amp-web-push-widget button.amp-subscribe { display: inline-flex; align-items: center; border-radius: 5px; border: 0; box-sizing: border-box; margin: 0; padding: 10px 15px; cursor: pointer; outline: none; font-size: 15px; font-weight: 500; background: #4A90E2; margin-top: 7px; color: white; box-shadow: 0 1px 1px 0 rgba(0, 0, 0, 0.5); -webkit-tap-highlight-color: rgba(0, 0, 0, 0); } .web-stories-singleton.alignleft,.web-stories-singleton.alignnone,.web-stories-singleton.alignright{display:block;width:100%}.web-stories-singleton.aligncenter{text-align:initial}.web-stories-singleton .wp-block-embed__wrapper{position:relative}.web-stories-singleton.alignleft .wp-block-embed__wrapper{margin-right:auto}.web-stories-singleton.alignright .wp-block-embed__wrapper{margin-left:auto}.web-stories-singleton.alignnone .wp-block-embed__wrapper{max-width:var(--width)}.web-stories-singleton.aligncenter .wp-block-embed__wrapper{margin-left:auto;margin-right:auto;max-width:var(--width)}.web-stories-singleton-poster{aspect-ratio:var(--aspect-ratio);border-radius:8px;cursor:pointer;overflow:hidden;position:relative}.web-stories-singleton-poster a{aspect-ratio:var(--aspect-ratio);display:block;margin:0}.web-stories-singleton-poster .web-stories-singleton-poster-placeholder{box-sizing:border-box}.web-stories-singleton-poster .web-stories-singleton-poster-placeholder a,.web-stories-singleton-poster .web-stories-singleton-poster-placeholder span{border:0;clip:rect(1px,1px,1px,1px);-webkit-clip-path:inset(50%);clip-path:inset(50%);height:1px;margin:-1px;overflow:hidden;padding:0;position:absolute;width:1px;word-wrap:normal;word-break:normal}.web-stories-singleton-poster img{box-sizing:border-box;height:100%;object-fit:cover;position:absolute;width:100%}.web-stories-singleton-poster:after{background:linear-gradient(180deg,hsla(0,0%,100%,0),rgba(0,0,0,.8));content:"";display:block;height:100%;left:0;pointer-events:none;position:absolute;top:0;width:100%}.web-stories-singleton .web-stories-singleton-overlay{bottom:0;color:var(--ws-overlay-text-color);line-height:var(--ws-overlay-text-lh);padding:10px;position:absolute;z-index:1}.web-stories-embed.alignleft,.web-stories-embed.alignnone,.web-stories-embed.alignright{display:block;width:100%}.web-stories-embed.aligncenter{text-align:initial}.web-stories-embed .wp-block-embed__wrapper{position:relative}.web-stories-embed.alignleft .wp-block-embed__wrapper{margin-right:auto}.web-stories-embed.alignright .wp-block-embed__wrapper{margin-left:auto}.web-stories-embed.alignnone .wp-block-embed__wrapper{max-width:var(--width)}.web-stories-embed.aligncenter .wp-block-embed__wrapper{margin-left:auto;margin-right:auto;max-width:var(--width)}.web-stories-embed:not(.web-stories-embed-amp) .wp-block-embed__wrapper{aspect-ratio:var(--aspect-ratio)}.web-stories-embed:not(.web-stories-embed-amp) .wp-block-embed__wrapper amp-story-player{bottom:0;height:100%;left:0;position:absolute;right:0;top:0;width:100%}.block-editor-block-inspector .web-stories-embed-poster-remove{margin-left:12px} .amp-logo amp-img{width:190px} .amp-menu input{display:none;}.amp-menu li.menu-item-has-children ul{display:none;}.amp-menu li{position:relative;display:block;}.amp-menu > li a{display:block;} /* Inline styles */ p.acss0786f{text-align:left;} .icon-widgets:before {content: "\e1bd";}.icon-search:before {content: "\e8b6";}.icon-shopping-cart:after {content: "\e8cc";}
ಯಾದಗಿರಿ: ಹಿರಿಯರಿಂದಲೇ ಎಲ್ಲರೂ ಎನ್ನುವ ಸತ್ಯ ಅರಿತು, ಪ್ರತಿಯೊಬ್ಬರು ಹಿರಿಯರನ್ನು ಗೌರವಿಸಬೇಕೆಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲಿಕರಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂದು ಹಿರಿಯರನ್ನು ಕಡೆಗಣಿಸುವವರ ಸಂಖ್ಯೆ ಅಧಿಕವಾಗಿದೆ. ಅವರು ನಮ್ಮ ತಂದೆ,ತಾಯಿ, ಅಜ್ಜ,ಅಜ್ಜಿ ಅಲ್ಲದೆ ಪ್ರತಿ ಮನೆಯ ಹಿರಿಯ ಜೀವಿಗಳಾಗಿದ್ದಾರೆ. ಅಂತಹ ಅಮೂಲ್ಯ ಜೀವಗಳಿಗೆ ನಾವೆಲ್ಲರೂ ರಕ್ಷಕರಾಗಬೇಕೆಂದು ಶಾಸಕರು ಮಾರ್ಮಿಕವಾಗಿ ನುಡಿದರು.
