ಸತ್ಯಕಾಮ ವಾರ್ತೆ ಗುರುಮಠಕಲ್ :
ಹಿಂದುಳಿದ ವರ್ಗಗಳ ಆಯೋಗದಿಂದ ಸೆ.22ರಿಂದ ನಡೆಸಲಾಗುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಮಾದಿಗ ಸಮುದಾಯದವರು ತಪ್ಪದೆ ಭಾಗವಹಿಸಿ, ಜಾತಿ ಮತ್ತು ಉಪಜಾತಿ ಕಾಲಂನಲ್ಲಿ ಮಾದಿಗ ಎಂದೇ ನಮೂದಿಸಬೇಕು, ಕೋಡ್ 61– ಮಾದಿಗ’ ಎಂದು ತಾಲೂಕ ಮಾದಿಗ ದಂಡೋರ ಕಾರ್ಯದರ್ಶಿ ನೀಲೇಶ್ ಕೊಯಿನಿ ಹೇಳಿದರು.
ಈ ಮೂಲಕ ನಮ್ಮ ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚು ಮೀಸಲಾತಿ ಪಡೆಯುವ ಪ್ರಯತ್ನ ಮಾಡಬೇಕಿದೆ. ಜನಸಂಖ್ಯೆಯಲ್ಲಿ ಕಡಿಮೆ ಇರುವವರು ಅಭಿವೃದ್ಧಿಯಲ್ಲಿ ಮುಂದಿದ್ದಾರೆ. ಆದರೆ, ಜನಸಂಖ್ಯೆಯಲ್ಲಿ ಮುಂದಿರುವ ನಾವು ಅಭಿವೃದ್ಧಿಯಲ್ಲಿ ಹಿಂದುಳಿದಿದ್ದೇವೆ.
ಸರ್ಕಾರದ ಮೂರೂ ಆಯೋಗಗಳು ಮಾದಿಗರ ಸಂಖ್ಯೆ ಹೆಚ್ಚಿದೆ, ಆದರೆ ಹಿಂದುಳಿದಿದ್ದಾರೆ ಎಂದು ಹೇಳಿವೆ. ಈಗ ಒಳ ಮೀಸಲಾತಿ ಜಾರಿಯಾಗಿದೆ. ಆದರೂ, ನಮ್ಮ ಶಕ್ತಿಯನ್ನು ಕುಗ್ಗಿಸುವ ಪ್ರಯತ್ನ ನಡೆದಿದೆ. ಈ ಬಗ್ಗೆ ಎಲ್ಲರೂ ಎಚ್ಚೆತ್ತುಕೊಂಡು, ಸಮೀಕ್ಷೆಯಲ್ಲಿ ಎಲ್ಲರೂ ಭಾಗವಹಿಸುವಂತೆ ಸಮುದಾಯದ ಜಾಗೃತರಾಗಿ ಎಂದರು.

