ಸತ್ಯಕಾಮ ವಾರ್ತೆ ಯಾದಗಿರಿ:
ಅರಕೇರಾ ಕೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಕಸ್ತೂರಿ ಭಾ ಗಾಂಧಿ ಬಾಲಕಿಯರ ವಸತಿ ನಿಲಯದಲ್ಲಿ ಶಾಲಾ ವಿದ್ಯಾರ್ಥಿನಿಯರಿಂದ ಶೌಚಾಲಯ ಸ್ವಚ್ಛತೆ ಮಾಡಿಸಿರುವ ಗಂಭೀರ ಘಟನೆ ಬೆಳಕಿಗೆ ಬಂದಿದೆ.
ಸ್ಥಳೀಯರೊಬ್ಬರು ಈ ದೃಶ್ಯಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಶಾಲಾ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಇಂಥ ಕಾರ್ಯ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಶೌಚಾಲಯ ತೊಳೆಸುವ ಕೆಲಸ ಮುಖ್ಯೋಪಾಧ್ಯಾಯ/ಶಿಕ್ಷಕರ ಜವಾಬ್ದಾರಿ, ಮಕ್ಕಳಿಂದ ತೊಳೆಯಿಸುವುದು ಮಾನವೀಯತೆಗೂ ವ್ಯತಿರಿಕ್ತ, ಮಕ್ಕಳಿಗೆ ಶಿಕ್ಷಣ ನೀಡಬೇಕೋ ಹೊರತು ಶೌಚಾಲಯ ತೊಳೆಯಲು ಒತ್ತಾಯಿಸಬಾರದು. ಇದು ನಮ್ಮ ಶಿಕ್ಷಣ ವ್ಯವಸ್ಥೆಗೆ ಕಳಂಕ. ಇಂತಹ ದೃಶ್ಯಗಳು ಸಾರ್ವಜನಿಕವಾಗಿ ಹರಡಿರುವುದು ಕೇವಲ ಸತ್ಯವನ್ನು ಬಿಚ್ಚಿಟ್ಟಿಲ್ಲ, ಶಿಕ್ಷಣ ವ್ಯವಸ್ಥೆಯ ನಿಷ್ಕ್ರಿಯತೆಯನ್ನು ಬೆಳಗಿಸಿದೆ. ಕೂಡಲೇ ಸಂಬಂಧಿತ ಅಧಿಕಾರಿಗಳು ತಕ್ಷಣ ತನಿಖೆ ನಡೆಸಿ, ತಪಿತಸ್ಥರ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
- Advertisement -