ಹಿರಿಯರು ಇದ್ದ ಮನೆ ತುಂಬಿದ ಕೊಡವಿದ್ದಂತೇ, ಅವರ ಮಾರ್ಗದರ್ಶನ, ಸಲಹೆ ಕಿರಿಯರಿಗೆ ಸದಾ ಬೇಕಾಗುತ್ತದೆ. ದಾರಿ ತಪ್ಪದಂತೆಯೇ ನಮ್ಮನ್ನು ತಿದ್ದಿ,ತೀಡಿ ಸರಿ ದಾರಿಯಲ್ಲಿ ನಡೆಯುವಂತಹ ಮಾತುಗಳು ಹಿರಿಯರು ಹೇಳುತ್ತಾರೆ, ಆದರೇ ಅದನ್ನು ಪಾಸಿಟಿವ್ ತೆಗೆದುಕೊಳ್ಳದೇ ನಿರ್ಲಕ್ಷ್ಯ ಮಾಡುವುದೇ ಹೆಚ್ಚಾಗಿದೆ. ಇದು ನಿಲ್ಲಬೇಕು, ಅವರೆಂದಿಗೂ ನಮ್ಮ ಜೊತೆಯಲ್ಲಿಯೇ ಇರುವಂತಹ ವಾತಾವರಣ ಮೂಡಿಸಬೇಕೆಂದು ಪ್ರಸಕ್ತ ಸನ್ನಿವೇಶವನ್ನು ಶಾಸಕ ಪಾಟೀಲ್ ವಿವರಿಸಿದರು.
ಹಿರಿಯರೇ ಆಸ್ತಿ, ಆದರೇ ಇಂದು ಬಹಳಷ್ಟು ಜನರು ಅವರನ್ನು ಸಾಕಲು ಹಿಂದೆ,ಮುಂದೆ ನೋಡಿ ಅನಾಥಾಶ್ರಮ, ಹಿರಿಯ ಮನೆಗಳಿಗೆ ಬಿಟ್ಟು ಬರುವ ಮೂಲಕ ಜೀವಂತವಿದ್ದಾಗಲೇ ಒಂಟಿ ಮಾಡಿ ನೋವು ಕೊಡುತ್ತಿದ್ದೇವೆ. ಹೀಗೆ ಮಾಡುವವರು ಒಮ್ಮೆ ಆಲೋಚನೆ ಮಾಡಬೇಕು, ಮುಂದೆ ನಾವೂ ಕೂಡಾ ಹಿರಿಯರಾಗುತ್ತೇವೆ, ಆಗ ನಮ್ಮ ಮಕ್ಕಳು ನಮ್ಮನ್ನು ಅನಾಥರಾಗಿ ಮಾಡಿದರೇ ಪರಸ್ಥಿತಿ ಏನಾಗುತ್ತದೆ ಎಂಬುವುದನ್ನು ತಿಳಿದುಕೊಂಡು ಗೌರವದಿಂದ ನಡೆಸಿಕೊಳ್ಳಬೇಕೆಂದು ಶಾಸಕ ಚನ್ನಾರಡ್ಡಿ ಮನಮುಟ್ಟುವಂತೆಯೇ ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
ಜಿಲ್ಲಾ ಅಧಿಕಾರಿ ಶರಣಪ್ಪ ಪಾಟೀಲ್ ಮಾತನಾಡಿ, ಸರ್ಕಾರ ಹಿರಿಯ ನಾಗರಿಕರಿಗೆ ನೀಡುತ್ತಿರುವ ಸೌಲಭ್ಯಗಳ ಬಗ್ಗೆ ವಿವರಿಸಿದರು.
