ಸತ್ಯಕಾಮ ವಾರ್ತೆ ಯಾದಗಿರಿ:
ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳು ಹಾಗೂ ಸದಸ್ಯರಿಂದ ಠಾಣಾಧಿಕಾರಿಗಳಿಗೆ, ಸಿಬ್ಬಂದಿಗೆ ಹಾಗೂ ಊರಿನ ಕೆಲ ಯುವಕರಿಗೆ ರಾಖಿಯನ್ನು ಕಟ್ಟುವ ಮುಖಾಂತರ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಠಾಣಾಧಿಕಾರಿ ಮಂಜನಗೌಡ ರಕ್ಷಾ ಬಂಧನ ಸ್ವೀಕರಿಸಿ ಮಾತನಾಡಿದ ಅವರು ಹಬ್ಬವು ಜಾತಿ,ಬೇಧ ಹೋಗಲಾಡಿಸಿ ಸಹೋದರತೆಯ ಭಾವವನ್ನು ಬಿಂಬಿಸುವುದಾಗಿದೆ. ನಮ್ಮ ದೇಶದಲ್ಲಿ ಸಂಬಂಧಗಳಿಗಿರುವ ಮಹತ್ವ ಜಗತ್ತಿನ ಯಾವ ದೇಶದಲ್ಲಿಯೂ ಕಂಡು ಬರುವುದಿಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನಿತಾ ಚೌವ್ಹಾಣ್ ಮಾತನಾಡಿ ಅಣ್ಣತಂಗಿಯರ ಹಬ್ಬ, ಅಕ್ಕತಮ್ಮಂದಿರ ಹಬ್ಬ. ಅಕ್ಕತಂಗಿಯರ ರಕ್ಷಣೆಗಾಗಿ ನಡುಕಟ್ಟಿ ನಿಲ್ಲುವ ಅಣ್ಣತಮ್ಮಂದಿರನ್ನು ಪ್ರೀತಿಯಿಂದ ಹರಸಿ ಹಾರೈಸುವ ಹಬ್ಬ. ದೇಶದಾದ್ಯಂತ ಈ ಹಬ್ಬವನ್ನು ಎಲ್ಲ ಅಕ್ಕತಂಗಿಯರು ತಮ್ಮ ಅಣ್ಣತಮ್ಮಂದಿರಿಗಾಗಿ ಆಚರಿಸುತ್ತಾರೆ. ಅಣ್ಣತಮ್ಮಂದಿರ ಕ್ಷೇಮ ಅವರ ಆರೋಗ್ಯ ಆಯಸ್ಸು ಚೆನ್ನಾಗಿರಲೆಂದು ಪ್ರಾರ್ಥಿಸುತ್ತಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯೆ ವೀಣಾ ಮೋದಿ,ಪ್ರಧಾನ ಕಾರ್ಯದರ್ಶಿ ರಮಾದೇವಿ ಕಾವಲಿ, ಕಾರ್ಯದರ್ಶಿ ಶಕುಂತಲಾ ಗುಜನೂರು,ಉಪಾಧ್ಯಕ್ಷೆ ಮಂಜುಳಾ ಕಟ್ಟಿಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು..

