭೀಮರಾಯ ಲಿಂಗೇರಿ, ಗೌರವ ಕೋಶಾಧ್ಯಕ್ಷ ಬಸವರಾಜ ಅರಳಿ ಮೊಟನಳ್ಳಿ, ತಾಲೂಕು ಗೌರವ ಕಾರ್ಯದರ್ಶಿ ಮಹೇಶ ಪಾಟೀಲ್ ಕಿಲ್ಲನಕೇರಾ, ದೇವರಾಜಗೌಡ ಬೆಳಗೆರಿ, ಗೌರವ ಕೋಶಾಧ್ಯಕ್ಷ ವೀರಭದ್ರಪ್ಪ ಸ್ವಾಮಿ ಜಾಕಾ ಮಠ, ನಾಗಪ್ಪ ಸಜ್ಜನ್, ವೆಂಕಟೇಶ ಕಲಕಂಬ, ಸ್ವಾಮಿದೇವ ದಾಸನಕೇರಿ ಸೇರಿದಂತೆಯೇ ಇತರರಿದ್ದರು.
 Total Visits: 32
Total Visits: 32 All time total visits: 31798
All time total visits: 31798
 
			 
                                 
                              
         
        