ಹಿರಿಯರಾದ ಸಿ.ಎಮ್ ಪಟ್ಟೇದಾರ ಮಾತನಾಡಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಹಿರಿಯರಾದ ನಿವೃತ್ತ ಎಎಸ್ ಐ ಸಾಮೂವೆಲ್, ಕಂದಾಯ ಇಲಾಖೆ ಲಕ್ಷ್ಮಣ ದೇಗಲಮಡಿ, ನಿರಾವರಿ ಇಲಾಖೆ ಮಲ್ಲಿನಾಥ ಮಲಗೊಂಡ, ನಿವೃತ್ತ ಸಹಾಯಕ ಕೃಷಿ ಅಧಿಕಾರಿ ವಾಹೀದ್ ಮಿಯಾ, ಶಿಕ್ಷಣ ಕ್ಷೇತ್ರ ಚಂದ್ರಾಮಪ್ಪ ಬಳಿಚಕ್ರ, ಸಮಾಜ ಸೇವಕ ಸಭಾಪತಿ ಮಹಾದೇವಪ್ಪ ಕಡ್ಡಿ ಅಬ್ಬೆತುಮಕೂರು, ಸಮಾಜ ಸೇವೆ ಶರಣಪ್ಪ ಜಾಕಾ, ನಿವೃತ್ತ ಶಿಕ್ಷಕರಾದ ಸಿದ್ದಪ್ಪ ಬಬಲಾದ, ಮಾಜಿ ನಗರಸಭೆ ಸದಸ್ಯರಾದ ಸಂಗಣ್ಣ ಬುಕಿಸ್ಟಗಾರ ಶಹಾಪುರ, ಸಮಾಜ ಸೇವೆ ನಿರ್ಮಲ್ ಕುಮಾರ ಜೈನ್, ಸಮಾಜ ಸೇವಕರಾದ ಬಿ.ಸಿ ಪಾಟೀಲ್, ನಿವೃತ್ತ ಶಿರಸ್ತೆದಾರ ನ್ಯಾಯಾಂಗ ಇಲಾಖೆ ಭೀಮರಾಯ, ಸಮಾಜ ಸೇವಕ ಮಾಣಿಕಮ್ಮ ಸೋಮಯ್ಯ ಸ್ವಾಮೀ, ಸಮಾಜ ಸೇವಕ ಶರಣಪ್ಪ ಆರ್ ಬಡಿಗೇರ್, ಸಮಾಜ ಸೇವಕ ಯಂಕೋಬಾ ಚಿಂತನಳ್ಳಿ ಅವರಿಗೆ ಇದೆ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಆಧ್ಯಕ್ಷರಾದ ಬಾಬುರಾವ ಕಾಡ್ಲೂರ್, ನಗರಠಾಣೆ ಪಿಎಸ್ ಐ ಮಂಜೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ತಿಪ್ಪಣ್ಣ ಶಿರಸಗಿ, ಹಿರಿಯರಾದ ಚನ್ನಪ್ಪಗೌಡ ಮೋಸಂಬಿ, ಜಿಲ್ಲಾ ನಿವೃತ್ತ ಸಂಘದ ಬಂಡೆಪ್ಪ ಆಕಳ, ಸಿ.ಎಮ್ ಪಟೇದಾರ್, ಸರ್ಕಾರಿ ಪದವಿ ಮಹಾವಿದ್ಯಾಲಯ ಪ್ರಾಂಶುಪಾಲರಾದ ಡಾ. ಸುಭಾಶ್ಚಂದ್ರ ಕೌಲಗಿ ಇದ್ದರು.
ಉದ್ಯೋಗ ಜೀವನದಲ್ಲಿ ಪ್ರತಿಯೊಬ್ಬ ನೌಕರನಿಗೂ ಒಂದು ಗುರಿ ಇರುತ್ತದೆ ಭದ್ರ ಭವಿಷ್ಯವನ್ನು ನಿರ್ಮಿಸುವುದು. ವರ್ಷಗಳ ಕಾಲ ನಿಷ್ಠೆಯಿಂದ, ಪರಿಶ್ರಮದಿಂದ ಕೆಲಸ…
ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ ವೈರಲ್ ಆಗಿರುವ ಒಂದು ವಿಡಿಯೋ ತುಣುಕಿನಿಂದ ಕಾಡಿನ ಕಳ್ಳ ವೀರಪ್ಪನ್ ಅವರ ಪುತ್ರಿಯರು ಮತ್ತೆ ಸುದ್ದಿಯಲ್ಲಿದ್ದಾರೆ. ಅಂಕಣಕಾರ…
ಸತ್ಯಕಾಮ ವಾರ್ತೆ ಮುದ್ದೇಬಿಹಾಳ; ಮುದ್ದೇಬಿಹಾಳ ಮತಕ್ಷೇತ್ರದ ಶಾಸಕರು ಸಿ.ಎಸ್ ನಾಡಗೌಡ ಅವರಿಗೆ ಬರುವ ಪುನರ್ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಕೇಳಬಾರದು…
ಶತಮಾನಗಳಿಂದ ಕೋಟ್ಯಂತರ ಭಕ್ತರ ಕನಸಾಗಿದ್ದ ಅಯೋಧ್ಯೆಯ ಶ್ರೀರಾಮ ಮಂದಿರ ಇದೀಗ ಸಂಪೂರ್ಣ ರೂಪ ಪಡೆದುಕೊಂಡಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ…
ಸಿನಿಮಾ ಲೋಕದಲ್ಲಿ ಜನಪ್ರಿಯತೆ ಪಡೆದವರು ಎದುರಿಸಬೇಕಾದ ದೊಡ್ಡ ಸವಾಲುಗಳಲ್ಲಿ ಒಂದು ಎಂದರೆ ತಮ್ಮ ಹೆಸರು ಮತ್ತು ಮುಖದ ದುರುಪಯೋಗ. ಇತ್ತೀಚಿನ…
ಸತ್ಯಕಾಮ ವಾರ್ತೆ ಯಾದಗಿರಿ: ಆಸ್ಪತ್ರೆಗೆ ಬರುವ ಬಡರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವ ಮೂಲಕ ತಮ್ಮ ಸೇವೆಯನ್ನು ಸಾರ್ಥಕ ಮಾಡಿಕೊಳ್ಳಬೇಕೆಂದು ಶಾಸಕ ಶರಣಗೌಡ…