ಸತ್ಯಕಾಮ ವಾರ್ತೆ ಕಲಬುರಗಿ:
ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರಕಾರ ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಅವಕಾಶ ಮಾಡಿಕೊಟ್ಟಿದೆ ಮಹಿಳೆಯರನ್ನು ಆರ್ಥಿಕ ಶೈಕ್ಷಣಿಕ ಶಕ್ತಿ ತುಂಬಿರುವ ಸರಕಾರದ ಗ್ಯಾರಂಟಿಗಳ ಪ್ರಚಾರ ಮಾಡಬೇಕು ಮತ್ತು ಪಕ್ಷವನ್ನು ಸಂಘಟಿಸಿ ಮತ್ತಷ್ಟು ಬಲಪಡಿಸಬೇಕೆಂದು ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸೌಮ್ಯರೆಡ್ಡಿ ಕರೆ ನೀಡಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು ಪಂಚಗ್ಯಾರAಟಿ ಸದುಪಯೋಗ ಪಡಿಸಿ ಕೊಂಡು ಮಹಿಳೆಯರು ಸ್ವಾಭಿಮಾನದ ಬದುಕು ರೂಪಿಸಿಕೊಳ್ಳಲು ಅನುಕೂಲ ಮಾಡಿದೆ ಇದರ ಪ್ರಚಾರ ಇನ್ನಷ್ಟು ಮಹಿಳೆಯರಿಗೆ ತಲುಪಿಸುವ ಕೆಲಸ ಮಹಿಳಾ ಕಾರ್ಯಕರ್ತರು ಮಾಡಬೇಕೆಂದರು.
ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿ, ಸಚಿವ ಪ್ರಿಯಾಂಕ್ ಖರ್ಗೆ, ಶಾಸಕ ಅಲ್ಲಮಪ್ರಭು ಪಾಟೀಲ, ಜಗದೇವ ಗುತ್ತೇದಾರ ನಿಕಟಪೂರ್ವ ಜಿಲ್ಲಾಧ್ಯಕ್ಷೆ ಲತಾ ರಾಠೋಡ ಅವರು ನೂತನ ಜಿಲ್ಲಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ರೇಣುಕಾ ಸಿಂಗೆ ಅವರಿಗೆ ಕಾಂಗ್ರೆಸ್ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆಯವರು, ಮಾತನಾಡಿ ಸ್ವಂತ ಬಲದಮೇಲೆ ಬಿಜೆಪಿ ಭದ್ರಕೋಟೆಯನ್ನು ಛಿದ್ರಮಾಡಿ ಶಾಸಕಿಯಾಗಿ ಆಯ್ಕೆಯಾದ ಬಲಿಷ್ಠ ನಾಯಕಿ ಸೌಮ್ಯರೆಡ್ಡಿ ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಸಂಘಟಿಸುತ್ತಾ ಕಾಂಗ್ರೆಸ್ ಸರಕಾರ ಮಹಿಳೆಯಿರಿಗೆ ನೀಡಿರುವ ಶಕ್ತಿ ಮತ್ತು ಭಕ್ತಿಯ ಬಲದಿಂದ ಪಕ್ಷ ಬಲಿಷ್ಠಗೊಳಿಸಬೇಕೆಂದು ಹೇಳಿದರು.
ಬಿಜೆಪಿ ಮನೆಯೊಡೆಯುವ ಕೆಲಸ ಮಾಡಿದರೆ ಕಾಂಗ್ರೆಸ್ ಮಹಿಳೆಯರಿಗೆ ಸೌಲಭ್ಯಗಳನ್ನು ಕೊಟ್ಟು ಮನೆ ನಡೆಸುವ ಮತ್ತು ಮನೆ ನಿರ್ವಹಣೆಗೆ ಕೆಲಸ ಮಾಡಿದೆ ಎಂದರು.
ಈ ಸಂದರ್ಭದಲ್ಲಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಶಾಸಕರಾದ ಅಲ್ಲಂಪ್ರಭು ಪಾಟೀಲ್, ತಿಪ್ಪಣ್ಣಪ್ಪ ಕಮಕನೂರ್, ಜಗದೇವ್ ಗುತ್ತೇದಾರ್ ಕಾಂಗ್ರೆಸ್ ಪಕ್ಷದ ಹಿರಿಯ ಕಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

