ಕಲಬುರ್ಗಿ:26 ಹವಾಮಾನ ಇಲಾಖೆಯ ವರದಿನ್ವಯ ಕಲಬುರ್ಗಿ ಜಿಲ್ಲೆಯಲ್ಲಿ ಭಾರಿ ಮಳೆ ಯಾಗುವ ಸಾಧ್ಯತೆ ಇರುವ ಪ್ರಯುಕ್ತ ಹವಾಮಾನ ಇಲಾಖೆಯಿಂದ ಕಲಬುರ್ಗಿ ಜಿಲ್ಲೆಗೆ Red alert ಎಂದು ಉಲ್ಲೇಖಿತ ಮೂಲಕ ಮುನ್ಸೂಚನೆ ನೀಡಲಾಗಿದೆ.
ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿರುವ ಕಾರಣ ಭಾರಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂದು ( ಜುಲೈ 26) ಬುಧವಾರ ದಂದು ಕಲಬುರಗಿ ಜಿಲ್ಲೆಯ ಎಲ್ಲಾ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ವಿಪತ್ತು ನಿರ್ವಹಣಾ ಕಾಯ್ದೆ 2005 ಕಲಂ 34( ಎಂ) ರ ಅಡಿಯಲ್ಲಿ ಪ್ರದತ್ತ ವಾದ ಅಧಿಕಾರವನ್ನು ಚಲಾಯಿಸಿ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

